ವಿಜಯೇಂದ್ರ ವಿರುದ್ಧ ಕಾಂಗ್ರೆಸ್ ಪೋಸ್ಟರ್ ಸಮರ Online Desk
ರಾಜ್ಯ

RTGS ಚೋರ್ ಬಿವೈ ವಿಜಯೇಂದ್ರ: ಈ ನನ್ ಮಕ್ಕಳು ಎಂದಿದ್ದಕ್ಕೆ BYV ಮನೆ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪೋಸ್ಟರ್ ಸಮರ

ವಿಜಯೇಂದ್ರ ಅವರ "ಈ ನನ್ನ ಮಕ್ಕಳು ಕಾಂಗ್ರೆಸ್‌ನವರು ಇದ್ದಾರಲ್ಲಾ..." ಎಂಬ ಹೇಳಿಕೆ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪೋಸ್ಟರ್ ಸಮರ ಆರಂಭಿಸಿದ್ದು, ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪ ನಿವಾಸ ಹಾಗೂ ವಿಜಯೇಂದ್ರ ಮನೆ ಬಳಿ ಪೋಸ್ಟರ್ ಅಂಟಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸುವಾಗ, ಏಕವಚನದಲ್ಲಿ "ಈ ನನ್ನ ಮಕ್ಕಳು ಕಾಂಗ್ರೆಸ್‌ನವರು ಇದ್ದಾರಲ್ಲಾ..." ಎಂದು ಮಾತನಾಡಿದ್ದರು. ಇದರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪೋಸ್ಟರ್ ಸಮರ ಆರಂಭಿಸಿದ್ದು, ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಿವಾಸ ಹಾಗೂ ವಿಜಯೇಂದ್ರ ಅವರ ಮನೆ ಬಳಿ ಪೋಸ್ಟರ್ ಅಂಟಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ವಿಜಯೇಂದ್ರ ಹೇಳಿದ್ದೇನು?

ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಳ ಕಾಯ್ದೆಯನ್ನು ಹೈಕೋರ್ಟ್ ರದ್ದುಪಡಿಸಿದ ವಿಚಾರ ಹಾಗೂ ಹಾಲಿನ ದರ ಏರಿಕೆಯ ಕುರಿತು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ, ದಾವಣಗೆರೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, "ಈ ನನ್ ಮಕ್ಕಳು ಕಾಂಗ್ರೆಸ್ ನವರು ಇದ್ದಾರಲ್ಲಾ..." ಎಂದು ಏಕವಚನದಲ್ಲೇ ಲೇವಡಿ ಮಾಡಿದ್ದರು. ಅವರ ಈ ಆಕ್ರೋಶಭರಿತ ಹೇಳಿಕೆಯ ವಿಡಿಯೋ ಮತ್ತು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಈ ಬೆನ್ನಲ್ಲೇ, ಕಾಂಗ್ರೆಸ್ ಕಾರ್ಯಕರ್ತರು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರ ಮನೆ ಸುತ್ತಮುತ್ತ ಈ ಪೋಸ್ಟರ್‌ಗಳನ್ನು ಅಂಟಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಾಗಾದ್ರೆ, ಪೋಸ್ಟರ್‌ನಲ್ಲಿ ಏನಿದೆ?

ಕಾಂಗ್ರೆಸ್ ಕಾರ್ಯಕರ್ತರು ಅಂಟಿಸಿರುವ ಪೋಸ್ಟರ್‌ಗಳಲ್ಲಿ "RTGS ಚೋರ್ ಬಿ.ವೈ. ವಿಜಯೇಂದ್ರ" ಹಾಗೂ "ನೀನು ಹೇಡಿ, RTGS ಕೇಡಿ" ಎಂಬ ಘೋಷಣೆಗಳನ್ನು ಬರೆಯಲಾಗಿದೆ. ಈ ಮೂಲಕ ವಿಜಯೇಂದ್ರ ವಿರುದ್ಧದ ಹಳೆಯ ಭ್ರಷ್ಟಾಚಾರದ ಆರೋಪಗಳನ್ನು ಕಾಂಗ್ರೆಸ್ ಮತ್ತೊಮ್ಮೆ ಮುಂಚೂಣಿಗೆ ತರಲು ಪ್ರಯತ್ನಿಸಿದೆ.

ಎಲ್ಲೆಲ್ಲಿ ಪೋಸ್ಟರ್ ಅಂಟಿಸಲಾಗಿದೆ?

ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ನಿವಾಸ, ವಿಜಯೇಂದ್ರ ಅವರ ಸ್ವಂತ ಮನೆ ಮಾತ್ರವಲ್ಲದೆ, ನಗರದ ರಾಜಾಜಿನಗರ ಮತ್ತು ಮಂಜುನಾಥನಗರ ಸೇರಿದಂತೆ ಹಲವು ಪ್ರಮುಖ ಪ್ರದೇಶಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಈ ಪೋಸ್ಟರ್‌ಗಳನ್ನು ಅಂಟಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಆಂಧ್ರ ಕರಾವಳಿಗೆ ಅಪ್ಪಳಿಸಿದ ಚಂಡಮಾರುತ ‘ಮುರಸು’; ಧರೆಗುರುಳಿದ ಸಾವಿರಾರು ಮರಗಳು, ಮೀನುಗಾರಿಕೆ ದೋಣಿಗಳಿಗೆ ಹಾನಿ – ಭಾರಿ ಅನಾಹುತ; Video

'ಇನ್ಯಾವತ್ತೂ ಪ್ರತಿಭಟನೆಯಲ್ಲಿ ಭಾಗಿಯಾಗಲ್ಲ'; ಕೊನೆಗೂ ಕ್ಷಮೆ ಯಾಚಿಸಿದ ನಟ Imran Khan, ವಿದೇಶಕ್ಕೆ ತೆರಳಲು ಕೋರ್ಟ್ ಅನುಮತಿ!

Iran ಮೇಲೆ ಮತ್ತೆ ಮುಗಿಬಿದ್ದ ಅಮೆರಿಕ; Qeshm ದ್ವೀಪದ ಮೇಲೆ ವೈಮಾನಿಕ ದಾಳಿ, ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಯುದ್ಧದ ಆತಂಕ..!

ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ HDK ಕೈವಾಡ. ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯಲು ಸ್ಕೆಚ್: ಸಚಿವ ಕೃಷ್ಣ ಬೈರೇಗೌಡ ಗಂಭೀರ ಆರೋಪ..!

ಆಂಧ್ರ ಕರಾವಳಿಗೆ ಅಪ್ಪಳಿಸಿದ ‘ಮುರಸು’ ಚಂಡಮಾರುತ; ಭಾರೀ ಮಳೆ, ಗಂಟೆಗೆ 120 ಕಿ.ಮೀ ವೇಗದಲ್ಲಿ ಬಿರುಗಾಳಿ; Video