ಮೈಸೂರು: ಸಿದ್ದರಾಮಯ್ಯ ಅವರ ವಿರುದ್ಧ ಯಾವುದೇ ದ್ವೇಷವಿಲ್ಲ. ಅವರು ರಾಜಮನೆತನಕ್ಕೆ ಹತ್ತಿರವೂ ಇಲ್ಲ, ದೂರವೂ ಇಲ್ಲ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಪ್ರಸಕ್ತ ರಾಜಕೀಯ ಬೆಳವಣಿಗೆಗಳನ್ನು ಕುರಿತು ನಾನು ಮಾತನಾಡುವುದಿಲ್ಲ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನದಿಂದ ಇಳಿದರೆಂದು ಅಭಿವೃದ್ಧಿ ಕುಂಠಿತಗೊಳ್ಳಲು ಸಾಧ್ಯವಿಲ್ಲ. ಹಾಗೇನಾದರೂ ಆದಲ್ಲಿ, ನಿರ್ಲಕ್ಷ್ಯ ವಹಿಸಿದಲ್ಲಿ ಜನರು ಒತ್ತಡ ಹಾಕಿ ಕೆಲಸ ಮಾಡಿಸಿಕೊಳ್ಳಬೇಕು’ ಎಂದು ಹೇಳಿದರು.
ನೂತನ ಮುಖ್ಯಮಂತ್ರಿ ಯಾರೇ ಆದರೂ ಅವರಿಗೆ ಆಡಳಿತ ಹಿಡಿತಕ್ಕೆ ಬರಲು, ಅಭಿವೃದ್ಧಿ ಕಾರ್ಯ ನಡೆಯಲು ಮೂರ್ನಾಲ್ಕು ತಿಂಗಳಾದರೂ ಸಮಯಾವಕಾಶ ಬೇಕು. ಮೈಸೂರಿಗೆ ಈಗ ಮಂಜೂರಾದ ಯೋಜನೆಗಳನ್ನು ಅವರು ಮುಂದುವರಿಸಬೇಕು ಎಂದು ಒತ್ತಾಯಿಸಿದರು.