ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ 
ರಾಜ್ಯ

ಉಗಾಂಡಾ ಮಹಿಳೆಗೆ ನೆಗೆಟಿವ್; ಕರ್ನಾಟಕದಲ್ಲಿ ಎಬೋಲಾ ಪ್ರಕರಣ ಇಲ್ಲ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಅನಗತ್ಯವಾಗಿ ಆತಂಕಕ್ಕೊಳಗಾಗಬಾರದು. ವದಂತಿಗಳಿಗೆ ಕಿವಿಗೊಡದೆ, ನಿಗದಿಪಡಿಸಿದ ಆರೋಗ್ಯ ಮಾರ್ಗಸೂಚಿಗಳನ್ನು ಪಾಲಿಸಿ. ಸರ್ಕಾರ ಮತ್ತು ಆರೋಗ್ಯ ಇಲಾಖೆ ಅಧಿಕೃತವಾಗಿ ಹೊರಡಿಸುವ ಮಾಹಿತಿ ಹಾಗೂ ಪ್ರಕಟಣೆಗಳನ್ನು ಮಾತ್ರ ಆಧಾರವಾಗಿಟ್ಟುಕೊಳ್ಳಿ.

ಬೆಂಗಳೂರು: ಎಬೋಲಾ ವೈರಸ್‌ನ ಲಕ್ಷಣಗಳು ಕಂಡುಬಂದಿದ್ದ ಶಂಕಿತ ಉಗಾಂಡಾದ 28 ವರ್ಷದ ಮಹಿಳೆಯ ತಪಾಸಣಾ ವರದಿಯಲ್ಲಿ ಸೋಂಕು ಇಲ್ಲ ಎಂಬುದು ದೃಢಪಟ್ಟಿದೆ. ಹೀಗಾಗಿ, ಜನರು ಆತಂಕಕ್ಕೆ ಒಳಗಾಗುವುದು ಬೇಡ ಎಂದು ಸಚಿವ ದಿನೇಶ್ ಗುಂಡೂರಾವ್ ಬುಧವಾರ ತಿಳಿಸಿದ್ದಾರೆ.

ಅಧಿಕಾರಿಗಳ ಪ್ರಕಾರ, ಎಬೋಲಾ ವೈರಸ್ ಪೀಡಿತ ಪ್ರದೇಶದಿಂದ ಬಂದ ಮಹಿಳೆಯೊಬ್ಬರಿಗೆ ಮಂಗಳವಾರ ದೇಹದ ನೋವಿನಂತಹ ಸೌಮ್ಯ ಲಕ್ಷಣಗಳು ಕಾಣಿಸಿಕೊಂಡಿತ್ತು. ನಂತರ ಅವರನ್ನು ಹೋಟೆಲ್‌ನಿಂದ ಸರ್ಕಾರಿ ಸಾಂಕ್ರಾಮಿಕ ರೋಗಗಳ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಅವರ ರಕ್ತದ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗಾಗಿ ಪುಣೆಯಲ್ಲಿರುವ ರಾಷ್ಟ್ರೀಯ ವೈರಾಲಜಿ ಸಂಸ್ಥೆಗೆ ಕಳುಹಿಸಲಾಗಿತ್ತು.

'ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ಪ್ರಯೋಗಾಲಯದ ತಪಾಸಣಾ ವರದಿ ಬಂದಿದ್ದು, ಅದು 'ನೆಗೆಟಿವ್' ಆಗಿರುವುದು ಕಂಡುಬಂದಿದೆ. ಅವರು ಎಬೋಲಾ ವೈರಸ್ ಸೋಂಕಿಗೆ ಒಳಗಾಗಿಲ್ಲ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ದೃಢಪಡಿಸಿದ್ದಾರೆ' ಎಂದು ಸಚಿವರು X ನಲ್ಲಿನ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

