ರಾಜ್ಯ

ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಭಾರೀ ಅಗ್ನಿ ಅವಘಡ; ಹೊತ್ತಿ ಉರಿದ ಇಡೀ ಕಟ್ಟಡ! Video

ಇಂದು ಬೆಳಗ್ಗೆ 9.30 ರ ಸುಮಾರಿಗೆ ನಾಗದೇವನಹಳ್ಳಿಯ ಖಾಸಗಿ ಶಾಲೆಯೊಂದರಲ್ಲಿ ಈ ಅಗ್ನಿ ಅವಘಡ ಸಂಭವಿಸಿದ್ದು, ಶಾಲೆಗೆ ರಜೆ ಇದ್ದಿದ್ದರಿಂದ ಯಾವುದೇ ಪ್ರಾಣ ಹಾನಿಯಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಬೆಂಗಳೂರು: ರಾಜಧಾನಿ ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಶನಿವಾರ ಬೆಳಗ್ಗೆ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಇಡೀ ಕಟ್ಟಡ ಹೊತ್ತಿ ಉರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಂದು ಬೆಳಗ್ಗೆ 9.30 ರ ಸುಮಾರಿಗೆ ನಾಗದೇವನಹಳ್ಳಿಯ ಖಾಸಗಿ ಶಾಲೆಯೊಂದರಲ್ಲಿ ಈ ಅಗ್ನಿ ಅವಘಡ ಸಂಭವಿಸಿದ್ದು, ಶಾಲೆಗೆ ರಜೆ ಇದ್ದಿದ್ದರಿಂದ ಯಾವುದೇ ಪ್ರಾಣ ಹಾನಿಯಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಘಟನೆಯಲ್ಲಿ ಯಾವುದೇ ಗಾಯಗಳು ಅಥವಾ ಸಾವುನೋವುಗಳು ವರದಿಯಾಗಿಲ್ಲ. ಬೆಂಕಿಯನ್ನು ನಂದಿಸಲು ಮೂರು ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಾಲೆಯ ನಾಲ್ಕನೇ ಮಹಡಿಯಲ್ಲಿರುವ ಸಭಾಂಗಣದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಂತರ ಅದು ಇಡೀ ಕಟ್ಟಡಕ್ಕೆ ವ್ಯಾಪಿಸಿದೆ. ದಟ್ಟವಾದ ಹೊಗೆ ಇಡೀ ಕಟ್ಟಡವನ್ನು ಆವರಿಸಿತು.

ಶನಿವಾರವಾಗಿದ್ದರಿಂದ, ಶಾಲೆಯ ನಿಯಮಿತ ತರಗತಿಗಳಿಗೆ ರಜೆ ನೀಡಲಾಗಿತ್ತು. ಆದಾಗ್ಯೂ, ಕೆಲವು ವಿದ್ಯಾರ್ಥಿಗಳು ಓರಿಯಂಟೇಶನ್ ಸೆಷನ್‌ಗೆ ಹಾಜರಾಗಲು ಬಂದಿದ್ದರು. ಶಾಲಾ ಸಿಬ್ಬಂದಿ ಜೊತೆಗೆ ಅವರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಲಾಗಿದ್ದು, ನಿಖರವಾದ ಕಾರಣವನ್ನು ಕಂಡುಹಿಡಿಯಲು ವಿವರವಾದ ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಬಂಡಾಯ ಇಲ್ಲ, ಸರ್ವಾನುಮತದ ಅನುಮೋದನೆ’: SIR ವಿಚಾರದಲ್ಲಿ ಆಂತರಿಕ ಭಿನ್ನಾಭಿಪ್ರಾಯದ ವರದಿ ತಳ್ಳಿಹಾಕಿದ ಚುನಾವಣಾ ಆಯೋಗ!

ತಂತ್ರಜ್ಞಾನ, ಆವಿಷ್ಕಾರದಿಂದ ಹೊಸ ವೇಗ, ಭಾರತದ ಆರ್ಥಿಕ ಬೆಳವಣಿಗೆ ಶೇ.10 ಮೀರಬಹುದು: ನಿರ್ಮಲಾ ಸೀತಾರಾಮನ್

ಭಿನ್ನಾಭಿಪ್ರಾಯ ಯಾವ ಕಾರಣಕ್ಕೆ? ಸತ್ಯಾಂಶವನ್ನು ದೇಶದ ಮುಂದೆ ಬಹಿರಂಗಪಡಿಸಿ: ಚುನಾವಣಾ ಆಯೋಗಕ್ಕೆ ಕುಮಾರಸ್ವಾಮಿ ಆಗ್ರಹ

ಟಾರ್ಗೆಟ್‌ 180: ಕುಮಾರಸ್ವಾಮಿ, ನನ್ನ ಮಧ್ಯೆ CM ರೇಸ್‌ ಸೃಷ್ಟಿಸಬೇಡಿ; ಮುಖ್ಯಮಂತ್ರಿ ಯಾರು ಅನ್ನೋದನ್ನು ಹೈಕಮಾಂಡ್ ನಿರ್ಧರಿಸುತ್ತೆ: ವಿಜಯೇಂದ್ರ

CEC ಜ್ಞಾನೇಶ್ ಕುಮಾರ್ ದಲಿತ ಎಂಬ ಕಾರಣಕ್ಕೆ ಕಾಂಗ್ರೆಸ್ ಅವಮಾನಿಸುತ್ತಿದೆ: ಗೋವಿಂದ ಕಾರಜೋಳ