ಸಾಂದರ್ಭಿಕ ಚಿತ್ರ 
ರಾಜ್ಯ

ಪ್ರಧಾನಿ ಮೋದಿ ತೆರಳುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆ ಪ್ರಕರಣ: ಆರು ಮಂದಿ ಪೊಲೀಸರ ಅಮಾನತು

ಕಗ್ಗಲಿಪುರ ಪೊಲೀಸ್ ಠಾಣೆ ವ್ಯಾಪ್ತಿಯ ತಾತಗುಣಿ ಬಳಿ, ಪ್ರಧಾನಿ ಮೋದಿ ತೆರಳುವ ಮಾರ್ಗದ ಸ್ವಲ್ಪ ದೂರದಲ್ಲಿ, ತಪಾಸಣೆಯ ಸಮಯದಲ್ಲಿ ಸರ್ಕ್ಯೂಟ್ ಮತ್ತು ಟೈಮರ್ ಹೊಂದಿರುವ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದ್ದವು.

ಬೆಂಗಳೂರು: ಮೇ 10ರಂದು ಪ್ರಧಾನಿ ನರೇಂದ್ರ ಮೋದಿ ನಗರದ ಹೊರವಲಯದಲ್ಲಿರುವ ಆರ್ಟ್ ಆಫ್ ಲಿವಿಂಗ್ ಕೇಂದ್ರಕ್ಕೆ ಭೇಟಿ ನೀಡುವುದಕ್ಕೂ ಮುನ್ನ ಆ ಮಾರ್ಗದಲ್ಲಿ ಎರಡು ಜಿಲೆಟಿನ್ ಕಡ್ಡಿಗಳು ಪತ್ತೆಯಾದ ನಂತರ ಕರ್ತವ್ಯ ಲೋಪದ ಆರೋಪದ ಮೇಲೆ ಆರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.

ಓರ್ವ ಸಬ್ ಇನ್ಸ್‌ಪೆಕ್ಟರ್, ಒರ್ವ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಮತ್ತು ನಾಲ್ವರು ಕಾನ್‌ಸ್ಟೆಬಲ್‌ಗಳನ್ನು ಬೆಂಗಳೂರು ದಕ್ಷಿಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ಶ್ರೀನಿವಾಸ್ ಗೌಡ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಕಗ್ಗಲಿಪುರ ಪೊಲೀಸ್ ಠಾಣೆ ವ್ಯಾಪ್ತಿಯ ತಾತಗುಣಿ ಬಳಿ, ಪ್ರಧಾನಿ ಮೋದಿ ತೆರಳುವ ಮಾರ್ಗದ ಸ್ವಲ್ಪ ದೂರದಲ್ಲಿ, ನಿಯಮಿತ ಭದ್ರತಾ ತಪಾಸಣೆಯ ಸಮಯದಲ್ಲಿ ಸರ್ಕ್ಯೂಟ್ ಮತ್ತು ಟೈಮರ್ ಹೊಂದಿರುವ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಮಾಹಿತಿಯ ನಂತರ, ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಕಾರ್ಯಪ್ರವೃತ್ತವಾಗಿ ತನಿಖೆಯನ್ನು ಕೈಗೆತ್ತಿಕೊಂಡಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೇಕೆದಾಟು ಯೋಜನೆಗೆ ವಿಜಯ್ ಅಡ್ಡಗಾಲು: ಕಾನೂನು ಕ್ರಮ ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ತಮಿಳುನಾಡು ಸಿಎಂ ಸೂಚನೆ

ತುರ್ತು ಆಂಬ್ಯುಲೆನ್ಸ್ ಸೇವೆಗಳಿಗಾಗಿ ಕೇಂದ್ರೀಕೃತ ಕಮಾಂಡ್ ಮತ್ತು ನಿಯಂತ್ರಣ ಕೇಂದ್ರ ಪ್ರಾರಂಭ

'ಮೆಹಂಗೈ ಮಾನವ್ ಮತ್ತೆ ದಾಳಿ': ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರುದ್ಧ ರಾಹುಲ್ ವಾಗ್ದಾಳಿ!

ತಮಿಳುನಾಡು: AIADMK ಮೂವರು ಶಾಸಕರು ರಾಜೀನಾಮೆ, ಟಿವಿಕೆಗೆ ಸೇರ್ಪೆಡೆ, ಪಳನಿಸ್ವಾಮಿಗೆ ಮತ್ತೊಂದು ಹೊಡೆತ!

ಅಂಬೇನಾಲಿ ಘಾಟ್​ನಲ್ಲಿ ಭಯಾನಕ ಅಪಘಾತ: ಸಾವಿರ ಅಡಿ ಆಳದ ಪ್ರಪಾತಕ್ಕೆ ಬಿದ್ದ SUV ಕಾರು; 8 ಯುವಕರು ಸಾವು!

SCROLL FOR NEXT