ಸಾಂದರ್ಭಿಕ ಚಿತ್ರ 
ರಾಜ್ಯ

ಬೆಳಗಾವಿ: ಬೈಕ್'ಗೆ ಗೂಡ್ಸ್ ಆಟೋ ಡಿಕ್ಕಿ; 6 ತಿಂಗಳ ಮಗು ಸೇರಿ ಒಂದೇ ಕುಟುಂಬದ ಮೂವರು ದುರ್ಮರಣ

ಪಟ್ಟಣದ ಹೊರವಲಯದ ರಸ್ತೆಯಲ್ಲಿ ಎದುರಿನಿಂದ ಅತಿ ವೇಗವಾಗಿ ಮತ್ತು ರಾಂಗ್ ಸೈಡ್‌ನಲ್ಲಿ ಬಂದ ಗೂಡ್ಸ್ ಆಟೋ ಚಾಲಕ ಬೈಕ್‌ಗೆ ನೇರವಾಗಿ ಗುದ್ದಿದ್ದಾನೆ.

ಬೆಳಗಾವಿ: ಗೂಡ್ಸ್ ಆಟೋ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 6 ತಿಂಗಳ ಮಗು ಸೇರಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆಯೊಂದು ಬೆಳಗಾವಿ ಜಿಲ್ಲೆಯ ರಾಯಬಾಗ ರೈಲು ನಿಲ್ದಾಣದ ಬಳಿ ಮಂಗಳವಾರ ನಡೆದಿದೆ.

ಮೃತರನ್ನು ಮಹಾಂತೇಶ್ ಮಾನೆ, ಅವರ ಪತ್ನಿ ಸಾಕ್ಷಿ ಮಾನೆ ಹಾಗೂ 6 ತಿಂಗಳ ಮಗು ಎಂದು ಗುರುತಿಸಲಾಗಿದೆ.

ಮಹಾಂತೇಶ್ ಮಾನೆ ಕುಟುಂಬದೊಂದಿಗೆ ಬೊಮ್ಮನಾಳ ಗ್ರಾಮದಿಂದ ಬೈಕ್‌ನಲ್ಲಿ ರಾಯಬಾಗ ಪಟ್ಟಣಕ್ಕೆ ಬರುತ್ತಿದ್ದಾಗ ಈ ದುರಂತ ಸಂಭವಿಸಿದೆ.

ಪಟ್ಟಣದ ಹೊರವಲಯದ ರಸ್ತೆಯಲ್ಲಿ ಎದುರಿನಿಂದ ಅತಿ ವೇಗವಾಗಿ ಮತ್ತು ರಾಂಗ್ ಸೈಡ್‌ನಲ್ಲಿ ಬಂದ ಗೂಡ್ಸ್ ಆಟೋ ಚಾಲಕ ಬೈಕ್‌ಗೆ ನೇರವಾಗಿ ಗುದ್ದಿದ್ದಾನೆ. ಡಿಕ್ಕಿಯ ರಭಸಕ್ಕೆ ದಂಪತಿ ಹಾಗೂ ಮಗು ರಸ್ತೆಗೆ ಎಸೆಯಲ್ಪಟ್ಟು ತೀವ್ರ ರಕ್ತಸ್ರಾವದಿಂದ ಕೊನೆಯುಸಿರೆಳೆದಿದ್ದಾರೆ. ಅಪಘಾತ ಸಂಭವಿಸುತ್ತಿದ್ದಂತೆ ಆಟೋ ಚಾಲಕ ವಾಹನವನ್ನು ಬಿಟ್ಟು ಸ್ಥಳದಿಂದ ಕಾಲ್ಕಿತ್ತಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ರಾಯಬಾಗ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ರಾಯಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತಲೆಮರೆಸಿಕೊಂಡಿರುವ ಆಟೋ ಚಾಲಕನಿಗಾಗಿ ಹುಡುಕಾಟ ಆರಂಭಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

2029ರ ಲೋಕಸಭೆ ಚುನಾವಣೆಯಿಂದಲೇ 'ಒಂದು ರಾಷ್ಟ್ರ–ಒಂದು ಚುನಾವಣೆ' ಜಾರಿ ಸಾಧ್ಯತೆ: JPC ಮುಖ್ಯಸ್ಥ ಪಿ.ಪಿ. ಚೌಧರಿ

'ಯಾವ ಕ್ಷಣದಲ್ಲಾದರೂ ಕುಸಿಯಬಹುದು': Kerala Landslide ಕುರಿತು ಮೊದಲೇ ಎಚ್ಚರಿಕೆ ನೀಡಿದ್ದ ಗುತ್ತಿಗೆದಾರರ ವರದಿ

ಮುಂಬೈ ಮುಂಗಾರು ಅಬ್ಬರ: ಜಲಾವೃತ ರೈಲು ಹಳಿಗಳಲ್ಲಿ ಮೀನುಗಳ ಸ್ವಚ್ಛಂದ ಈಜಾಟ, Video Viral

ರಾಜ್ಯ ಸರ್ಕಾರಕ್ಕೆ ಶಾಶ್ವತ ನಿವಾಸ ಪ್ರಮಾಣ ಪತ್ರ ಕೊಡೋ ಅಧಿಕಾರವೇ ಇಲ್ಲ-ಛಲವಾದಿ ನಾರಾಯಣ ಸ್ವಾಮಿ ಕಿಡಿ!

SIR ಕಂಪ್ಯೂಟರೀಕರಣ, ಚಿಕ್ಕಬಳ್ಳಾಪುರ ಅಪರೂಪದ ಸಾಧನೆ, ರಾಜ್ಯದಲ್ಲೇ ಮೊದಲ ಸ್ಥಾನ!