ಬೆಂಗಳೂರು: ಕರ್ನಾಟಕದ ಸಣ್ಣ ಕೈಗಾರಿಕೆಗಳು ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ವಿಜಯಾನಂದ ಎಸ್. ಕಾಶಪ್ಪನವರ್ ಅವರ ವೈಯಕ್ತಿಕ ಸಹಾಯಕರು, ಸಚಿವರ ವಿರುದ್ಧ ಮಾನಹಾನಿ ಮಾಡುವ ಉದ್ದೇಶದಿಂದ ತಿರುಚಿದ ವಿಡಿಯೋವನ್ನು ಪ್ರಸಾರ ಮಾಡಲಾಗಿದೆ ಎಂದು ಆರೋಪಿಸಿ ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ದೂರಿನ ಪ್ರಕಾರ, ಕೆಲವು ಯೂಟ್ಯೂಬ್ ಚಾನೆಲ್‌ಗಳು ಸೇರಿದಂತೆ ಹಲವು ಸಾಮಾಜಿಕ ಜಾಲತಾಣಗಳ ಖಾತೆಗಳು ಹಾಗೂ ಫೇಸ್‌ಬುಕ್ ಪುಟವೊಂದು ಅಕ್ಟೋಬರ್ 29ರಂದು ಸಚಿವರನ್ನು ಗುರಿಯಾಗಿಸಿಕೊಂಡು ಪ್ರಚೋದನಕಾರಿ ಮತ್ತು ಸಂಚಲನ ಮೂಡಿಸುವ ಶೀರ್ಷಿಕೆಗಳೊಂದಿಗೆ ಕಿರು ವಿಡಿಯೋಗಳನ್ನು ಅಪ್‌ಲೋಡ್ ಮಾಡಿವೆ.
ಸಚಿವ ವಿಜಯಾನಂದ ಕಾಶಪ್ಪನವರ್ ಅವರು ಮಹಿಳೆಯೊಬ್ಬರೊಂದಿಗೆ ವಾಟ್ಸ್‌ಆ್ಯಪ್ ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಿರುವುದಾಗಿ ತೋರಿಸುವ ದೃಶ್ಯಗಳನ್ನು ದುರುದ್ದೇಶಪೂರ್ವಕವಾಗಿ ತಿರುಚಲಾಗಿದೆ ಎಂದು ದೂರುದಾರರು ಆರೋಪಿಸಿದ್ದಾರೆ. ವಿಡಿಯೋದ ಮೂಲ ಆಡಿಯೋವನ್ನು ಮ್ಯೂಟ್ ಮಾಡಿ, ಅದರ ಬದಲಿಗೆ ಕೃತಕ ಆಡಿಯೋವನ್ನು ಅಳವಡಿಸುವ ಮೂಲಕ ಸಂಭಾಷಣೆಯನ್ನು ತಪ್ಪಾಗಿ ಬಿಂಬಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಇದೊಂದು ಉದ್ದೇಶಪೂರ್ವಕವಾಗಿ ಸಚಿವರ ವ್ಯಕ್ತಿತ್ವಕ್ಕೆ ಧಕ್ಕೆ ತರುವ ಅಭಿಯಾನ ಎಂದು ಆರೋಪಿಸಿರುವ ದೂರುದಾರರು, ತಪ್ಪಿತಸ್ಥರ ವಿರುದ್ಧ ತಕ್ಷಣ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಮಾನಹಾನಿಕಾರಕ ವಿಷಯಗಳನ್ನು ಸಾಮಾಜಿಕ ಜಾಲತಾಣಗಳಿಂದ ತೆಗೆದುಹಾಕುವಂತೆ ಸಂಬಂಧಪಟ್ಟ ವೇದಿಕೆಗಳಿಗೆ ಸೂಚಿಸಬೇಕು ಎಂದು ಪೊಲೀಸರನ್ನು ಒತ್ತಾಯಿಸಿದ್ದಾರೆ.
ದೂರು ಸ್ವೀಕರಿಸಿರುವುದನ್ನು ಖಚಿತಪಡಿಸಿರುವ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಅಧಿಕಾರಿಯೊಬ್ಬರು, ಪ್ರಾಥಮಿಕ ವಿಚಾರಣೆ ಪ್ರಗತಿಯಲ್ಲಿದೆ ಎಂದು ತಿಳಿಸಿದ್ದಾರೆ. ಆದರೆ, ಈವರೆಗೆ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸಚಿವ ವಿಜಯಾನಂದ ಕಾಶಪ್ಪನವರ್, ಮಹಿಳೆಯೊಬ್ಬರೊಂದಿಗೆ ವಾಟ್ಸಾಪ್ ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಿರುವುದಾಗಿ ತೋರಿಸುವ ದೃಶ್ಯಗಳನ್ನು ದುರುದ್ದೇಶಪೂರ್ವಕವಾಗಿ ತಿರುಚಲಾಗಿದೆ ಎಂದು ದೂರುದಾರರು ಆರೋಪಿಸಿದ್ದಾರೆ. ವಿಡಿಯೋದ ಮೂಲ ಆಡಿಯೋವನ್ನು ಮ್ಯೂಟ್ ಮಾಡಿ, ಅದರ ಬದಲಿಗೆ ಕೃತಕ ಆಡಿಯೋವನ್ನು ಅಳವಡಿಸುವ ಮೂಲಕ ಸಂಭಾಷಣೆಯನ್ನು ತಪ್ಪಾಗಿ ಬಿಂಬಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಉದ್ದೇಶಪೂರ್ವಕವಾಗಿ ಸಚಿವರ ವ್ಯಕ್ತಿತ್ವಕ್ಕೆ ಧಕ್ಕೆ ತರುವ ಅಪಪ್ರಚಾರ ಎಂದು ಆರೋಪಿಸಿರುವ ದೂರುದಾರರು, ತಪ್ಪಿತಸ್ಥರ ವಿರುದ್ಧ ತಕ್ಷಣ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಮಾನಹಾನಿಕಾರಕ ವಿಷಯಗಳನ್ನು ಸಾಮಾಜಿಕ ಜಾಲತಾಣಗಳಿಂದ ತೆಗೆದುಹಾಕುವಂತೆ ಸಂಬಂಧಪಟ್ಟ ವೇದಿಕೆಗಳಿಗೆ ಸೂಚಿಸಬೇಕು ಎಂದು ಪೊಲೀಸರನ್ನು ಒತ್ತಾಯಿಸಿದ್ದಾರೆ.
ದೂರು ಸ್ವೀಕರಿಸಿರುವುದನ್ನು ಖಚಿತಪಡಿಸಿರುವ ಕೇಂದ್ರ ಅಪರಾಧ ವಿಭಾಗದ (CCB) ಅಧಿಕಾರಿ, ಪ್ರಾಥಮಿಕ ವಿಚಾರಣೆ ಪ್ರಗತಿಯಲ್ಲಿದೆ ಎಂದು ತಿಳಿಸಿದ್ದಾರೆ. ಆದರೆ, ಈವರೆಗೆ ಪ್ರಥಮ ಮಾಹಿತಿ ವರದಿ (FIR) ದಾಖಲಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.