ಮೊಹಮ್ಮದ್ ನಲಪಾಡ್ PTI
ರಾಜ್ಯ

ಬಿಟ್‌ ಕಾಯಿನ್‌ ಬಹುಕೋಟಿ ಹಗರಣ ಕೇಸ್: ನಲಪಾಡ್ ಗೆ ಮತ್ತೆ ಸಂಕಷ್ಟ; ವಿಚಾರಣೆಗೆ ಹಾಜರಾಗಲು ED ಸಮನ್ಸ್

ಮತ್ತೆ ವಿಚಾರಣೆಗೆ ಹಾಜರಾಗುವಂತೆ ಇಡಿ ಸಮನ್ಸ್‌ ನೀಡಿದ್ದು, ನಾಳೆ (ಜೂ.1) ಸೋಮವಾರದಂದೇ ವಿಚಾರಣೆ ಹಾಜರಾಗುವಂತೆ ಸೂಚಿಸಿದೆ.

ಬೆಂಗಳೂರು: ಬಿಟ್‌ ಕಾಯಿನ್‌ ಬಹುಕೋಟಿ ಹಗರಣ ಪ್ರಕರಣದಲ್ಲಿ ಕಾಂಗ್ರೆಸ್ ಯುವ ಮುಖಂಡ ಮೊಹಮ್ಮದ್ ನಲಪಾಡ್ ಗೆ ಮತ್ತೆ ಸಂಕಷ್ಟ ಎದುರಾಗಿದೆ.

ಮತ್ತೆ ವಿಚಾರಣೆಗೆ ಹಾಜರಾಗುವಂತೆ ಇಡಿ ಸಮನ್ಸ್‌ ನೀಡಿದ್ದು, ನಾಳೆ (ಜೂ.1) ಸೋಮವಾರದಂದೇ ವಿಚಾರಣೆ ಹಾಜರಾಗುವಂತೆ ಸೂಚಿಸಿದೆ. ಶ್ರೀಕಿ, ನಲಪಾಡ್ ಮನೆ ಮೇಲೆ ದಾಳಿ ನಡೆಸಿದ್ದ ಇಡಿ ಪರಿಶೀಲನೆ ನಡೆಸಿತ್ತು. ಈ ಪ್ರಕರಣ ಸಂಬಂಧ ಈಗಾಗಲೇ ಇಡಿ ಅಧಿಕಾರಿಗಳು ಶ್ರೀಕಿ, ಸುನೇಶ್ ಹೆಗ್ಡೆ, ರಾಬಿನ್ ಖಂಡೇವಾಲ ಅವರನ್ನ ಬಂಧಿಸಿದೆ.

ಬಿಟ್ ಕಾಯಿನ್ ಕೇಸ್ ಸಂಬಂದ ಕೈ ನಾಯಕ ಮೊಹಮ್ಮದ್ ನಲಪಾಡ್ ಅವರಿಗೆ ಇಡಿ ಎರಡನೇ ಬಾರಿ ನೋಟಿಸ್​ ನೀಡಿದೆ. ರಾಜಕೀಯ ಕಾರ್ಯಕ್ರಮ ಹಿನ್ನೆಲೆ ಮೊದಲ ನೋಟಿಸ್​​ಗೆ ನಲಪಾಡ್​​ ಹಾಜರಾಗಿರಲಿಲ್ಲ. ಕಾರಣ ತಿಳಿಸಿ ಇಡಿಗೆ ಮನವಿ ಮಾಡಿದ್ದರು. ಇದೀಗ ಎರಡನೇ ಬಾರಿ ಇಡಿ ನೋಟಿಸ್​ ಜಾರಿ ಮಾಡಿದ್ದುಮ ಸೋಮವಾರ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.

ಇತ್ತೀಚೆಗಷ್ಟೇ ಬಿಟ್ ಕಾಯಿನ್ ಹಗರಣ ಪ್ರಕರಣದಲ್ಲಿ ಬೆಂಗಳೂರಿನ ಅಶೋಕನಗರದಲ್ಲಿರುವ ನಲಪಾಡ್ ಮನೆ ಮೇಲೆ ದಾಳಿ ನಡೆಸಿದ್ದ ಜಾರಿ ನಿರ್ದೇಶನಾಲಯ ಸತತ 21 ಗಂಟೆಗಳ ಶೋಧ ಕಾರ್ಯ ನಡೆಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಪ್ರಧಾನ್ ರಾಜೀನಾಮೆಯಿಂದ ಭಾರತ ಅಸ್ಥಿರಗೊಳಿಸುವ ವಿದೇಶಿ ಶಕ್ತಿಗಳ ಸಂಚು ವಿಫಲ': ಕೈಲಾಶ್ ವಿಜಯವರ್ಗೀಯ

ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಲ್ಹಾದ್ ಜೋಶಿ: ಪ್ರಧಾನ್ ಗೆ ಪರ್ಯಾಯ? ಅನುಭವ, ಇತಿಹಾಸ! ಇಲ್ಲಿದೆ ಮಾಹಿತಿ

ಹುಂಡಿ ಹಣ ದೋಚಿದ ಪ್ರಕರಣ: ತಮಿಳುನಾಡಿನ ಪ್ರಸಿದ್ಧ ದೇವಾಲಯದ 8 ಅಧಿಕಾರಿಗಳು ಅಮಾನತು

'ವಿದ್ಯಾರ್ಥಿಗಳ ಮೇಲಿನ ಕ್ರೌರ್ಯಕ್ಕೆ ಹೊಣೆ ಯಾರು?' ಅಮಿತ್ ಶಾಗೆ ರಾಹುಲ್ ಗಾಂಧಿ ಪತ್ರ; ಪೊಲೀಸ್ ದೌರ್ಜನ್ಯಕ್ಕೆ ಉತ್ತರಿಸುವಂತೆ ಆಗ್ರಹ

ಪ್ರಧಾನ್ ರಾಜೀನಾಮೆ ಸಾಲದು; ಪಾರದರ್ಶಕ ಪರೀಕ್ಷೆ, ಕೈಗೆಟುಕುವ ಶಿಕ್ಷಣಕ್ಕೆ ಒತ್ತು ನೀಡಿ: ಕೇಂದ್ರ ಸರ್ಕಾರಕ್ಕೆ ವಿದ್ಯಾರ್ಥಿಗಳ ಆಗ್ರಹ