ಮಧುಗೌಡ ದಂಪತಿ 
ರಾಜ್ಯ

ಮೈಸೂರು: ಯೂಟ್ಯೂಬರ್ ಮಧು ಗೌಡ ಪತಿ ವಿರುದ್ಧ ಹಿಟ್ & ರನ್ ಆರೋಪ; ಪ್ರಕರಣ ದಾಖಲು, ಕಾರು ಸೀಜ್ !

ಅಪಘಾತದ ಪರಿಣಾಮ ಅಭಿಷೇಕ್ ಅವರ ಕೈ ಮತ್ತು ಕಾಲುಗಳಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ಮೂಳೆ ಮುರಿತವೂ ಸಂಭವಿಸಿದೆ ಎಂದು ವರದಿಯಾಗಿದೆ. ಗಾಯಾಳು ಅಭಿಷೇಕ್ ತಮ್ಮ ಒಂಬತ್ತು ತಿಂಗಳ ಮಗುವಿನ ನಾಮಕರಣ ಕಾರ್ಯಕ್ರಮದ ಸಿದ್ಧತೆಯಲ್ಲಿ ತೊಡಗಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ.

ಮೈಸೂರು: ಯೂಟ್ಯೂಬರ್ ಮಧು ಗೌಡ ಅವರ ಪತಿ ನಿಖಿಲ್ ರವೀಂದ್ರ ವಿರುದ್ಧ ರಸ್ತೆ ಅಪಘಾತದ ಬಳಿಕ ಸ್ಥಳದಿಂದ ತೆರಳಿದ ಆರೋಪ ಕೇಳಿಬಂದಿದೆ. ಈ ಸಂಬಂಧ ಮೈಸೂರಿನ ವಿ.ವಿ.ಪುರಂ ಸಂಚಾರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಪೊಲೀಸರು ಕಾರನ್ನು ವಶಕ್ಕೆ ಪಡೆದಿದ್ದಾರೆ.

ಘಟನೆಗೆ ಸಂಬಂಧಿಸಿದ ಸಿಸಿಟಿವಿ ದೃಶ್ಯಾವಳಿಗಳು ಲಭ್ಯವಾಗಿವೆ ಎನ್ನಲಾಗಿದ್ದು, ಪ್ರಕರಣದ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ನಿಖಿಲ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಅದೇ ಮಾರ್ಗದಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದ ಅಭಿಷೇಕ್ ಎಂಬುವವರಿಗೆ ಡಿಕ್ಕಿ ಹೊಡೆದಿದ್ದಾರೆ ಎಂಬುದು ದೂರುದಾರರ ಆರೋಪವಾಗಿದೆ.

ಅಪಘಾತದ ಪರಿಣಾಮ ಅಭಿಷೇಕ್ ಅವರ ಕೈ ಮತ್ತು ಕಾಲುಗಳಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ಮೂಳೆ ಮುರಿತವೂ ಸಂಭವಿಸಿದೆ ಎಂದು ವರದಿಯಾಗಿದೆ. ಗಾಯಾಳು ಅಭಿಷೇಕ್ ತಮ್ಮ ಒಂಬತ್ತು ತಿಂಗಳ ಮಗುವಿನ ನಾಮಕರಣ ಕಾರ್ಯಕ್ರಮದ ಸಿದ್ಧತೆಯಲ್ಲಿ ತೊಡಗಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ.

ಮಾಹಿತಿಯ ಪ್ರಕಾರ, ಆಯುಧ ಪೂಜೆಯ ದಿನವಾದ ಅಕ್ಟೋಬರ್ 20ರ ಸಂಜೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಮರುದಿನ ತಮ್ಮ ಒಂಬತ್ತು ತಿಂಗಳ ಮಗುವಿನ ನಾಮಕರಣ ಕಾರ್ಯಕ್ರಮದ ಸಿದ್ಧತೆಗಾಗಿ ಚೌಟ್ರಿಗೆ ತೆರಳಿ ಮನೆಗೆ ವಾಪಸಾಗುತ್ತಿದ್ದ ಅಭಿಷೇಕ್ ಎಂಬುವವರ ಬೈಕ್‌ಗೆ ಕಾರೊಂದು ಡಿಕ್ಕಿ ಹೊಡೆದಿದೆ ಎಂದು ಆರೋಪಿಸಲಾಗಿದೆ.

