ರಾಜ್ಯ ಹಿಂದುಳಿದ ವರ್ಗಗಳ ಆಯೋಗ 
ರಾಜ್ಯ

ಸಿಎಂ ಸಿದ್ದರಾಮಯ್ಯ ಪದತ್ಯಾಗ? ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

ರಾಜ್ಯ ಸರ್ಕಾರಕ್ಕೆ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷಾ ವರದಿ ಸಲ್ಲಿಕೆ ಕುರಿತು ಚರ್ಚಿಸಲು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಬುಧವಾರ ಸಭೆ ನಡೆಸಿತು ಎಂದು ಮೂಲಗಳು ತಿಳಿಸಿವೆ.

ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜಿನಾಮೆ ನೀಡಲಿದ್ದಾರೆ ಎಂಬ ಮಾತುಗಳ ನಡುವೆಯೇ ಇತ್ತ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಮಹತ್ವದ ಸಭೆ ನಡೆಸಿದೆ.

ಹೌದು.. ರಾಜ್ಯ ಸರ್ಕಾರಕ್ಕೆ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷಾ ವರದಿ ಸಲ್ಲಿಕೆ ಕುರಿತು ಚರ್ಚಿಸಲು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಬುಧವಾರ ಸಭೆ ನಡೆಸಿತು ಎಂದು ಮೂಲಗಳು ತಿಳಿಸಿವೆ.

ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಕುರಿತು ರಾಜಕೀಯ ವಲಯದಲ್ಲಿ ಭಾರೀ ಊಹಾಪೋಹಗಳು ಹರಿದಾಡುತ್ತಿರುವ ಹಿನ್ನೆಲೆಯಲ್ಲೇ ಈ ಬೆಳವಣಿಗೆ ನಡೆದಿದೆ.

ಊಹಾಪೋಹಗಳ ಪ್ರಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಿನ ಕೆಲವೇ ದಿನಗಳಲ್ಲಿ ರಾಜೀನಾಮೆ ನೀಡಿ, ತಮ್ಮ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ರಾಜ್ಯದ ಆಡಳಿತದ ಹೊಣೆ ಹಸ್ತಾಂತರಿಸಬಹುದು ಎನ್ನಲಾಗಿದೆ.

ಇದೇ ಕಾರಣದಿಂದಾಗಿ ಮುಂದಿನ ಮೂರುರಿಂದ ನಾಲ್ಕು ದಿನಗಳಲ್ಲಿ ನಡೆಯಬೇಕಿದ್ದ ಹಿಂದುಳಿದ ವರ್ಗಗಳಿಗೆ ಸಂಬಂಧಿಸಿದ ಸಭೆಯನ್ನು ಬುಧವಾರವೇ ಕರೆಯಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಆಯೋಗ ನಡೆಸಿದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯು ರಾಜ್ಯದ ಹಿಂದುಳಿದ ವರ್ಗಗಳಿಗೆ ಸಂಬಂಧಿಸಿದ ನೀತಿಗಳ ಮೇಲೆ ಮಹತ್ವದ ಪರಿಣಾಮ ಬೀರುವ ಸಾಧ್ಯತೆ ಇದೆ.

ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳು ಮತ್ತು ದಲಿತರನ್ನು ಒಳಗೊಂಡ ‘ಅಹಿಂದ’ ರಾಜಕೀಯದ ಸುತ್ತಲೇ ಸಿದ್ದರಾಮಯ್ಯ ಅವರ ರಾಜಕೀಯ ನಡೆದುಕೊಂಡಿರುವುದರಿಂದ ಈ ವರದಿ ಅತ್ಯಂತ ಮಹತ್ವದ್ದಾಗಿದೆ.

ಮುಖ್ಯಮಂತ್ರಿಗಳು ಆಯೋಗದ ವರದಿಗೆ ಅನುಮೋದನೆ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಖಾಸಗಿ ಫೋನ್ ಕಂಪನಿಯ ಉದ್ಯೋಗಸ್ಥರು ವಾರ್ಷಿಕ ಸಭೆಗೆಂದು ವಿಯೆಟ್ನಾಂಗೆ ತೆರಳಿದ್ದಾಗ ದುರಂತ: ಪ್ರಧಾನಿ ಮೋದಿ ಸಂತಾಪ

ಬಾಗಲಕೋಟೆ: ಕಬ್ಬಿನ ಗದ್ದೆಯಲ್ಲಿ ಮಹಿಳೆ ಶವವಾಗಿ ಪತ್ತೆ! ಅಕ್ರಮ ಸಂಬಂಧಕ್ಕೆ ಬಲಿಯಾದ್ಲಾ ವಿವಾಹಿತೆ?

HMT ಆದಾಗ ನಾನು ಹುಟ್ಟಿರ್ಲಿಲ್ಲ, ನೀವೇನು? ಅರಣ್ಯ ಭೂಮಿ ಅಂತ ದಾಖಲೆ ತೋರಿಸಿ ಕುಮಾರಸ್ವಾಮಿಗೆ ಈಶ್ವರ್ ಖಂಡ್ರೆ ಟಾಂಗ್