ಕೊನೆ ಕ್ಷಣದಲ್ಲಿ ಜಾತಿಗಣತಿ ವರದಿ ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ 
ರಾಜ್ಯ

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಕೊನೆ ಕ್ಷಣದಲ್ಲಿ ಜಾತಿಗಣತಿ ವರದಿ ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ

ಇಂದು ಸಂಜೆ ವಿಧಾನಸೌಧಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರು, ತಮ್ಮ ಕಚೇರಿಯಲ್ಲಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ಆರ್ ನಾಯ್ಕ್ ಅವರಿಂದ ಜಾತಿಗಣತಿ ವರದಿ ಸ್ವೀಕರಿಸಿದರು.

ಬೆಂಗಳೂರು: ಮತ್ತೊಂದು ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಸಂಜೆ ತಮ್ಮ ಅಧಿಕಾರವಧಿಯ ಕೊನೆ ಕ್ಷಣದಲ್ಲಿ ಜಾತಿಗಣತಿ ಎಂದು ಕರೆಯಲಾಗುವ 'ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷಾ' ವರದಿಯನ್ನು ಸ್ವೀಕರಿಸಿದರು.

ಇಂದು ಸಂಜೆ ವಿಧಾನಸೌಧಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರು, ತಮ್ಮ ಕಚೇರಿಯಲ್ಲಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ಆರ್ ನಾಯ್ಕ್ ಅವರಿಂದ ಜಾತಿಗಣತಿ ವರದಿ ಸ್ವೀಕರಿಸಿದರು. ಈ ವೇಳೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಆಯೋಗದ ಸದಸ್ಯ ಕಾರ್ಯದರ್ಶಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಇದಕ್ಕೂ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದ ನಾಯಕ್, ವರದಿ ಸಲ್ಲಿಕೆಗೂ ರಾಜ್ಯದ ರಾಜಕೀಯ ಬೆಳವಣಿಗೆಗೂ ಯಾವುದೇ ಸಂಬಂಧವಿಲ್ಲ. ಏಕೆಂದರೆ ಈಗಾಗಲೇ ನಾವು ವರದಿಯನ್ನು ಸಲ್ಲಿಸಲು ನಿರ್ಧರಿಸಿದ್ದೇವು ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ರಾಜೀನಾಮೆ ನೀಡುವ ಸಾಧ್ಯತೆ ಇದ್ದು, ತಾವು ಅಧಿಕಾರದಿಂದ ನಿರ್ಗಮಿಸುವ ಮುನ್ನ ತಮ್ಮ ಮಹತ್ವಾಕಾಂಕ್ಷೆಯ ಜಾತಿಗಣತಿ ವರದಿಯನ್ನು ಸ್ವೀಕರಿಸಿದ್ದಾರೆ.

"ನಾವು ಸಮೀಕ್ಷೆಯನ್ನು ವಿಶ್ಲೇಷಿಸಿ ತಜ್ಞರ ಸಹಾಯದಿಂದ ವರದಿಯನ್ನು ಸಿದ್ಧಪಡಿಸುತ್ತಿದ್ದೇವೆ. ವರದಿಯು ಸುಮಾರು ಒಂದು ತಿಂಗಳ ಹಿಂದೆಯೇ ಸಿದ್ಧವಾಗಿತ್ತು. ಆದರೆ ನಾನು ಅದನ್ನು ಇಂಗ್ಲಿಷ್‌ನಲ್ಲಿ ಸಿದ್ಧಪಡಿಸಿದ್ದೆ. ಸರ್ಕಾರದ ಅಧಿಕೃತ ಭಾಷೆ ಕನ್ನಡವಾಗಿರುವುದರಿಂದ, ಅದನ್ನು ಅನುವಾದಿಸಬೇಕಾಗಿತ್ತು. ಅದಕ್ಕೆ ಸಮಯ ಹಿಡಿಯಿತು" ಎಂದು ಆಯೋಗದ ಅಧ್ಯಕ್ಷರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ತಮಿಳುನಾಡು ಸಿಎಂ ವಿಜಯ್- ಪ್ರಧಾನಿ ಭೇಟಿ: 2 ದೊಡ್ಡ ಬೇಡಿಕೆ; ಇಲ್ಲಿದೆ ವಿವರ

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಅಸ್ಸಾಂ ವಿಧಾನಸಭೆಯಲ್ಲಿ ಹೈಡ್ರಾಮ: ವಿಪಕ್ಷಗಳ ಪ್ರತಿಭಟನೆ ನಡುವೆಯೇ UCC ಮಸೂದೆ ಅಂಗೀಕಾರ! ಬಹು ಪತ್ನಿತ್ವಕ್ಕೆ ಜೈಲು ಶಿಕ್ಷೆ

ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಇಲ್ಲ ಪರಿಣಾಮ ಎದುರಿಸಬೇಕಾಗುತ್ತದೆ: ಕಾಂಗ್ರೆಸ್ ಗೆ 'ಅಹಿಂದ' ಎಚ್ಚರಿಕೆ

SCROLL FOR NEXT