ಮೈಸೂರಿನ ವಿಜಯನಗರ 4ನೇ ಹಂತದ ಕಜಾರಿಯಾ ಹೋಟೆಲ್ ಸಮೀಪ ಈ ಅಪಘಾತ ಸಂಭವಿಸಿದೆ ಎನ್ನಲಾಗಿದ್ದು, ಅಪಘಾತದ ರಭಸಕ್ಕೆ ಅಭಿಷೇಕ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರ ಬಲಗೈನ ಬೆರಳಿನ ಭಾಗಕ್ಕೆ ತೀವ್ರ ಗಾಯವಾಗಿದ್ದು, ಮೂಳೆ ಮುರಿತದ ಜೊತೆಗೆ ಮುಖ ಹಾಗೂ ಕೈಕಾಲುಗಳಿಗೂ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಇನ್ನು ಅಪಘಾತ ಸಂಭವಿಸಿದ ಬಳಿಕ ಕಾರನ್ನು ನಿಲ್ಲಿಸಿ ಗಾಯಾಳುವಿಗೆ ನೆರವಾಗುವ ಬದಲು ಚಾಲಕ ಸ್ಥಳದಿಂದ ತೆರಳಿದ್ದಾರೆ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ. ಅಪಘಾತದ ಬಳಿಕ ಗಾಯಾಳುವಿನ ಆರೋಗ್ಯ ವಿಚಾರಿಸಿಲ್ಲ ಎಂಬ ಅಂಶವೂ ದೂರಿನಲ್ಲಿ ಉಲ್ಲೇಖವಾಗಿದೆ ಎಂದು ತಿಳಿದುಬಂದಿದೆ. ಸದ್ಯ ದೂರು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಅಪಘಾತಕ್ಕೆ ಸಂಬಂಧಿಸಿದ ಕಾರನ್ನು ಸೀಜ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಕೂಟದ ಬೃಹತ್ ರ‍್ಯಾಲಿಗೆ ರಾಮಲೀಲಾ ಮೈದಾನ ಸಜ್ಜು: ದೆಹಲಿಗೆ ರಾಜಕೀಯ ನಾಯಕರ, ಬೆಂಬಲಿಗರ ಆಗಮನ

ಕನ್ನಡ ಕೇವಲ ಭಾಷೆಯಲ್ಲ, ನಮ್ಮ ಅಸ್ಮಿತೆ, ಆತ್ಮಗೌರವ: ಕನ್ನಡದ ಕಂಪು ಜಗದಗಲ ಪಸರಿಸಲಿ; ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವ ಶುಭಾಶಯ ಕೋರಿದ ಸಿಎಂ

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಶಿಕ್ಷೆ ಕೊಡಿಸಿದ್ದ ತನಿಖಾಧಿಕಾರಿಗಳು ಸೇರಿ ರಾಜ್ಯ 6 ಅಧಿಕಾರಿಗಳಿಗೆ ಕೇಂದ್ರ ಗೃಹಮಂತ್ರಿ ದಕ್ಷತಾ ಪದಕ!

ಸರ್ಕಾರದ ರಾಜೀನಾಮೆಗೆ ಆಗ್ರಹ: ಮಣಿಪುರದಲ್ಲಿ ಸಾವಿರಾರು ಜನರ ಪ್ರತಿಭಟನೆ, ಕೇಂದ್ರಕ್ಕೆ 'ಅಂತಿಮ ಕರೆ'

ಜಿ20 ರಾಷ್ಟ್ರಗಳ ವಿದೇಶಾಂಗ ಸಚಿವರೊಂದಿಗೆ ವಿದೇಶಾಂಗ ಸಚಿವ ಜೈಶಂಕರ್ ದ್ವಿಪಕ್ಷೀಯ ಸಭೆ: ಉಕ್ರೇನ್ ಸಂಘರ್ಷದ ಬಗ್ಗೆ ಚರ್ಚೆ