ಸಂಗ್ರಹ ಚಿತ್ರ 
ರಾಜ್ಯ

ಹಂಪಿ ಸುಗ್ರೀವ ಗುಹೆ ಬಳಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ: ನಿಧಿ ಶೋಧ, ಮಾಟ-ಮಂತ್ರ ಶಂಕೆ..!

ಮೃತ ಮಹಿಳೆಗೆ ಸುಮಾರು 40ರಿಂದ 45 ವರ್ಷ ವಯಸ್ಸಾಗಿರಬಹುದು ಎಂದು ಅಂದಾಜಿಸಲಾಗಿದೆ. ಶವ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿದ್ದು, ಹಲವು ದಿನಗಳಿಂದ ಅಲ್ಲಿ ಬಿದ್ದಿರಬಹುದು ಎಂದು ಶಂಕಿಸಲಾಗಿದೆ.

ಹೊಸಪೇಟೆ: ಹಂಪಿಯ ಪಾರಂಪರಿಕ ತಾಣದ ನಿರ್ಜನ ಪ್ರದೇಶವಾದ ಸುಗ್ರೀವ ಗುಹೆ ಸಮೀಪ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಶವ ಗುರುವಾರ ಪತ್ತೆಯಾಗಿದ್ದು, ಆಕೆಯ ಸಾವಿನ ಹಿಂದೆ ನಿಧಿ ಶೋಧ, ಮಾಟ-ಮಂತ್ರ ಮಾಡಿರುವವರ ಕೈವಾಡ ಇರುವ ಶಂಕೆಗಳು ವ್ಯಕ್ತವಾಗಿವೆ.

ಸುಗ್ರೀವ ಗುಹೆ ಬಳಿ ಚಾರಣ ಮಾಡುತ್ತಿದ್ದ ಇಬ್ಬರು ವಿದೇಶಿ ಪ್ರವಾಸಿಗರು ಶವವನ್ನು ಗಮನಿಸಿ ಸ್ಥಳೀಯ ನಿವಾಸಿಗಳಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ. ಈ ಸಂಬಂಧ ಹಂಪಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತ ಮಹಿಳೆಗೆ ಸುಮಾರು 40ರಿಂದ 45 ವರ್ಷ ವಯಸ್ಸಾಗಿರಬಹುದು ಎಂದು ಅಂದಾಜಿಸಲಾಗಿದೆ. ಶವ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿದ್ದು, ಹಲವು ದಿನಗಳಿಂದ ಅಲ್ಲಿ ಬಿದ್ದಿರಬಹುದು ಎಂದು ಶಂಕಿಸಲಾಗಿದೆ. ಆದರೆ, ಮಹಿಳೆಯ ಗುರುತು, ಸಾವಿನ ನಿಖರ ಸಮಯ ಹಾಗೂ ಸಾವಿಗೆ ಕಾರಣವಾದ ಘಟನೆಗಳ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ.

ಘಟನಾ ಸ್ಥಳದಲ್ಲಿ ಧಾರ್ಮಿಕ ಆಚರಣೆಗಳಿಗೆ ಬಳಸುವ ಕೆಲವು ವಸ್ತುಗಳು ಪತ್ತೆಯಾಗಿದ್ದು, ಇದು ನಿಧಿ ಶೋಧನೆಯ ಚಟುವಟಿಕೆ ನಡೆದಿರುವ ಸಾಧ್ಯತೆಯನ್ನು ಬಲಪಡಿಸಿದೆ ಎಂದು ವಿಜಯನಗರ ಜಿಲ್ಲಾ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಘಟನೆ ಸ್ಥಳೀಯರಲ್ಲೂ ಹಲವು ಅನುಮಾನಗಳನ್ನು ಮೂಡಿಸಿದೆ. ನಿರ್ಜನ ಪ್ರದೇಶವನ್ನು ದುಷ್ಕರ್ಮಿಗಳು ಮಾಟಮಂತ್ರದ ಆಚರಣೆಗಳಿಗೆ ಅಥವಾ ಕಾನೂನುಬಾಹಿರ ಚಟುವಟಿಕೆಗಳಿಗೆ ಬಳಸಿಕೊಂಡಿರಬಹುದು ಎಂದು ಶಂಕಿಸಿದ್ದಾರೆ.

