ಡಾ ಕೆ ಸುಧಾಕರ್ 
ರಾಜ್ಯ

ನಿಮಗೆ ರೈತರ ಮೇಲೆ ನಿಜವಾದ ಕಾಳಜಿ ಇದ್ದರೆ.... ಕಾಂಗ್ರೆಸ್ ಸರ್ಕಾರಕ್ಕೆ ಯೋಗ್ಯತೆ ಇದ್ದರೆ... ಸಂಸದ ಸುಧಕಾರ್ ಸವಾಲು!

ರೈತರಿಗೆ ಹೆಚ್ಚಿನ ಬೆಲೆ ನೀಡುವ ನಿಜವಾದ ಕಾಳಜಿ ಸರ್ಕಾರಕ್ಕಿದ್ದರೆ ರಾಜ್ಯದ ಬೊಕ್ಕಸದಿಂದಲೇ ಪ್ರತಿ ಲೀಟರ್ ಹಾಲಿಗೆ 10 ಸಹಾಯಧನ ನೀಡಲಿ. ಇದರಿಂದ ರೈತರಿಗೆ ಉತ್ತಮ ಬೆಲೆ ದೊರೆಯುವುದರ ಜತೆಗೆ ಗ್ರಾಹಕರಿಗೂ ಕೈಗೆಟುಕುವ ದರದಲ್ಲಿ ಹಾಲು ಸಿಗಲಿದೆ.

ಬೆಂಗಳೂರು: ರೈತರಿಗೆ ಹಾಲಿನ ಖರೀದಿ ದರ ಹೆಚ್ಚಿಸುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ ರೈತರ ಹೆಸರಿನಲ್ಲಿ ಹಾಲಿನ ದರ ಏರಿಕೆ ಮಾಡಿ ಬಡ ಮಕ್ಕಳು, ಕೂಲಿ ಕಾರ್ಮಿಕರು ಹಾಗೂ ಜನಸಾಮಾನ್ಯರ ಮೇಲೆ ಆರ್ಥಿಕ ಹೊರೆ ಹೇರುವುದು ಸರಿಯಲ್ಲ ಎಂದು ಸಂಸದ ಡಾ.ಕೆ.ಸುಧಾಕರ್ ಆಗ್ರಹಿಸಿದ್ದಾರೆ

ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು ರೈತರಿಗೆ ನ್ಯಾಯಯುತ ಬೆಲೆ ಒದಗಿಸುವ ಜವಾಬ್ದಾರಿ ಸರ್ಕಾರದ್ದಾಗಿದ್ದು, ಪ್ರತಿ ಲೀಟರ್ ಹಾಲಿಗೆ ಹೆಚ್ಚುವರಿಯಾಗಿ 10 ಸಹಾಯ ಧನವನ್ನು ಸರ್ಕಾರವೇ ತನ್ನ ಬೊಕ್ಕಸದಿಂದ ಭರಿಸಬೇಕು ಎಂದು ಹೇಳಿದರು.

ರೈತರಿಗೆ ಹಾಲಿನ ಖರೀದಿ ದರವನ್ನು 7ರ ಬದಲಿಗೆ 10 ಹೆಚ್ಚಿಸಿದರೂ ತಮ್ಮ ಆಕ್ಷೇಪವಿಲ್ಲ. ಆದರೆ ಈ ಹೆಚ್ಚುವರಿ ಮೊತ್ತವನ್ನು ಗ್ರಾಹಕರಿಂದ ವಸೂಲಿ ಮಾಡುವ ಮೂಲಕ ಬಡ ಕುಟುಂಬಗಳು, ಹಾಲು ಅವಲಂಬಿಸಿರುವ ಮಕ್ಕಳು, ಕೂಲಿ ಕಾರ್ಮಿಕರು ಹಾಗೂ ಸಣ್ಣ ಕಾಫಿ, ಟೀ ಅಂಗಡಿ ಮಾಲೀಕರಿಗೆ ತೊಂದರೆ ಉಂಟುಮಾಡುವುದು ಸಮಂಜಸವಲ್ಲ ಎಂದು ಅಭಿಪ್ರಾಯಪಟ್ಟರು.

ರೈತರಿಗೆ ಹೆಚ್ಚಿನ ಬೆಲೆ ನೀಡುವ ನಿಜವಾದ ಕಾಳಜಿ ಸರ್ಕಾರಕ್ಕಿದ್ದರೆ ರಾಜ್ಯದ ಬೊಕ್ಕಸದಿಂದಲೇ ಪ್ರತಿ ಲೀಟರ್ ಹಾಲಿಗೆ 10 ಸಹಾಯಧನ ನೀಡಲಿ. ಇದರಿಂದ ರೈತರಿಗೆ ಉತ್ತಮ ಬೆಲೆ ದೊರೆಯುವುದರ ಜತೆಗೆ ಗ್ರಾಹಕರಿಗೂ ಕೈಗೆಟುಕುವ ದರದಲ್ಲಿ ಹಾಲು ಸಿಗಲಿದೆ. ರೈತರು ಮತ್ತು ಗ್ರಾಹಕರಿಬ್ಬರ ಹಿತಾಸಕ್ತಿ ಕಾಪಾಡುವುದು ಸರ್ಕಾರದ ಕರ್ತವ್ಯ ಎಂದು ಹೇಳಿದರು.

