ಡಿಕೆ.ಶಿವಕುಮಾರ್ 
ರಾಜ್ಯ

ಕನ್ನಡ ಬಾವುಟದ ವಿನ್ಯಾಸ ಬದಲು: ಹಳದಿ-ಕೆಂಪು ಕನ್ನಡ ಧ್ವಜಕ್ಕೆ ಮತ್ತೊಂದು ಬಣ್ಣ, ಮಧ್ಯದಲ್ಲಿ ರಾಜ್ಯ ಲಾಂಛನ; ಡಿಕೆಶಿ ಮಹತ್ವದ ಘೋಷಣೆ

ಕನ್ನಡದ ಅಸ್ಮಿತೆಯ ಸಂಕೇತವಾಗಿರುವ ಹಳದಿ-ಕೆಂಪು ಧ್ವಜಕ್ಕೆ ಅಧಿಕೃತ ಸ್ಥಾನಮಾನ ಕಲ್ಪಿಸುವುದರ ಜೊತೆಗೆ ಅದರ ವಿನ್ಯಾಸದಲ್ಲಿ ಬದಲಾವಣೆ ತರಲು ಸರ್ಕಾರ ಚಿಂತನೆ ನಡೆಸಿದೆ. ಧ್ವಜದಲ್ಲಿ ಮತ್ತೊಂದು ಬಣ್ಣವನ್ನು ಸೇರಿಸಿ, ಮಧ್ಯಭಾಗದಲ್ಲಿ ಕರ್ನಾಟಕದ ರಾಜ್ಯ ಲಾಂಛನವನ್ನು ಅಳವಡಿಸುವ ಪ್ರಸ್ತಾವನೆಯಿದೆ.

ಬೆಂಗಳೂರು: ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ಧ್ವಜದ ವಿನ್ಯಾಸದಲ್ಲಿ ಮಹತ್ವದ ಬದಲಾವಣೆ ತರಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಸಾಂಪ್ರದಾಯಿಕ ಹಳದಿ ಮತ್ತು ಕೆಂಪು ಬಣ್ಣದ ಧ್ವಜಕ್ಕೆ ಮತ್ತೊಂದು ಬಣ್ಣವನ್ನು ಸೇರಿಸುವುದರ ಜೊತೆಗೆ, ಮಧ್ಯಭಾಗದಲ್ಲಿ ಕರ್ನಾಟಕದ ರಾಜ್ಯ ಲಾಂಛನವನ್ನು ಅಳವಡಿಸಲು ಉದ್ದೇಶಿಸಲಾಗಿದೆ. ಅಲ್ಲದೆ, ಸರ್ಕಾರಿ ಕಚೇರಿಗಳು ಹಾಗೂ ಖಾಸಗಿ ಕಂಪನಿಗಳಲ್ಲಿ ಕನ್ನಡ ಧ್ವಜಾರೋಹಣ ಕಡ್ಡಾಯಗೊಳಿಸಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಘೋಷಿಸಿದ್ದಾರೆ.

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಭಾನುವಾರ ನಡೆದ 71ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಮಾತನಾಡಿದ ಅವರು, ವಿಶ್ವದಾದ್ಯಂತ ನೆಲೆಸಿರುವ ಕನ್ನಡಿಗರಿಗೆ ರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದರು. ಕನ್ನಡ ನಾಡು, ನುಡಿ, ನೆಲ ಹಾಗೂ ಧ್ವಜದ ರಕ್ಷಣೆಗೆ ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದು ತಿಳಿಸಿದರು.

ಕನ್ನಡದ ಅಸ್ಮಿತೆಯ ಸಂಕೇತವಾಗಿರುವ ಹಳದಿ-ಕೆಂಪು ಧ್ವಜಕ್ಕೆ ಅಧಿಕೃತ ಸ್ಥಾನಮಾನ ಕಲ್ಪಿಸುವುದರ ಜೊತೆಗೆ ಅದರ ವಿನ್ಯಾಸದಲ್ಲಿ ಬದಲಾವಣೆ ತರಲು ಸರ್ಕಾರ ಚಿಂತನೆ ನಡೆಸಿದೆ. ಧ್ವಜದಲ್ಲಿ ಮತ್ತೊಂದು ಬಣ್ಣವನ್ನು ಸೇರಿಸಿ, ಮಧ್ಯಭಾಗದಲ್ಲಿ ಕರ್ನಾಟಕದ ರಾಜ್ಯ ಲಾಂಛನವನ್ನು ಅಳವಡಿಸುವ ಪ್ರಸ್ತಾವನೆಯಿದೆ.

ಈ ಕುರಿತು ಮುಂಬರುವ ವಿಧಾನಸಭೆ ಅಧಿವೇಶನದಲ್ಲಿ ಶಾಸಕರೊಂದಿಗೆ ಚರ್ಚೆ ನಡೆಸಿ, ಸಾರ್ವಜನಿಕರ ಅಭಿಪ್ರಾಯವನ್ನೂ ಸಂಗ್ರಹಿಸಲಾಗುವುದು. ಬಳಿಕ ಅಂತಿಮ ನಿರ್ಣಯ ಕೈಗೊಂಡು ಕೇಂದ್ರ ಸರ್ಕಾರದ ಅನುಮೋದನೆಗಾಗಿ ಕಳುಹಿಸಿಕೊಡಲಾಗುವುದು ಎಂದು ಹೇಳಿದರು.

