ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ 
ರಾಜ್ಯ

ಹಳೇ ಬಿಲ್ ಪಾವತಿಸದಿದ್ದರೆ ಹೊಸ ಕಾಮಗಾರಿ ಕೈಗೆತ್ತಿಕೊಳ್ಳಲ್ಲ: 38 ಸಾವಿರ ಕೋಟಿ ರೂ. ಬಾಕಿ ಇತ್ಯರ್ಥಪಡಿಸಿ, ಸರ್ಕಾರಕ್ಕೆ ಗುತ್ತಿಗೆದಾರರ ಖಡಕ್ ಎಚ್ಚರಿಕೆ..!

ನೀವು ಮುಖ್ಯಮಂತ್ರಿಯಾಗಿ ಆಯ್ಕೆಯಾದ ಬಳಿಕ ಸಂಘದ ಪದಾಧಿಕಾರಿಗಳನ್ನು ಕರೆದು ಚರ್ಚಿಸಿ, ಎರಡು ತಿಂಗಳೊಳಗೆ ಬಾಕಿ ಹಣ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದಿರಿ. ರಾಜ್ಯದ ಎಲ್ಲ ಜಿಲ್ಲೆಗಳಿಗೆ ಪ್ರವಾಸ ಕೈಗೊಂಡು ಸ್ಥಳೀಯ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸುತ್ತಿದ್ದೀರಿ.

ಬೆಂಗಳೂರು: ಬಾಕಿ ಉಳಿದಿರುವ 38,000 ಕೋಟಿ ರೂ. ಬಿಲ್ ಹಣವನ್ನು ತಕ್ಷಣ ಬಿಡುಗಡೆ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘವು ಸೋಮವಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ.

ಮುಖ್ಯಮಂತ್ರಿಗಳೊಂದಿಗೆ ಸುಮಾರು ಎರಡು ಗಂಟೆಗಳ ಕಾಲ ಸಭೆ ನಡೆಸಿದ ಸಂಘದ ಪದಾಧಿಕಾರಿಗಳು ತಮ್ಮ ಬೇಡಿಕೆಗಳ ಕುರಿತು ಮನವಿ ಪತ್ರ ಸಲ್ಲಿಸಿದರು.

ಉಪಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ತಮಗೆ ನೀಡಿದ್ದ ಭರವಸೆಯನ್ನು ಈಡೇರಿಸುವಂತೆ ಡಿ.ಕೆ. ಶಿವಕುಮಾರ್ ಅವರಿಗೆ ನೆನಪಿಸಿದರು.

ನೀವು ಮುಖ್ಯಮಂತ್ರಿಯಾಗಿ ಆಯ್ಕೆಯಾದ ಬಳಿಕ ಸಂಘದ ಪದಾಧಿಕಾರಿಗಳನ್ನು ಕರೆದು ಚರ್ಚಿಸಿ, ಎರಡು ತಿಂಗಳೊಳಗೆ ಬಾಕಿ ಹಣ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದಿರಿ. ರಾಜ್ಯದ ಎಲ್ಲ ಜಿಲ್ಲೆಗಳಿಗೆ ಪ್ರವಾಸ ಕೈಗೊಂಡು ಸ್ಥಳೀಯ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸುತ್ತಿದ್ದೀರಿ. ಆದರೆ, ರಾಜ್ಯದಾದ್ಯಂತ ಇರುವ 1.5 ಲಕ್ಷ ಗುತ್ತಿಗೆದಾರರು ಮತ್ತು ಅವರ ಅವಲಂಬಿತರನ್ನು ಮರೆತಿದ್ದೀರಿ.

ಮುಖ್ಯಮಂತ್ರಿಗಳು ತಮ್ಮ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಬಾಕಿ ಬಿಲ್‌ಗಳ ಹಣ ಬಿಡುಗಡೆಗೆ ಒಪ್ಪಿಗೆ ಸೂಚಿಸಿದ್ದಾರೆ ಎಂದು ಸಂಘ ತಿಳಿಸಿದೆ.

ಗುತ್ತಿಗೆದಾರರ ಸಮಸ್ಯೆಗಳನ್ನು ಬಗೆಹರಿಸುವ ಜವಾಬ್ದಾರಿಯನ್ನು ಹಣಕಾಸು ಸಲಹೆಗಾರ ಎಲ್.ಕೆ. ಅತೀಕ್ ಮತ್ತು ಹಣಕಾಸು ಕಾರ್ಯದರ್ಶಿ ತುಷಾರ್ ಗಿರಿನಾಥ್ ಅವರಿಗೆ ವಹಿಸಿದ್ದಾರೆ ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.

ಇದೇ ವೇಳೆ ಹಣಕಾಸಿನ ಅನುದಾನವಿಲ್ಲದ ಕಾಮಗಾರಿಗಳಿಗೆ ಟೆಂಡರ್ ಕರೆಯಲಾಗುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿರುವ ಸಂಘ, ಇಂತಹ ಪ್ರಕ್ರಿಯೆಯನ್ನು ತಕ್ಷಣವೇ ನಿಲ್ಲಿಸುವಂತೆ ಒತ್ತಾಯಿಸಿದೆ. ಮುಖ್ಯಮಂತ್ರಿಗಳ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆಯಡಿ ಸುಮಾರು 16,000 ಕೋಟಿ ರೂ. ವೆಚ್ಚದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಸಚಿವ ಸಂಪುಟ ಅನುಮೋದನೆ ನೀಡಿದೆ. ಆದರೆ, ಹೊಸ ಯೋಜನೆಗಳನ್ನು ಆರಂಭಿಸುವ ಮೊದಲು ಹಳೆಯ ಬಾಕಿ ಹಣವನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದೆ.

