ಸಂಗ್ರಹ ಚಿತ್ರ 
ರಾಜ್ಯ

ಸಾಗರದಲ್ಲಿ KSRTC ಬಸ್ ಭೀಕರ ಅಪಘಾತ; ಆಕ್ಸಲ್ ತುಂಡಾಗಿ ಪಲ್ಟಿ, ಚಾಲಕ, ನಿರ್ವಾಹಕ ಸೇರಿ 13 ಮಂದಿಗೆ ಗಾಯ

ಘಟನೆಯಲ್ಲಿ ಚಾಲಕ, ನಿರ್ವಾಹಕ ಸೇರಿದಂತೆ 13 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣ ಸಾಗರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಶಿವಮೊಗ್ಗ: ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನ ಆಕ್ಸಲ್ ಬ್ಲೇಡ್ ತುಂಡಾಗಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಬಸ್ ಪಲ್ಟಿಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಪಟ್ ಕಲ್ಯಾಣ ಮಂಟಪದ ಬಳಿ ನಡೆದಿದೆ.

ಬಸ್ ಬೆಂಗಳೂರಿನಿಂದ ಸಾಗರಕ್ಕೆ ತೆರಳುತ್ತಿತ್ತು. ಮಾರ್ಗಮಧ್ಯೆ ಬಸ್‌ನ ಆಕ್ಸಲ್ ಬ್ಲೇಡ್ ತುಂಡಾದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮೇಲೆ ಬಸ್ ಪಲ್ಟಿಯಾಗಿದೆ. ಅಪಘಾತದ ವೇಳೆ ಬಸ್‌ನಲ್ಲಿ ಚಾಲಕ ಮತ್ತು ನಿರ್ವಾಹಕ ಸೇರಿದಂತೆ ಒಟ್ಟು 41 ಮಂದಿ ಪ್ರಯಾಣಿಕರಿದ್ದರು.

ಘಟನೆಯಲ್ಲಿ ಚಾಲಕ, ನಿರ್ವಾಹಕ ಸೇರಿದಂತೆ 13 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣ ಸಾಗರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬಸ್‌ನಲ್ಲಿದ್ದ ಎಲ್ಲ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಾಗರ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕನ್ನಡ ಬಾವುಟದ ವಿನ್ಯಾಸ ಬದಲು: ಹಳದಿ-ಕೆಂಪು ಕನ್ನಡ ಧ್ವಜಕ್ಕೆ ಮತ್ತೊಂದು ಬಣ್ಣ, ಮಧ್ಯದಲ್ಲಿ ರಾಜ್ಯ ಲಾಂಛನ; ಡಿಕೆಶಿ ಮಹತ್ವದ ಘೋಷಣೆ

71ನೇ ಕನ್ನಡ ರಾಜ್ಯೋತ್ಸವ: ನಾಡದೇವತೆ ಭುವನೇಶ್ವರಿಗೆ ಪುಷ್ಪಾರ್ಚನೆ; ಧ್ವಜಾರೋಹಣ ನೆರವೇರಿಸಿದ ಸಿಎಂ ಡಿಕೆ.ಶಿವಕುಮಾರ್

INDIA ಕೂಟದ ಬೃಹತ್ ರ‍್ಯಾಲಿಗೆ ರಾಮಲೀಲಾ ಮೈದಾನ ಸಜ್ಜು: ದೆಹಲಿಗೆ ರಾಜಕೀಯ ನಾಯಕರ, ಬೆಂಬಲಿಗರ ಆಗಮನ

ಕನ್ನಡ ಕೇವಲ ಭಾಷೆಯಲ್ಲ, ನಮ್ಮ ಅಸ್ಮಿತೆ, ಆತ್ಮಗೌರವ: ಕನ್ನಡದ ಕಂಪು ಜಗದಗಲ ಪಸರಿಸಲಿ; ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವ ಶುಭಾಶಯ ಕೋರಿದ ಸಿಎಂ

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಶಿಕ್ಷೆ ಕೊಡಿಸಿದ್ದ ತನಿಖಾಧಿಕಾರಿಗಳು ಸೇರಿ ರಾಜ್ಯ 6 ಅಧಿಕಾರಿಗಳಿಗೆ ಕೇಂದ್ರ ಗೃಹಮಂತ್ರಿ ದಕ್ಷತಾ ಪದಕ!