ಅಡ್ಡಂಡ ಸಿ ಕಾರ್ಯಪ್ಪ ಮುಖಕ್ಕೆ ಮಸಿ  
ರಾಜ್ಯ

'ಗಾಂಧಿ ಹತ್ಯೆಯ ಸತ್ಯ' ನಾಟಕ ಪ್ರದರ್ಶನ: ಬೆಂಗಳೂರಿನಲ್ಲಿ ಅಡ್ಡಂಡ ಕಾರ್ಯಪ್ಪ ಮುಖಕ್ಕೆ ಮಸಿ ಬಳಿದ ಕಾಂಗ್ರೆಸ್ ಕಾರ್ಯಕರ್ತರು; Video

ಬನಶಂಕರಿಯಲ್ಲಿರುವ ಸುಚಿತ್ರಾ ಸಿನಿಮಾ ಮತ್ತು ಸಾಂಸ್ಕೃತಿಕ ಅಕಾಡೆಮಿಯಲ್ಲಿ ನಿನ್ನೆ ಸಂಜೆ ರಾಜಕೀಯ ಕಾರ್ಯಕರ್ತರು ಹಾಗೂ ನಾಟಕದ ಆಯೋಜಕರ ನಡುವೆ ಸಂಘರ್ಷ ಉಂಟಾಗಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ವೇಳೆ ನಾಟಕಕಾರ ಹಾಗೂ ನಿರ್ದೇಶಕ ಅಡ್ಡಂಡ ಸಿ. ಕಾರ್ಯಪ್ಪ ಅವರಿಗೆ ಕಪ್ಪು ಮಸಿ ಬಳಿಯಲಾಗಿದೆ.

ಬೆಂಗಳೂರು: ನಿನ್ನೆ ಶನಿವಾರ ಸಂಜೆ ಬೆಂಗಳೂರಿನ ಬನಶಂಕರಿಯ ಸುಚಿತ್ರಾ ಅಕಾಡೆಮಿಯಲ್ಲಿ ನಾಟಕ ಪ್ರದರ್ಶನ ನಡೆಯುತ್ತಿದ್ದ ವೇಳೆ ನಾಟಕಕಾರ ಹಾಗೂ ರಂಗ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರ ಗುಂಪೊಂದು ಮಸಿ ಬಳಿದ ಘಟನೆ ನಡೆದಿದೆ.

ಬನಶಂಕರಿಯಲ್ಲಿರುವ ಸುಚಿತ್ರಾ ಸಿನಿಮಾ ಮತ್ತು ಸಾಂಸ್ಕೃತಿಕ ಅಕಾಡೆಮಿಯಲ್ಲಿ ನಿನ್ನೆ ಸಂಜೆ ರಾಜಕೀಯ ಕಾರ್ಯಕರ್ತರು ಹಾಗೂ ನಾಟಕದ ಆಯೋಜಕರ ನಡುವೆ ಸಂಘರ್ಷ ಉಂಟಾಗಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ವೇಳೆ ನಾಟಕಕಾರ ಹಾಗೂ ನಿರ್ದೇಶಕ ಅಡ್ಡಂಡ ಸಿ. ಕಾರ್ಯಪ್ಪ ಅವರಿಗೆ ಕಪ್ಪು ಮಸಿ ಬಳಿಯಲಾಗಿದೆ.

'ಗಾಂಧಿ ಹತ್ಯೆಯ ಸತ್ಯ' (Gandhi Hattyeya Satya) ಎಂಬ ನಾಟಕದ ಪ್ರದರ್ಶನದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಕಾರ್ಯಪ್ಪ ಅವರ ನಿರ್ದೇಶನದ 'ಗಾಂಧಿ ಹತ್ಯಾ ಸತ್ಯ: ದಿ ಟ್ರೂತ್ ಆಫ್ ಗಾಂಧೀಸ್ ಮರ್ಡರ್' ನಾಟಕದ ಪ್ರದರ್ಶನ ನಡೆಯುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ನಾಟಕದಲ್ಲಿನ ಕೆಲವು ಸಂಭಾಷಣೆಗಳು ಪ್ರೇಕ್ಷಕರ ಆಕ್ರೋಶಕ್ಕೆ ಕಾರಣವಾಗಿದ್ದು, ಮಹಾತ್ಮ ಗಾಂಧಿ ಅವರನ್ನು ದೇಶದ್ರೋಹಿ ಎಂದು ಉಲ್ಲೇಖಿಸಿರುವುದು ವಿವಾದಕ್ಕೆ ಕಾರಣವಾಗಿದೆ ಎನ್ನಲಾಗಿದೆ.