ತಮ್ಮ ಹೇಳಿಕೆಗಳನ್ನು ತಿರುಚಿ ವೈಯಕ್ತಿಕವಾಗಿ ಟೀಕೆ ಮಾಡುತ್ತಿರುವ ಚಿಮುಲ್ ಅಧ್ಯಕ್ಷರು ಮೊದಲು ರೈತರ ಹಿತಾಸಕ್ತಿಯ ಬಗ್ಗೆ ತಮ್ಮ ಬದ್ಧತೆಯನ್ನು ತೋರಿಸಲಿ ಎಂದು ತಿರುಗೇಟು ನೀಡಿದರು. ಮುಖ್ಯಮಂತ್ರಿ ಹಾಗೂ ಚಿಮುಲ್ ಅಧ್ಯಕ್ಷರು ರೈತರ ಬಗ್ಗೆ ನಿಜವಾದ ಕಾಳಜಿ ಹೊಂದಿದ್ದರೆ ಸರ್ಕಾರವೇ ಹೆಚ್ಚುವರಿ ಸಹಾಯಧನದ ಹೊಣೆ ಹೊರಲು ಸಿದ್ಧವಿದೆಯೇ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಸವಾಲು ಹಾಕಿದರು.

ರೈತರ ಹೆಸರಿನಲ್ಲಿ ಬಡವರ ಜೇಬಿಗೆ ಹೊರೆ ಹಾಕುವುದು ಸರಿಯಾದ ಆಡಳಿತ ನೀತಿಯಲ್ಲ. ರೈತರಿಗೆ ನ್ಯಾಯಯುತ ಆದಾಯ ದೊರೆಯಬೇಕು ಎಂಬುದರಲ್ಲಿ ಎರಡು ಮಾತಿಲ್ಲ. ಅದೇ ರೀತಿ ಹಾಲು ಸಾಮಾನ್ಯ ಜನರ ದೈನಂದಿನ ಅಗತ್ಯವಾಗಿರುವುದರಿಂದ ಅದರ ಬೆಲೆ ಜನಸಾಮಾನ್ಯರ ಕೈಗೆಟುಕು ವಂತಿರಬೇಕು. ಈ ಎರಡೂ ಜವಾಬ್ದಾರಿಗಳನ್ನು ಸರ್ಕಾರ ಸಮತೋಲನದಿಂದ ನಿಭಾಯಿಸಬೇಕು ಎಂದು ಪ್ರತಿಪಾದಿಸಿದರು.

ರೈತರಿಗೆ ಹೆಚ್ಚಿನ ಬೆಲೆ ನೀಡುವ ನಿರ್ಧಾರವನ್ನು ಸ್ವಾಗತಿಸುವುದರ ಜತೆಗೆ, ಅದರ ಸಂಪೂರ್ಣ ಹೊರೆ ಗ್ರಾಹಕರ ಮೇಲೆ ಬೀಳದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಪ್ರತಿ ಲೀಟರ್ ಹಾಲಿಗೆ 10 ಸಹಾಯಧನ ನೀಡುವ ತಮ್ಮ ಸಲಹೆಯನ್ನು ಮುಖ್ಯಮಂತ್ರಿ ಹಾಗೂ ಚಿಮುಲ್ ಅಧ್ಯಕ್ಷರು ಪರಿಗಣಿಸಬೇಕು ಎಂದು ಡಾ.ಕೆ.ಸುಧಾಕರ್ ಒತ್ತಾಯಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಆಂಧ್ರ ಕರಾವಳಿಗೆ ಅಪ್ಪಳಿಸಿದ ‘ಮುರಸು’ ಚಂಡಮಾರುತ; ಭಾರೀ ಮಳೆ, ಗಂಟೆಗೆ 120 ಕಿ.ಮೀ ವೇಗದಲ್ಲಿ ಬಿರುಗಾಳಿ; Video

ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ HDK ಕೈವಾಡ. ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯಲು ಸ್ಕೆಚ್: ಸಚಿವ ಕೃಷ್ಣ ಬೈರೇಗೌಡ ಗಂಭೀರ ಆರೋಪ..!

ಹಳೇ ಬಿಲ್ ಪಾವತಿಸದಿದ್ದರೆ ಹೊಸ ಕಾಮಗಾರಿ ಕೈಗೆತ್ತಿಕೊಳ್ಳಲ್ಲ: 38 ಸಾವಿರ ಕೋಟಿ ರೂ. ಬಾಕಿ ಇತ್ಯರ್ಥಪಡಿಸಿ, ಸರ್ಕಾರಕ್ಕೆ ಗುತ್ತಿಗೆದಾರರ ಖಡಕ್ ಎಚ್ಚರಿಕೆ..!

Sting operation ವಿವಾದ: ಉದ್ದೇಶಪೂರ್ವಕವಾಗಿ ಕಾಂಗ್ರೆಸ್‌ನಿಂದ ದ್ವೇಷದ ರಾಜಕಾರಣ; HDK ಪರ ಬ್ಯಾಟ್ ಬೀಸಿದ ಕೇಂದ್ರ ಸಚಿವ ವಿ. ಸೋಮಣ್ಣ

ಹಾಲಿನ ಬೆಲೆ ಏರಿಕೆ ಹಿಂಪಡೆಯಿರಿ, ಇಲ್ಲವೇ ಅಧಿಕಾರದಿಂದ ಕೆಳಗಿಳಿಯಿರಿ: ಡಿಕೆ.ಶಿವಕುಮಾರ್ ಸರ್ಕಾರಕ್ಕೆ ಶೋಭಾ ಕರಂದ್ಲಾಜೆ ಆಗ್ರಹ