ಸಂಗ್ರಹ ಚಿತ್ರ 
ರಾಜ್ಯ

ಮೇಕೆದಾಟು ಜಲಾಶಯ ಯೋಜನೆಗೆ ವೇಗ ನೀಡಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ: ಮಂಡ್ಯ DC ನೇತೃತ್ವದಲ್ಲಿ ಸಮಿತಿ ರಚನೆ..!

ಯೋಜನೆಗೆ ಅಗತ್ಯವಿರುವ ಭೂಮಿಯನ್ನು ಗುರುತಿಸುವ ಪ್ರಕ್ರಿಯೆಯಲ್ಲಿ ಹಲವು ಅಡೆತಡೆಗಳು ಎದುರಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ನೇತೃತ್ವದ ಸಮಿತಿಯನ್ನು ರಚಿಸುವ ಮೂಲಕ ಆಡಳಿತಾತ್ಮಕವಾಗಿ ಯೋಜನೆಗೆ ವೇಗ ನೀಡಲು ಸರ್ಕಾರ ಮುಂದಾಗಿದೆ.

ಬೆಂಗಳೂರು: ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಲು ಉದ್ದೇಶಿಸಿರುವ ಮೇಕೆದಾಟು ಸಮತೋಲನ ಜಲಾಶಯ ಯೋಜನೆಯ ವಿವಿಧ ಕಾರ್ಯಗಳ ಮೇಲ್ವಿಚಾರಣೆಗಾಗಿ ಮಂಡ್ಯ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದೆ.

ದೀರ್ಘಕಾಲದಿಂದ ಬಾಕಿ ಉಳಿದಿರುವ ಮೇಕೆದಾಟು ಯೋಜನೆಯನ್ನು ಮತ್ತೆ ಮುನ್ನೆಲೆಗೆ ತರಲು ಕಾಂಗ್ರೆಸ್ ಸರ್ಕಾರ ಈ ಘೋಷಣೆ ಮಾಡಿದೆ.

ಬೆಂಗಳೂರಿನ ಕುಡಿಯುವ ನೀರಿನ ಅಗತ್ಯ ಹಾಗೂ ಕಾವೇರಿ ಜಲಾನಯನ ಪ್ರದೇಶದ ನೀರಾವರಿ ಬೇಡಿಕೆಗಳನ್ನು ಪೂರೈಸಲು ಈ ಯೋಜನೆ ನಿರ್ಣಾಯಕವಾಗಿದೆ ಎಂದು ಕರ್ನಾಟಕದ ಹಿಂದಿನ ಸರ್ಕಾರಗಳೂ ಪ್ರತಿಪಾದಿಸಿವೆ.

ಯೋಜನೆಗೆ ಅಗತ್ಯವಿರುವ ಭೂಮಿಯನ್ನು ಗುರುತಿಸುವ ಪ್ರಕ್ರಿಯೆಯಲ್ಲಿ ಹಲವು ಅಡೆತಡೆಗಳು ಎದುರಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ನೇತೃತ್ವದ ಸಮಿತಿಯನ್ನು ರಚಿಸುವ ಮೂಲಕ ಆಡಳಿತಾತ್ಮಕವಾಗಿ ಯೋಜನೆಗೆ ವೇಗ ನೀಡಲು ಸರ್ಕಾರ ಮುಂದಾಗಿದೆ.

ಕರ್ನಾಟಕ ಮತ್ತು ತಮಿಳುನಾಡು ಗಡಿಯ ಸಮೀಪ ಪ್ರಸ್ತಾಪಿತವಾಗಿರುವ ಮೇಕೆದಾಟು ಸಮತೋಲನ ಜಲಾಶಯ ಯೋಜನೆಯು ಹಲವು ವರ್ಷಗಳಿಂದ ಸ್ಥಗಿತಗೊಂಡಿದೆ. ಅಂತಾರಾಜ್ಯ ಜಲವಿವಾದ, ಕೇಂದ್ರ ಸರ್ಕಾರದ ಅನುಮತಿಗಳ ಅಗತ್ಯ ಹಾಗೂ ಪರಿಸರ ಸಂಬಂಧಿತ ಆತಂಕಗಳು ಯೋಜನೆಗೆ ಅಡ್ಡಿಯಾಗಿವೆ.

ಕಾವೇರಿ ನ್ಯಾಯಮಂಡಳಿಯ ತೀರ್ಪಿನ ಚೌಕಟ್ಟಿನಡಿ ತಮಿಳುನಾಡಿಗೆ ಹರಿಯಬೇಕಾದ ನೀರಿನ ಪ್ರಮಾಣದ ಮೇಲೆ ಈ ಯೋಜನೆ ಪರಿಣಾಮ ಬೀರಬಹುದು ಎಂದು ತಮಿಳುನಾಡು ನಿರಂತರವಾಗಿ ವಿರೋಧ ವ್ಯಕ್ತಪಡಿಸುತ್ತಿದೆ.

ಆದರೆ, ಅಸ್ತಿತ್ವದಲ್ಲಿರುವ ನೀರು ಹಂಚಿಕೆ ತೀರ್ಪುಗಳಿಗೆ ಧಕ್ಕೆಯಾಗದಂತೆ ಜಲಪ್ರವಾಹವನ್ನು ನಿಯಂತ್ರಿಸಲು ಈ ಜಲಾಶಯ ನೆರವಾಗಲಿದೆ ಎಂಬುದು ಕರ್ನಾಟಕದ ವಾದವಾಗಿದೆ. ಜಿಲ್ಲಾಮಟ್ಟದ ಸಮಿತಿ ರಚಿಸುವ ಮೂಲಕ ಸ್ಥಳೀಯ ಅಧಿಕಾರಿಗಳ ಸಮನ್ವಯ ಮತ್ತು ಆಡಳಿತಾತ್ಮಕ ಸಿದ್ಧತೆಗೆ ರಾಜ್ಯ ಸರ್ಕಾರ ಒತ್ತು ನೀಡಿದೆ. ಆದರೆ, ಯೋಜನೆಗೆ ಸಂಬಂಧಿಸಿದ ರಾಜಕೀಯ ಹಾಗೂ ಕಾನೂನು ಅಡೆತಡೆಗಳು ಇನ್ನೂ ಬಗೆಹರಿದಿಲ್ಲ.

ಈ ಸಂಬಂಧ ಜಲಸಂಪನ್ಮೂಲ ಸಚಿವ ಎನ್. ಚೆಲುವರಾಯಸ್ವಾಮಿ ಹಾಗೂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಅವರು ದೆಹಲಿಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸಚಿವರನ್ನು ಭೇಟಿಯಾಗಿ ಚರ್ಚಿಸಿದ್ದಾರೆ.

ಮಂಡ್ಯ ಜಿಲ್ಲಾಧಿಕಾರಿಯನ್ನು ಯೋಜನೆಯ ಸಮನ್ವಯಕ್ಕಾಗಿ ನೋಡಲ್ ಅಧಿಕಾರಿಯಾಗಿ ನೇಮಿಸಲಾಗಿದೆ. ಈಗಾಗಲೇ 1,250 ಎಕರೆ ಭೂಮಿಯನ್ನು ಗುರುತಿಸಲಾಗಿದೆ. ಶೀಘ್ರದಲ್ಲೇ ಮತ್ತೊಂದು 1,250 ಎಕರೆ ಭೂಮಿಯನ್ನು ಗುರುತಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಈ ಸಂಬಂಧ ಚೆಲುವರಾಯಸ್ವಾಮಿ ಅವರು ಇತ್ತೀಚೆಗೆ 13 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಇತರ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ಸಭೆಯನ್ನೂ ನಡೆಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಕೂಟದ ಬೃಹತ್ ರ‍್ಯಾಲಿಗೆ ರಾಮಲೀಲಾ ಮೈದಾನ ಸಜ್ಜು: ದೆಹಲಿಗೆ ರಾಜಕೀಯ ನಾಯಕರ, ಬೆಂಬಲಿಗರ ಆಗಮನ

ಕನ್ನಡ ಕೇವಲ ಭಾಷೆಯಲ್ಲ, ನಮ್ಮ ಅಸ್ಮಿತೆ, ಆತ್ಮಗೌರವ: ಕನ್ನಡದ ಕಂಪು ಜಗದಗಲ ಪಸರಿಸಲಿ; ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವ ಶುಭಾಶಯ ಕೋರಿದ ಸಿಎಂ

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಶಿಕ್ಷೆ ಕೊಡಿಸಿದ್ದ ತನಿಖಾಧಿಕಾರಿಗಳು ಸೇರಿ ರಾಜ್ಯ 6 ಅಧಿಕಾರಿಗಳಿಗೆ ಕೇಂದ್ರ ಗೃಹಮಂತ್ರಿ ದಕ್ಷತಾ ಪದಕ!

ಸರ್ಕಾರದ ರಾಜೀನಾಮೆಗೆ ಆಗ್ರಹ: ಮಣಿಪುರದಲ್ಲಿ ಸಾವಿರಾರು ಜನರ ಪ್ರತಿಭಟನೆ, ಕೇಂದ್ರಕ್ಕೆ 'ಅಂತಿಮ ಕರೆ'

ಜಿ20 ರಾಷ್ಟ್ರಗಳ ವಿದೇಶಾಂಗ ಸಚಿವರೊಂದಿಗೆ ವಿದೇಶಾಂಗ ಸಚಿವ ಜೈಶಂಕರ್ ದ್ವಿಪಕ್ಷೀಯ ಸಭೆ: ಉಕ್ರೇನ್ ಸಂಘರ್ಷದ ಬಗ್ಗೆ ಚರ್ಚೆ