ಪ್ರತ್ಯಕ್ಷದರ್ಶಿಗಳ ಪ್ರಕಾರ, ಕಾಂಗ್ರೆಸ್ ಕಾರ್ಯಕರ್ತರ ಗುಂಪೊಂದು ಅಕಾಡೆಮಿ ಆವರಣಕ್ಕೆ ನುಗ್ಗಿ ನಾಟಕದ ನಿರ್ದೇಶಕರನ್ನು ತರಾಟೆಗೆ ತೆಗೆದುಕೊಂಡಿದೆ. ನಾಟಕದಲ್ಲಿ ಮಹಾತ್ಮ ಗಾಂಧಿ ಅವರನ್ನು ಅವಹೇಳನಕಾರಿಯಾಗಿ ಚಿತ್ರಿಸಲಾಗಿದೆ ಹಾಗೂ ಅವರನ್ನು ತಪ್ಪಾಗಿ 'ದೇಶವಿರೋಧಿ' ಎಂದು ಬಿಂಬಿಸಲಾಗಿದೆ ಎಂದು ಪ್ರತಿಭಟನಾಕಾರರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ವೇಳೆ ಎರಡೂ ಗುಂಪುಗಳ ನಡುವಿನ ವಾಗ್ವಾದ ತೀವ್ರಗೊಂಡು ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. ಈ ಗಲಾಟೆಯ ಸಂದರ್ಭದಲ್ಲಿ ಕಾರ್ಯಪ್ಪ ಅವರ ಮೇಲೆ ಮಸಿ ಎರಚಲಾಗಿದೆ. ಘಟನೆ ಬಳಿಕ ಎರಡೂ ಗುಂಪುಗಳು ಪೊಲೀಸರನ್ನು ಸಂಪರ್ಕಿಸಿ ಪರಸ್ಪರ ದೂರುಗಳನ್ನು ದಾಖಲಿಸಿವೆ.

ಘಟನೆಯನ್ನು ದೃಢಪಡಿಸಿರುವ ದಕ್ಷಿಣ ವಿಭಾಗದ ಉಪ ಪೊಲೀಸ್ ಆಯುಕ್ತ ಡಾ. ಕೆ. ವಂಶಿ ಕೃಷ್ಣ, ಎರಡು ಗುಂಪುಗಳ ನಡುವಿನ ಸಂಘರ್ಷದ ವೇಳೆ ನಾಟಕದ ನಿರ್ದೇಶಕರಿಗೆ ಮಸಿ ಬಳಿಯಲಾಗಿದೆ ಎಂದು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಎರಡೂ ಕಡೆಯಿಂದ ದೂರುಗಳು ಬಂದಿವೆ. ತನಿಖೆ ಆರಂಭಿಸಲಾಗಿದ್ದು, ತನಿಖೆಯ ವರದಿಯನ್ನು ಆಧರಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

71ನೇ ಕನ್ನಡ ರಾಜ್ಯೋತ್ಸವ: ನಾಡದೇವತೆ ಭುವನೇಶ್ವರಿಗೆ ಪುಷ್ಪಾರ್ಚನೆ; ಧ್ವಜಾರೋಹಣ ನೆರವೇರಿಸಿದ ಸಿಎಂ ಡಿಕೆ.ಶಿವಕುಮಾರ್

INDIA ಕೂಟದ ಬೃಹತ್ ರ‍್ಯಾಲಿಗೆ ರಾಮಲೀಲಾ ಮೈದಾನ ಸಜ್ಜು: ದೆಹಲಿಗೆ ರಾಜಕೀಯ ನಾಯಕರ, ಬೆಂಬಲಿಗರ ಆಗಮನ

ಕನ್ನಡ ಕೇವಲ ಭಾಷೆಯಲ್ಲ, ನಮ್ಮ ಅಸ್ಮಿತೆ, ಆತ್ಮಗೌರವ: ಕನ್ನಡದ ಕಂಪು ಜಗದಗಲ ಪಸರಿಸಲಿ; ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವ ಶುಭಾಶಯ ಕೋರಿದ ಸಿಎಂ

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಶಿಕ್ಷೆ ಕೊಡಿಸಿದ್ದ ತನಿಖಾಧಿಕಾರಿಗಳು ಸೇರಿ ರಾಜ್ಯ 6 ಅಧಿಕಾರಿಗಳಿಗೆ ಕೇಂದ್ರ ಗೃಹಮಂತ್ರಿ ದಕ್ಷತಾ ಪದಕ!

ಸರ್ಕಾರದ ರಾಜೀನಾಮೆಗೆ ಆಗ್ರಹ: ಮಣಿಪುರದಲ್ಲಿ ಸಾವಿರಾರು ಜನರ ಪ್ರತಿಭಟನೆ, ಕೇಂದ್ರಕ್ಕೆ 'ಅಂತಿಮ ಕರೆ'