ಹಿಂದಿನ ಸರ್ಕಾರ ಮಾಡಿದ ತಪ್ಪನ್ನು ಈ ಸರ್ಕಾರವೂ ಮಾಡಬಾರದು. ಈಗಾಗಲೇ ಆರ್ಥಿಕ ಸಂಕಷ್ಟದಲ್ಲಿರುವ ಗುತ್ತಿಗೆದಾರರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಬಾರದು. ಬಾಕಿ ಹಣ ಪಾವತಿಸಿದ ಬಳಿಕವಷ್ಟೇ ಹೊಸ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್. ಮಂಜುನಾಥ್ ಹೇಳಿದ್ದಾರೆ.

ಇಲಾಖೆಯಲ್ಲಿ ಗುತ್ತಿಗೆದಾರರ ಹಿರಿತನಕ್ಕೆ ಆದ್ಯತೆ ನೀಡಿ, ಅದಕ್ಕೆ ಅನುಗುಣವಾಗಿ ಹಣ ಬಿಡುಗಡೆ ಮಾಡಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.

ಎಲ್ಲ ಇಲಾಖೆಗಳಲ್ಲಿಯೂ ಕಾಮಗಾರಿಗಳನ್ನು ಒಟ್ಟುಗೂಡಿಸಿ ಪ್ಯಾಕೇಜ್ ವ್ಯವಸ್ಥೆ ಜಾರಿಗೆ ತರಲಾಗಿದೆ. ಇದರಿಂದ ಸಣ್ಣ ಮತ್ತು ಮಧ್ಯಮ ಗುತ್ತಿಗೆದಾರರಿಗೆ ತೊಂದರೆಯಾಗುತ್ತಿದ್ದು, ಈ ವ್ಯವಸ್ಥೆಯನ್ನು ರದ್ದುಗೊಳಿಸಬೇಕು ಎಂದು ಸಂಘ ಒತ್ತಾಯಿಸಿದೆ.

ಸುಮಾರು ಶೇ.70ರಷ್ಟು ಶಾಸಕರು ಟೆಂಡರ್ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಬೇಕು. ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಸ್ಥಳೀಯ ಗುತ್ತಿಗೆದಾರರಿಗೆ ಟೆಂಡರ್ ನೀಡುವಾಗ ಆದ್ಯತೆ ಕಲ್ಪಿಸಬೇಕು. ಈ ವಿಚಾರದಲ್ಲಿ ಮುಖ್ಯಮಂತ್ರಿಗಳು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಅರಣ್ಯ ಇಲಾಖೆಯು ಹಣಕಾಸು ಇಲಾಖೆಯ ಅನುಮೋದನೆ ಪಡೆಯದೆ ಟೆಂಡರ್‌ಗಳನ್ನು ಕರೆದಿದ್ದು, ಬಳಿಕ ಅವುಗಳನ್ನು ರದ್ದುಗೊಳಿಸಿ ಸೆಕ್ಷನ್ 13(ಬಿ) ಅಡಿಯಲ್ಲಿ ಗುತ್ತಿಗೆದಾರರಲ್ಲದವರಿಗೆ ಕಾಮಗಾರಿಗಳನ್ನು ವಹಿಸಿದೆ. ಇದು ಕಾನೂನು ಉಲ್ಲಂಘನೆಯಾಗಿದೆ ಎಂದು ಸಂಘ ಆರೋಪಿಸಿದೆ. ಈ ಕುರಿತು ಚರ್ಚಿಸಲು ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಂಘದ ಪದಾಧಿಕಾರಿಗಳ ಸಭೆ ಕರೆಯಬೇಕು ಎಂದು ಮನವಿ ಪತ್ರದಲ್ಲಿ ಒತ್ತಾಯಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಆಂಧ್ರ ಕರಾವಳಿಗೆ ಅಪ್ಪಳಿಸಿದ ‘ಮುರಸು’ ಚಂಡಮಾರುತ; ಭಾರೀ ಮಳೆ, ಗಂಟೆಗೆ 120 ಕಿ.ಮೀ ವೇಗದಲ್ಲಿ ಬಿರುಗಾಳಿ; Video

ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ HDK ಕೈವಾಡ. ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯಲು ಸ್ಕೆಚ್: ಸಚಿವ ಕೃಷ್ಣ ಬೈರೇಗೌಡ ಗಂಭೀರ ಆರೋಪ..!

Sting operation ವಿವಾದ: ಉದ್ದೇಶಪೂರ್ವಕವಾಗಿ ಕಾಂಗ್ರೆಸ್‌ನಿಂದ ದ್ವೇಷದ ರಾಜಕಾರಣ; HDK ಪರ ಬ್ಯಾಟ್ ಬೀಸಿದ ಕೇಂದ್ರ ಸಚಿವ ವಿ. ಸೋಮಣ್ಣ

ಹಾಲಿನ ಬೆಲೆ ಏರಿಕೆ ಹಿಂಪಡೆಯಿರಿ, ಇಲ್ಲವೇ ಅಧಿಕಾರದಿಂದ ಕೆಳಗಿಳಿಯಿರಿ: ಡಿಕೆ.ಶಿವಕುಮಾರ್ ಸರ್ಕಾರಕ್ಕೆ ಶೋಭಾ ಕರಂದ್ಲಾಜೆ ಆಗ್ರಹ

ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ನಡುವೆಯೂ ಭಾರತದ ಆರ್ಥಿಕ ಬೆಳವಣಿಗೆ ಬಲಿಷ್ಠ; 500 GW ನವೀಕರಿಸಬಹುದಾದ ಇಂಧನ ಸಾಮರ್ಥ್ಯದ ಗುರಿ: ಪ್ರಧಾನಿ ಮೋದಿ