ಈಜಲು ಹೋಗಿದ್ದ ಮೂವರು ಬಾಲಕರು ಜಲಸಮಾಧಿ! 
ರಾಜ್ಯ

ಧಾರವಾಡದಲ್ಲಿ ಘೋರ ದುರಂತ: ಈಜಲು ಹೋಗಿದ್ದ ಮೂವರು ಬಾಲಕರು ಜಲಸಮಾಧಿ!

ಮೃತ ಬಾಲಕರನ್ನು ಸಿಂಗನಹಳ್ಳಿ ಗ್ರಾಮದ ನಿವಾಸಿಗಳಾದ ಅಬ್ಬಾಸ್ ವಟ್ನಾಳ್ (12), ಅಸ್ಲಂ ವಟ್ನಾಳ್ (10) ಹಾಗೂ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಮೂಲದ ಸುಭಾನಿ ಬಾಗೋಜಿಕೊಪ್ಪ(10) ಎಂದು ಗುರುತಿಸಲಾಗಿದೆ.

ಧಾರವಾಡ: ಧಾರವಾಡ ತಾಲೂಕಿನ ಸಿಂಗನಹಳ್ಳಿ ಗ್ರಾಮದ ಕೆರೆಯಲ್ಲಿ ಈಜಲು ತೆರಳಿದ್ದ ಮೂವರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಶನಿವಾರ ನಡೆದಿದೆ.

ಇಂದು ಮಧ್ಯಾಹ್ನ ಗ್ರಾಮದ ಪಕ್ಕದಲ್ಲಿ ಇರುವ ಕೆರೆಗೆ ಮೂವರು ಬಾಲಕರು ಈಜಲು ಹೋಗಿದ್ದರು. ಈ ವೇಳೆ ಕೆರೆಯ ಮಧ್ಯಭಾಗದಲ್ಲಿ ಹೋಗಿದ್ದ ಬಾಲಕರು ಈಜಲು ಆಗದೇ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಮೃತ ಬಾಲಕರನ್ನು ಸಿಂಗನಹಳ್ಳಿ ಗ್ರಾಮದ ನಿವಾಸಿಗಳಾದ ಅಬ್ಬಾಸ್ ವಟ್ನಾಳ್ (12), ಅಸ್ಲಂ ವಟ್ನಾಳ್ (10) ಹಾಗೂ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಮೂಲದ ಸುಭಾನಿ ಬಾಗೋಜಿಕೊಪ್ಪ(10) ಎಂದು ಗುರುತಿಸಲಾಗಿದೆ.

ಸದ್ಯ ಮೂವರು ಬಾಲಕರ ಶವವನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಕೆರೆಯಿಂದ ಹೊರತೆಗೆದಿದ್ದಾರೆ.

ಘಟನಾ ಸ್ಥಳಕ್ಕೆ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಅವರು ಭೇಟಿ ನೀಡಿ ಪರಿಶೀಲಿಸಿದರು.

ಮೃತ ಬಾಲಕರ ದೇಹಗಳನ್ನು ನೋಡಿದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಇಡೀ ಸಿಂಗನಹಳ್ಳಿ ಗ್ರಾಮದಲ್ಲಿ ಸೂತಕದ ಛಾಯೆ ಆವರಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

NICE ವಿವಾದ: ದೇವೇಗೌಡರು ಬೇಕಿದ್ರೆ ಕೋರ್ಟ್‌ಗೆ ಹೋಗಲಿ, ಉಪವಾಸ ಮಾಡಲಿ; ಮಾಜಿ ಪ್ರಧಾನಿ ಪತ್ರಕ್ಕೆ CM ಡಿಕೆಶಿ ತಿರುಗೇಟು

ಸಾಕು ಮಾಡಿ: ಸೇವಾಶ್ರಯ ಪ್ರಕರಣದಲ್ಲಿ ಕೊನೆಗೂ ಅಭಿಷೇಕ್ ಬ್ಯಾನರ್ಜಿಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್, ಬಂಧನಕ್ಕೆ ತಡೆ!

ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌; ಶೇ. 7.5 ರಷ್ಟು ಮೀಸಲಾತಿ – ಕರಡು ನಿಯಮ ಪ್ರಕಟ

ಸ್ವಚ್ಛ ವಾಯು ಸರ್ವೇಕ್ಷಣ 2026: ಬೆಂಗಳೂರು, ಶ್ರೀನಗರ ಹಿಂದಿಕ್ಕಿದ ದೆಹಲಿ; ಅತ್ಯಂತ ಸ್ವಚ್ಛ ಗಾಳಿ ಯಾವ ನಗರದಲ್ಲಿದೆ ಗೊತ್ತಾ?

ಸತ್ಯ ನಿಕೇತನ ಪಿಜಿ ಕುಸಿತದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ದೆಹಲಿ ಹೈಕೋರ್ಟ್ ಆದೇಶ; ದುರಂತಕ್ಕೆ ಮಾಲೀಕನಷ್ಟೇ ಅಲ್ಲ MCD, DU ಸಹ ಹೊಣೆ!