ಸರ್ಕಾರಿ ಕಚೇರಿಗಳಲ್ಲಿ ಕನ್ನಡ ಧ್ವಜ ಹಾರಿಸುವುದನ್ನು ಕಡ್ಡಾಯಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಐಟಿ-ಬಿಟಿ ಸೇರಿದಂತೆ ಎಲ್ಲ ಖಾಸಗಿ ಕಂಪನಿಗಳಲ್ಲೂ ಕನ್ನಡ ಬಾವುಟ ಹಾರಿಸುವಂತೆ ಆದೇಶ ಹೊರಡಿಸುವ ಕುರಿತು ಸಿದ್ಧತೆ ನಡೆದಿದೆ. ವಿಧಾನಸೌಧದ ಮೇಲೆಯೂ ಕನ್ನಡ ಧ್ವಜ ಹಾರಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಸಂಬಂಧ ಇತ್ತೀಚೆಗೆ ಕಾನೂನು ತಜ್ಞರೊಂದಿಗೂ ಸಮಾಲೋಚನೆ ನಡೆಸಲಾಗಿದೆ ಎಂದು ತಿಳಿಸಿದರು.

ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಇತಿಹಾಸವನ್ನು ಸ್ಮರಿಸಿದ ಡಿಕೆ ಶಿವಕುಮಾರ್, ಕನ್ನಡ ಭಾಷೆಗೆ ಯಾವುದೇ ಗಡಿಗಳಿಲ್ಲ. ಬ್ರಿಟಿಷರ ಆಡಳಿತದ ಕಾಲದಲ್ಲಿಯೂ ಮಕ್ಕಳು ತಮ್ಮ ಮಾತೃಭಾಷೆಯನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶವಿದ್ದ ಇತಿಹಾಸವಿದೆ. ಕನ್ನಡಕ್ಕೆ ಸುದೀರ್ಘ ಸಾಂಸ್ಕೃತಿಕ ಪರಂಪರೆಯಿದೆ ಎಂದರು.

ನಾಡದೇವತೆ ಭುವನೇಶ್ವರಿ ತಾಯಿಯನ್ನು ಕನ್ನಡವನ್ನು ಕಾಪಾಡುವ ದೇವತೆಯೆಂದು ಬಣ್ಣಿಸಿದ ಅವರು, ರಾಜ್ಯೋತ್ಸವದ ಸಂದರ್ಭದಲ್ಲಿ ತಾಯಿಗೆ ಪೂಜೆ ಸಲ್ಲಿಸಿದ್ದೇವೆ. ನಮ್ಮ ಉಸಿರು, ಭಾಷೆ, ನೆಲ ಹಾಗೂ ಧ್ವಜವನ್ನು ರಕ್ಷಿಸುವುದು ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯ. ದೇಶ-ವಿದೇಶಗಳಲ್ಲಿ ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಬೆಳೆಸುತ್ತಿರುವ ಎಲ್ಲ ಕನ್ನಡಿಗರಿಗೂ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಹೇಳಿದರು.

ಕನ್ನಡ ಧ್ವಜದ ವಿನ್ಯಾಸ, ಅದನ್ನು ಎಲ್ಲಿ ಹಾಗೂ ಹೇಗೆ ಹಾರಿಸಬೇಕು ಎಂಬುದರ ಕುರಿತು ಸ್ಪಷ್ಟ ಮಾರ್ಗಸೂಚಿ ರೂಪಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಶಾಸಕರು ಮತ್ತು ಸಾರ್ವಜನಿಕರ ಚರ್ಚೆಗೆ ಅವಕಾಶ ಕಲ್ಪಿಸಿ, ಎಲ್ಲರ ಅಭಿಪ್ರಾಯಗಳನ್ನು ಪರಿಗಣಿಸಿದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

71ನೇ ಕನ್ನಡ ರಾಜ್ಯೋತ್ಸವ: ನಾಡದೇವತೆ ಭುವನೇಶ್ವರಿಗೆ ಪುಷ್ಪಾರ್ಚನೆ; ಧ್ವಜಾರೋಹಣ ನೆರವೇರಿಸಿದ ಸಿಎಂ ಡಿಕೆ.ಶಿವಕುಮಾರ್

INDIA ಕೂಟದ ಬೃಹತ್ ರ‍್ಯಾಲಿಗೆ ರಾಮಲೀಲಾ ಮೈದಾನ ಸಜ್ಜು: ದೆಹಲಿಗೆ ರಾಜಕೀಯ ನಾಯಕರ, ಬೆಂಬಲಿಗರ ಆಗಮನ

ಕನ್ನಡ ಕೇವಲ ಭಾಷೆಯಲ್ಲ, ನಮ್ಮ ಅಸ್ಮಿತೆ, ಆತ್ಮಗೌರವ: ಕನ್ನಡದ ಕಂಪು ಜಗದಗಲ ಪಸರಿಸಲಿ; ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವ ಶುಭಾಶಯ ಕೋರಿದ ಸಿಎಂ

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಶಿಕ್ಷೆ ಕೊಡಿಸಿದ್ದ ತನಿಖಾಧಿಕಾರಿಗಳು ಸೇರಿ ರಾಜ್ಯ 6 ಅಧಿಕಾರಿಗಳಿಗೆ ಕೇಂದ್ರ ಗೃಹಮಂತ್ರಿ ದಕ್ಷತಾ ಪದಕ!

ಸರ್ಕಾರದ ರಾಜೀನಾಮೆಗೆ ಆಗ್ರಹ: ಮಣಿಪುರದಲ್ಲಿ ಸಾವಿರಾರು ಜನರ ಪ್ರತಿಭಟನೆ, ಕೇಂದ್ರಕ್ಕೆ 'ಅಂತಿಮ ಕರೆ'