ಮಹಿಳೆಯನ್ನು ಅದೇ ಸ್ಥಳದಲ್ಲಿ ಕೊಲೆ ಮಾಡಲಾಗಿದೆಯೇ ಅಥವಾ ಬೇರೆಡೆ ಹತ್ಯೆ ಮಾಡಿ ಶವವನ್ನು ಇಲ್ಲಿ ತಂದು ಎಸೆಯಲಾಗಿದೆಯೇ ಎಂಬ ಬಗ್ಗೆಯೂ ಪೊಲೀಸರು ತನಿಖೆ ನಡೆಸಲಿದ್ದಾರೆ. ಮೃತಳ ಗುರುತು ಪತ್ತೆಹಚ್ಚುವುದು ಮತ್ತು ಸಾವಿನ ನಿಖರ ಕಾರಣ ತಿಳಿಯಲು ತನಿಖೆ ಆರಂಭಿಸಿದ್ದಾರೆ.

ಯುನೆಸ್ಕೊ ವಿಶ್ವ ಪರಂಪರೆಯ ತಾಣವಾದ ಹಂಪಿಯು ಸಾವಿರಾರು ದೇಶಿ ಹಾಗೂ ವಿದೇಶಿ ಪ್ರವಾಸಿಗರನ್ನು ಸೆಳೆಯುತ್ತಿದ್ದು, ಈ ಸ್ಥಳದಲ್ಲೇ ಈ ಘಟನೆ ನಡೆಸಿರುವುದು ಇಲ್ಲಿನ ಸುರಕ್ಷತೆ ಮತ್ತು ನಿಗಾ ವ್ಯವಸ್ಥೆಯ ಬಗ್ಗೆ ಆತಂಕ ಮೂಡಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವೈವಾಹಿಕ ಕಲಹ: ಬೆಂಗಳೂರಿನಲ್ಲಿ ಒಂದೇ ಕುಟುಂಬದ 7 ಮಂದಿಯನ್ನು ಭೀಕರ ಹತ್ಯೆ ಮಾಡಿದ ಕ್ಯಾಬ್ ಚಾಲಕ !

ಅಮೆರಿಕಕ್ಕೆ ಬಿಗ್ ಶಾಕ್; ಪರಮಾಣು ಸ್ಥಾವರಗಳ ಮೇಲಿನ ದಾಳಿಗೆ ಖಂಡನೆ, ಇರಾನ್ ಪರ ನಿಂತ ರಷ್ಯಾ; ಯುದ್ಧ ನಿಲ್ಲಿಸಲು ಸರ್ವಪ್ರಯತ್ನ ಎಂದ ಪುಟಿನ್..!

ಅಮೆರಿಕ ಚುನಾವಣೆಯಲ್ಲಿ ಹಿನ್ನಡೆ ಬೆನ್ನಲ್ಲೇ ಇರಾನ್ ಮೇಲೆ ಟ್ರಂಪ್ ಕೆಂಗಣ್ಣು; ಯುದ್ಧ ಮತ್ತಷ್ಟು ಭೀಕರಗೊಳಿಸುವ ಸುಳಿವು, ಇಡೀ ದೇಶವನ್ನೇ ನಾಶಪಡಿಸುವ ಎಚ್ಚರಿಕೆ..!

ಕಬ್ಬು ಬೆಳೆಗಾರರ ಹೋರಾಟ ಅಂತ್ಯ, ಶುಕ್ರವಾರದಿಂದ ಕಾರ್ಖಾನೆಗಳು ಆರಂಭ: ರೈತ ಮುಖಂಡ ಚೂನಪ್ಪ ಪೂಜಾರಿ

Asian Champions Trophy 2026 Final: ಜಪಾನ್ ವಿರುದ್ಧ 4-1 ಅಂತರದ ಗೆಲುವು; ದಾಖಲೆ ನಿರ್ಮಿಸಿದ ಭಾರತಕ್ಕೆ 6ನೇ ಟ್ರೋಫಿ