'ಶಂಕೆ ವ್ಯಕ್ತವಾದ ತಕ್ಷಣವೇ ಇಲಾಖೆಯು ಸಾರ್ವಜನಿಕ ಆರೋಗ್ಯ ಮಾರ್ಗಸೂಚಿಗಳ ಅನ್ವಯ ಅತ್ಯಂತ ಕಟ್ಟುನಿಟ್ಟಾದ ಮುನ್ನೆಚ್ಚರಿಕೆ ಕ್ರಮಗಳು ಮತ್ತು ವೈದ್ಯಕೀಯ ನಿಯಮಾವಳಿಗಳನ್ನು ಪಾಲಿಸಿದೆ. ಸಾರ್ವಜನಿಕರ ಆರೋಗ್ಯ ಮತ್ತು ಸುರಕ್ಷತೆಯೇ ಸರ್ಕಾರದ ಮೊದಲ ಆದ್ಯತೆಯಾಗಿದೆ. ನಮ್ಮ ಆರೋಗ್ಯ ಇಲಾಖೆಯು ಪ್ರತಿಯೊಂದು ಪರಿಸ್ಥಿತಿಯನ್ನೂ ಅತ್ಯಂತ ಸೂಕ್ಷ್ಮವಾಗಿ ಗಮನಿಸುತ್ತಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಯಾವುದೇ ರೀತಿಯ ಸವಾಲನ್ನು ಎದುರಿಸಲು ಮತ್ತು ಅಗತ್ಯವಿರುವ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಇಲಾಖೆ ಸಂಪೂರ್ಣವಾಗಿ ಸಜ್ಜಾಗಿದೆ' ಎಂದು ರಾವ್ ಹೇಳಿದರು.

ಯಾರೂ ಅನಗತ್ಯವಾಗಿ ಆತಂಕಕ್ಕೊಳಗಾಗಬಾರದು ಎಂದು ವಿನಂತಿಸುತ್ತೇನೆ. ವದಂತಿಗಳಿಗೆ ಕಿವಿಗೊಡದೆ, ನಿಗದಿಪಡಿಸಿದ ಆರೋಗ್ಯ ಮಾರ್ಗಸೂಚಿಗಳನ್ನು ಪಾಲಿಸಿ. ಸರ್ಕಾರ ಮತ್ತು ಆರೋಗ್ಯ ಇಲಾಖೆ ಅಧಿಕೃತವಾಗಿ ಹೊರಡಿಸುವ ಮಾಹಿತಿ ಹಾಗೂ ಪ್ರಕಟಣೆಗಳನ್ನು ಮಾತ್ರ ಆಧಾರವಾಗಿಟ್ಟುಕೊಳ್ಳಿ. ನಿಮ್ಮ ಆರೋಗ್ಯದ ರಕ್ಷಣೆಗೆ ಸರ್ಕಾರ ಸದಾ ಬದ್ಧವಾಗಿದೆ ಎಂದು ಹೇಳಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯು ಮೇ 17 ರಂದು ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯ (DRC) ಮತ್ತು ಉಗಾಂಡಾದಲ್ಲಿನ ಎಬೋಲಾ ಪ್ರಕರಣಗಳ ಏಕಾಏಕಿ ಉಲ್ಬಣದಿಂದಾಗಿ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿ (PHEIC) ಎಂದು ಘೋಷಿಸಿತು.

ಹಲವಾರು ಆಫ್ರಿಕನ್ ದೇಶಗಳಲ್ಲಿ ಎಬೋಲಾ ಏಕಾಏಕಿ ಕಂಡುಬಂದಿರುವ ಹಿನ್ನೆಲೆಯಲ್ಲಿ, ಇತ್ತೀಚೆಗೆ ಪೀಡಿತ ರಾಷ್ಟ್ರಗಳಿಗೆ ಪ್ರಯಾಣಿಸಿದ ವ್ಯಕ್ತಿಗಳು ಹಿಂದಿರುಗಿದ ನಂತರ 21 ದಿನಗಳ ಕಾಲ ಆರೋಗ್ಯ ಮೇಲ್ವಿಚಾರಣೆ ಮತ್ತು ಸ್ವಯಂ ವೀಕ್ಷಣೆಗೆ ಒಳಗಾಗುವಂತೆ ರಾಜ್ಯದ ಆರೋಗ್ಯ ಇಲಾಖೆ ಸೂಚಿಸಿತ್ತು.

ಲಕ್ಷಣಗಳು ಕಾಣಿಸಿಕೊಂಡ ವ್ಯಕ್ತಿಗಳು ತಕ್ಷಣವೇ ಹತ್ತಿರದ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ವರದಿ ಮಾಡಬೇಕು. ಕ್ಷಿಪ್ರ ಪ್ರತಿಕ್ರಿಯೆ ತಂಡಗಳು (RRT ಗಳು) ಕಣ್ಗಾವಲು ಚಟುವಟಿಕೆಗಳನ್ನು ನಡೆಸುತ್ತವೆ ಎಂದು ಇಲಾಖೆ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್