ರೋಷನ್ ಬಾಲಕೃಷ್ಣ 
ರಾಜ್ಯ

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

ರೋಷನ್ ಐಟಿ ಕಂಪನಿಯ ಉದ್ಯೋಗಿಯಾಗಿದ್ದು, ಮೈಸೂರಿನಲ್ಲಿರುವ ತಮ್ಮ ಕುಟುಂಬದ ಕಾಫಿ ತೋಟವನ್ನೂ ನಿರ್ವಹಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಮೈಸೂರು: ಮೈಸೂರು ಜಿಲ್ಲೆಯ ಯೆಲಿವಾಳ ಬಳಿ ಸೋಮವಾರ ಸಂಜೆ ಸಿಡಿಲು ಬಡಿದು ಬೆಂಗಳೂರಿನ 43 ವರ್ಷದ ಟೆಕ್ಕಿಯೊಬ್ಬರು ಮೃತಪಟ್ಟಿದ್ದಾರೆ.

ಮೃತ ಟೆಕ್ಕಿಯನ್ನು ಹೊಸೊಕ್ಲು ರೋಷನ್ ಬಾಲಕೃಷ್ಣ ಎಂದು ಗುರುತಿಸಲಾಗಿದ್ದು, ಅವರು ಮೂಲತ ಕೊಡಗು ಜಿಲ್ಲೆಯವರು. ಆದರೆ ಬೆಂಗಳೂರಿನ ಜಾಲಹಳ್ಳಿಯಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುತ್ತಿದ್ದರು.

ರೋಷನ್ ಐಟಿ ಕಂಪನಿಯ ಉದ್ಯೋಗಿಯಾಗಿದ್ದು, ಮೈಸೂರಿನಲ್ಲಿರುವ ತಮ್ಮ ಕುಟುಂಬದ ಕಾಫಿ ತೋಟವನ್ನೂ ನಿರ್ವಹಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಸೋಮವಾರ ಸಂಜೆ 5 ಗಂಟೆಗೆ ರೋಷನ್ ಮತ್ತು ಅವರ ಕುಟುಂಬ ಯೆಲಿವಾಳ ಬಳಿ ತಮ್ಮ ತೋಟಕ್ಕೆ ಭೇಟಿ ನೀಡಿದಾಗ ಈ ಘಟನೆ ಸಂಭವಿಸಿದೆ. ರೋಷನ್ ಹಣ್ಣುಗಳನ್ನು ಕೀಳಲು ಮಾವಿನ ಮರದ ಬಳಿ ಹೋದಾಗ ಸಿಡಿಲು ಬಡಿದು ಸ್ಥಳದಲ್ಲೇ ಕುಸಿದು ಬಿದ್ದರು ಎಂದು ವರದಿಯಾಗಿದೆ.

ಕುಟುಂಬ ಸದಸ್ಯರು ತಕ್ಷಣ ಅವರನ್ನು ಹತ್ತಿರದ ಎನ್‌ಜಿ ಆಸ್ಪತ್ರೆಗೆ ಮತ್ತು ನಂತರ ಜಯದೇವ ಆಸ್ಪತ್ರೆಗೆ ಕರೆದೊಯ್ದರು. ಆದರೆ ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು.

ರೋಷನ್ ಅವರು, ಪತ್ನಿ ಹಾಗೂ 9ನೇ ತರಗತಿ ಓದುತ್ತಿರುವ ಓರ್ವ ಮಗನನ್ನು ಅಗಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT