ಗೃಹಲಕ್ಷ್ಮಿ ಯೋಜನೆಯ ₹2000 ಹಣ ಕಾನೂನುಬದ್ಧ ಹಕ್ಕಲ್ಲ Online Desk
ರಾಜ್ಯ

ಗೃಹಲಕ್ಷ್ಮಿ ಯೋಜನೆಯ ₹2000 ಹಣ ಕಾನೂನುಬದ್ಧ ಹಕ್ಕಲ್ಲ: ಹೈಕೋರ್ಟ್‌ಗೆ ರಾಜ್ಯ ಸರ್ಕಾರದ ಸ್ಪಷ್ಟನೆ

ಗೃಹಲಕ್ಷ್ಮಿ ಯೋಜನೆಯ ₹2,000 ಮಾಸಿಕ ಸಹಾಯಧನವನ್ನು ಫಲಾನುಭವಿಗಳು ತಮ್ಮ ಕಾನೂನುಬದ್ಧ ಹಕ್ಕು ಎಂದು ಪ್ರತಿಪಾದಿಸುವಂತಿಲ್ಲ ಎಂದು ರಾಜ್ಯ ಸರ್ಕಾರವು ಕರ್ನಾಟಕ ಹೈಕೋರ್ಟ್‌ಗೆ ಅಧಿಕೃತವಾಗಿ ಸ್ಪಷ್ಟಪಡಿಸಿದೆ. ಆ ಕುರಿತ ವರದಿ ಇಲ್ಲಿದೆ:

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ ಮಾಸಿಕ ₹2,000 ಆರ್ಥಿಕ ನೆರವನ್ನು ಫಲಾನುಭವಿಗಳು ತಮ್ಮ ಕಾನೂನುಬದ್ಧ "ಹಕ್ಕು" ಎಂದು ಪ್ರತಿಪಾದಿಸುವಂತಿಲ್ಲ ಎಂದು ಕರ್ನಾಟಕ ರಾಜ್ಯ ಸರ್ಕಾರವು ಕರ್ನಾಟಕ ಹೈಕೋರ್ಟ್‌ಗೆ ಅಧಿಕೃತವಾಗಿ ಸ್ಪಷ್ಟಪಡಿಸಿದೆ. 2025ರ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಬಾಕಿ ಹಣ ಬಿಡುಗಡೆಗೆ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಾಗ ಸರ್ಕಾರ ಈ ವಾದ ಮಂಡಿಸಿದೆ. ಆ ಕುರಿತ ವರದಿ ಇಲ್ಲಿದೆ:

ಏನಿದು ಪ್ರಕರಣ?

ಬೆಂಗಳೂರಿನ ಕಮಲಾನಗರದ ಆರ್. ಗಂಗಾ ಹಾಗೂ ನಂದಿನಿ ಲೇಔಟ್‌ನ ಜಿ.ಡಿ. ಪವಿತ್ರಾ ಎಂಬುವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿ, ರಾಜ್ಯ ಸರ್ಕಾರವು 2025ರ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಎರಡು ಕಂತುಗಳ ತಲಾ ₹2,000 ಸಹಾಯಧನವನ್ನು (ಒಟ್ಟು ಸುಮಾರು ₹5,000 ಕೋಟಿ ಬಾಕಿ) ಸುಮಾರು 1.26 ಕೋಟಿ ಮಹಿಳಾ ಫಲಾನುಭವಿಗಳಿಗೆ ವಿತರಿಸಲು ವಿಫಲವಾಗಿದೆ ಎಂದು ಅರ್ಜಿಯಲ್ಲಿ ಆಕ್ಷೇಪಿಸಲಾಗಿತ್ತು. ಇದರ ವಿಚಾರಣೆ ನಡೆಸಿದ ಹೈಕೋರ್ಟ್‌ನ ನ್ಯಾಯಮೂರ್ತಿ ಅನು ಶಿವರಾಮನ್ ಮತ್ತು ನ್ಯಾಯಮೂರ್ತಿ ಕೆ.ಎಸ್. ಭರತ್ ಕುಮಾರ್ ಅವರನ್ನೊಳಗೊಂಡ ವಿಭಾಗೀಯ ಪೀಠದ ಮುಂದೆ, "ಗೃಹಲಕ್ಷ್ಮಿ ಯೋಜನೆಯ ₹2,000 ಮಾಸಿಕ ಸಹಾಯಧನವನ್ನು ಫಲಾನುಭವಿಗಳು ತಮ್ಮ ಕಾನೂನುಬದ್ಧ ಹಕ್ಕು ಎಂದು ಪ್ರತಿಪಾದಿಸುವಂತಿಲ್ಲ" ಎಂದು ರಾಜ್ಯ ಸರ್ಕಾರ ವಿವರಣೆ ನೀಡಿದೆ.

