ಸಿದ್ದರಾಮಯ್ಯ ಹಾಗೂ ಮಲ್ಲಿಕಾರ್ಜುನ ಖರ್ಗೆ 
ರಾಜ್ಯ

ಸಿದ್ದರಾಮಯ್ಯ ಸೇವೆ ಮರೆಯಲಾಗದು, ಅವರ ಕೊಡುಗೆಗೆ ಕರ್ನಾಟಕ-ಕಾಂಗ್ರೆಸ್ ಎಂದಿಗೂ ಕೃತಜ್ಞ: ಮಲ್ಲಿಕಾರ್ಜುನ ಖರ್ಗೆ

ಸಿದ್ದರಾಮಯ್ಯ ಅವರು ತಮ್ಮ ಜೀವನದ ಆರಂಭದಿಂದಲೇ ಸಮಾನತೆ ಮತ್ತು ಹಿಂದುಳಿದ ವರ್ಗಗಳ ಹಕ್ಕುಗಳಿಗಾಗಿ ನಿರಂತರವಾಗಿ ಹೋರಾಡಿದ್ದಾರೆ.

ನವದೆಹಲಿ/ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಾರ್ವಜನಿಕ ಜೀವನವನ್ನು ಶುಕ್ರವಾರ ಶ್ಲಾಘಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಬರೆದಿರುವ ಅವರು, ಸಿದ್ದರಾಮಯ್ಯ ಅವರ ಸಾರ್ವಜನಿಕ ಜೀವನ ಸದಾ ಗೌರವ, ಕರುಣೆ ಮತ್ತು ಸಾಮಾಜಿಕ ನ್ಯಾಯದ ಬದ್ಧತೆಯನ್ನು ಪ್ರತಿಬಿಂಬಿಸಿದೆ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಅವರು ತಮ್ಮ ಜೀವನದ ಆರಂಭದಿಂದಲೇ ಸಮಾನತೆ ಮತ್ತು ಹಿಂದುಳಿದ ವರ್ಗಗಳ ಹಕ್ಕುಗಳಿಗಾಗಿ ನಿರಂತರವಾಗಿ ಹೋರಾಡಿದ್ದಾರೆ. ಸರಳ ಹಿನ್ನೆಲೆಯಿಂದ ಬಂದ ಸಿದ್ದರಾಮಯ್ಯ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ಎರಡು ಬಾರಿ ಸೇವೆ ಸಲ್ಲಿಸಿದ್ದು, ತಮ್ಮ ಆಡಳಿತಾವಧಿಯಲ್ಲಿ ಸಮಾನತೆ, ಸೌಹಾರ್ದತೆ ಹಾಗೂ ಹಿಂದುಳಿದವರ ಕಲ್ಯಾಣಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದರು ಎಂದು ತಿಳಿಸಿದ್ದಾರೆ.

ಕರ್ನಾಟಕ ಹಾಗೂ ಕಾಂಗ್ರೆಸ್ ಪಕ್ಷವು ಅವರ ಸಾರ್ವಜನಿಕ ಸೇವೆಗೆ ಸದಾ ಕೃತಜ್ಞವಾಗಿದೆ. ಸಿದ್ದರಾಮಯ್ಯ ಅವರಿಗೆ ಉತ್ತಮ ಆರೋಗ್ಯ ಹಾಗೂ ಜನಸೇವೆಯಲ್ಲಿ ಮುಂದುವರಿದ ಯಶಸ್ಸು ದೊರೆಯಲಿ ಎಂದು ಹಾರೈಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು

'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ': ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ; ನಿತಿನ್ ನಬಿನ್