ಕೃಪಾ ಆಳ್ವಾ ಮತ್ತು ಸಿದ್ದರಾಮಯ್ಯ 
ರಾಜ್ಯ

ಸ್ಟಿಂಗ್ ಆಪರೇಷನ್ ಕೇಸ್: ಕೃಪಾ ಆಳ್ವಾ ಸೇರಿ ಮೂವರಿಗೆ ಬಿಗ್ ರಿಲೀಫ್; ನಿರೀಕ್ಷಣಾ ಜಾಮೀನು ಮಂಜೂರು!

ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಕೇಂದ್ರ ಸಚಿವ ಎಚ್​​ಡಿ ಕುಮಾರಸ್ವಾಮಿ ಹೆಸರು ಕೇಳಿಬಂದಿದ್ದು, ಮಹತ್ವದ ತಿರುವು ಪಡೆದುಕೊಂಡಿದೆ.

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಉಚ್ಛಾಟಿತ ಕಾಂಗ್ರೆಸ್‌ ನಾಯಕಿ ಕೃಪಾ ಆಳ್ವಾ ಸೇರಿದಂತೆ ಮೂವರಿಗೆ ಬೆಂಗಳೂರು ಕೋರ್ಟ್‌ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಕೇಂದ್ರ ಸಚಿವ ಎಚ್​​ಡಿ ಕುಮಾರಸ್ವಾಮಿ ಹೆಸರು ಕೇಳಿಬಂದಿದ್ದು, ಮಹತ್ವದ ತಿರುವು ಪಡೆದುಕೊಂಡಿದೆ.

ಇದರ ಬೆನ್ನಲ್ಲೇ ಪ್ರಕರಣದ ಪ್ರಮುಖ ಆರೋಪಿಗಳಾಗಿರುವ ಕೃಪಾ ಆಳ್ವಾ, ವಿನೋದ್ ಕುಮಾರ್ ಹಾಗೂ ಪ್ರಶಾಂತ್ ಕುಮಾರ್ ಅವರಿಗೆ ಬೆಂಗಳೂರಿನ 66ನೇ ಸಿಸಿಹೆಚ್ ಕೋರ್ಟ್​ ನಿರೀಕ್ಷಣಾ ಜಾಮೀನು ನೀಡಿ ಆದೇಶ ಹೊರಡಿಸಿದೆ.

ತನಿಖಾಧಿಕಾರಿಗಳು(IO) ತನಿಖೆಗೆ ಕರೆದಾಗ ಆರೋಪಿಗಳು ತನಿಖೆಗೆ ಸಹಕರಿಸಬೇಕು. ಸಾಕ್ಷಿಗಳಿಗೆ ಯಾವುದೇ ರೀತಿಯ ಬೆದರಿಕೆ ಅಥವಾ ಪ್ರಭಾವ ಬೀರುವಂತಿಲ್ಲ ಎಂದು ಕೋರ್ಟ್ ಷರತ್ತು ವಿಧಿಸಿದೆ.

ಸ್ಟಿಂಗ್‌ ಆಪರೇಷನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ ಅವರಿಗೆ ನೋಟಿಸ್‌ ನೀಡಿದರೂ ಪ್ರತಿಕ್ರಿಯಿಸಿರಲಿಲ್ಲ. ಹೀಗಾಗಿ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರ ಸೂಚನೆ ಮೇರೆಗೆ ಕೃಪಾ ಆಳ್ವಾ ಅವರನ್ನ ಕಾಂಗ್ರೆಸ್‌ನಿಂದ ಉಚ್ಚಾಟನೆ ಮಾಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜಾತಿ ಬಲದಿಂದಲೇ HDK ಸಿಎಂ ಆಗಿದ್ದು, ನಾನೂ ಎಲ್ಲವನ್ನು ಬಿಟ್ಟು ನಿಂತರೆ ಕಷ್ಟವಾಗುತ್ತೆ: ಪ್ರಿಯಾಂಕ್ ಖರ್ಗೆ ಎಚ್ಚರಿಕೆ

ನಿಮ್ಮ ಇತಿಮಿತಿಗಳನ್ನು ತಿಳಿದುಕೊಳ್ಳಿ: SIR ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಇಮ್ರಾನ್ ಖಾನ್ ಹೈಕೋರ್ಟ್ ತರಾಟೆ; ಕ್ಷಮೆಯಾಚನೆಗೆ ತಾಕೀತು!

ನವೆಂಬರ್ 7, ದೀಪಾವಳಿ ಹಬ್ಬದಂದು ದೆಹಲಿ-ಎನ್‌ಸಿಆರ್‌ನಲ್ಲಿ ಹಸಿರು ಪಟಾಕಿ ಸಿಡಿಸಲು 'ಸುಪ್ರೀಂ' ಅನುಮತಿ

ರಸ್ತೆ ಕಾಮಗಾರಿ ವೇಳೆ ಘೋರ ದುರಂತ: ವಿದ್ಯುತ್ ತಗುಲಿ 8 ಕಾರ್ಮಿಕರು ಸಾವು, ಐವರಿಗೆ ಗಾಯ!

Reliance ಎಫೆಕ್ಟ್, ಪುಟಿದೆದ್ದ ಷೇರುಮಾರುಕಟ್ಟೆ; Sensex 1,233 ಅಂಕ ಏರಿಕೆ, ಒಂದೇ ದಿನ ₹7 ಲಕ್ಷ ಕೋಟಿ ಲಾಭ!