ಬೆಂಗಳೂರು: ರಸ್ತೆಗಳ ಅಗಲೀಕರಣ ಮತ್ತು ಹೊಸ ರಸ್ತೆಗಳ ನಿರ್ಮಾಣಕ್ಕೆ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು ಸುಲಭಗೊಳಿಸಲು ಟಿ.ಡಿ.ಆರ್ ವ್ಯವಸ್ಥೆಯನ್ನು ಸಂಪೂರ್ಣ ಡಿಜಿಟಲೀಕರಣಗೊಳಿಸುವಂತೆ ಸಚಿವ ಕೃಷ್ಣ ಬೈರೇಗೌಡ ಅವರು ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಿದರು.
ಸೋಮವಾರ ವಿಕಾಸಸೌಧದಲ್ಲಿ ಸಂಬಂಧಿತ ಅಧಿಕಾರಿಗಳ ಸಭೆ ನಡೆಸಿದ ಸಚಿವ ಕೃಷ್ಣ ಬೈರೇಗೌಡ ಅವರು, “ನಗರದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ದೀರ್ಘಕಾಲೀನ ಹಾಗೂ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ರಸ್ತೆಗಳ ಅಗಲೀಕರಣ ಮತ್ತು ಹೊಸ ರಸ್ತೆಗಳ ನಿರ್ಮಾಣವು ಅತ್ಯಂತ ತುರ್ತು ಮತ್ತು ಅನಿವಾರ್ಯ ಹೆಜ್ಜೆಯಾಗಿದೆ.
ಆದರೆ, ಇಷ್ಟು ವರ್ಷಗಳ ಕಾಲ ಮೂಲಸೌಕರ್ಯ ಅಭಿವೃದ್ಧಿಗೆ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು ಸುಲಭಗೊಳಿಸುವ ಟಿ.ಡಿ.ಆರ್ ವ್ಯವಸ್ಥೆಯು ಸಂಪೂರ್ಣವಾಗಿ ಕಾಗದದ ಕಡತಗಳ ಮೂಲಕ ನಡೆಯುತ್ತಿದ್ದುದರಿಂದ, ಸರಿಯಾದ ಟ್ರ್ಯಾಕಿಂಗ್ ವ್ಯವಸ್ಥೆ ಇಲ್ಲದೆ ವ್ಯವಸ್ಥೆಯಲ್ಲಿ ಅಪಾರದರ್ಶಕತೆ ತುಂಬಿತ್ತು. ಪರಿಣಾಮ ಸಾರ್ವಜನಿಕರಿಗೆ ಟಿ.ಡಿ.ಆರ್ ವ್ಯವಸ್ಥೆಯ ಮೇಲೆ ತೀರಾ ಅಪನಂಬಿಕೆ ಹಾಗೂ ಅತೃಪ್ತಿ ಮೂಡಿತ್ತು” ಎಂದು ಅಭಿಪ್ರಾಯಪಟ್ಟರು.
ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ದೀರ್ಘಕಾಲೀನ ಹಾಗೂ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ರಸ್ತೆಗಳ ವಿಸ್ತರಣೆ ಮತ್ತು ಹೊಸ ರಸ್ತೆಗಳ ನಿರ್ಮಾಣವು ಅತ್ಯಂತ ತುರ್ತು ಮತ್ತು ಅನಿವಾರ್ಯ ಹೆಜ್ಜೆಯಾಗಿದೆ ಎಂದಿದ್ದಾರೆ.
ನಗರದ ಮೂಲಸೌಕರ್ಯ ಅಭಿವೃದ್ಧಿಗೆ ಎದುರಾಗಿರುವ ಅಡೆತಡೆಗಳನ್ನು ನಿವಾರಿಸಲು ಹಾಗೂ ಭೂಮಾಲೀಕರು ಹಾಗೂ ಸಾರ್ವಜನಿಕರಲ್ಲಿ ವ್ಯವಸ್ಥೆಯ ಮೇಲಿನ ನಂಬಿಕೆಯನ್ನು ಮರುಸ್ಥಾಪಿಸಲು ಪ್ರಸ್ತುತ ಮಹತ್ವದ ಹೆಜ್ಜೆ ಇಡಬೇಕಾಗಿದೆ.
ಅದರಂತೆ, ರಸ್ತೆ ಮತ್ತು ಆಸ್ತಿಯ ವಿವರಗಳ ಪ್ರಾಥಮಿಕ ಹಂತದಿಂದ ಹಿಡಿದು, ಎಲ್ಲಾ ಹಂತಗಳ ಪರಿಶೀಲನೆ ಮುಗಿದು ಅಂತಿಮವಾಗಿ ಟಿ.ಡಿ.ಆರ್ ಪ್ರಮಾಣಪತ್ರ ವಿತರಿಸುವವರೆಗಿನ ಸಂಪೂರ್ಣ ಪ್ರಕ್ರಿಯೆಯನ್ನು ಡಿಜಿಟಲೀಕರಣಗೊಳಿಸಲು ಅಗತ್ಯವಾದ ಕ್ರಮ ಜರುಗಿಸಬೇಕು ಎಂದು ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಿದರು.
ರಸ್ತೆ ಮತ್ತು ಆಸ್ತಿ ವಿವರಗಳ ಆರಂಭಿಕ ದಾಖಲಾತಿ, ಪ್ರತಿ ಹಂತದಲ್ಲೂ ಪರಿಶೀಲನೆ ಮತ್ತು ಅಂತಿಮವಾಗಿ ಟಿಡಿಆರ್ ಪ್ರಮಾಣಪತ್ರಗಳನ್ನು ನೀಡುವ ಪ್ರಕ್ರಿಯೆಯನ್ನು ಕೊನೆಯಿಂದ ಕೊನೆಯವರೆಗೆ ಡಿಜಿಟಲೀಕರಣಗೊಳಿಸುವಂತೆ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಪ್ರಸ್ತಾವಿತ ಡಿಜಿಟಲ್ ವೇದಿಕೆಯು ಟಿಡಿಆರ್ ಪ್ರಮಾಣಪತ್ರಗಳ ಖರೀದಿ ಮತ್ತು ಮಾರಾಟ ಹಾಗೂ ಅವುಗಳ ಅಂತಿಮ ಬಳಕೆಯನ್ನು ಸಹ ದಾಖಲಿಸುತ್ತದೆ ಎಂದು ಅವರು ಹೇಳಿದ್ದಾರೆ.