ಮುಂದುವರೆದು, ರಾಜ್ಯ ಸರ್ಕಾರದ ಪರವಾಗಿ ಸ್ತ್ರೀಶಕ್ತಿ ಯೋಜನಾಧಿಕಾರಿಗಳು ಮತ್ತು ಹೆಚ್ಚುವರಿ ಅಡ್ವೊಕೇಟ್ ಜನರಲ್ ಅವರು ಲಿಖಿತ ಆಕ್ಷೇಪಣೆಯನ್ನು ಸಲ್ಲಿಸಿ, "ಈ ಯೋಜನೆಯು ಮಹಿಳಾ ಸಬಲೀಕರಣಕ್ಕಾಗಿ ಸರ್ಕಾರ ತನ್ನ ಸ್ವಂತ ಇಚ್ಛೆಯಿಂದ ಜಾರಿಗೆ ತಂದಿರುವ ಕಲ್ಯಾಣ ಯೋಜನೆಯಾಗಿದೆ. ಇದರ ಅನುಷ್ಠಾನವು ಆಡಳಿತಾತ್ಮಕ ಅನಿವಾರ್ಯತೆ ಮತ್ತು ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಅವಲಂಬಿಸಿರುತ್ತದೆ. ಹಾಗಾಗಿ, ತೀವ್ರ ಹಣಕಾಸಿನ ಮುಗ್ಗಟ್ಟು ಅಥವಾ ಬಜೆಟ್ ಕೊರತೆ ಎದುರಾದಾಗ, ಫಲಾನುಭವಿಗಳು ಕೇವಲ ನ್ಯಾಯಸಮ್ಮತ ನಿರೀಕ್ಷೆಯ ಸಿದ್ಧಾಂತ ಆಧರಿಸಿ ನ್ಯಾಯಾಲಯದ ಮೂಲಕ ಹಣ ಬಿಡುಗಡೆ ಮಾಡಲು ಒತ್ತಾಯಿಸುವಂತಿಲ್ಲ ಎಂದು ಸರ್ಕಾರ ಪ್ರತಿಪಾದಿಸಿದೆ. ಏತನ್ಮಧ್ಯೆ, ಸರ್ಕಾರದ ಲಿಖಿತ ಆಕ್ಷೇಪಣೆಯನ್ನು ದಾಖಲಿಸಿಕೊಂಡ ನ್ಯಾಯಪೀಠವು, ಇದಕ್ಕೆ ಪ್ರತ್ಯುತ್ತರ ಸಲ್ಲಿಸುವಂತೆ ಅರ್ಜಿದಾರರ ಪರ ವಕೀಲರಿಗೆ ಸೂಚಿಸಿ ವಿಚಾರಣೆಯನ್ನು ಎರಡು ವಾರಗಳ ಕಾಲ ಮುಂದೂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವೈವಾಹಿಕ ಕಲಹ: ಬೆಂಗಳೂರಿನಲ್ಲಿ ಒಂದೇ ಕುಟುಂಬದ 7 ಮಂದಿಯನ್ನು ಭೀಕರ ಹತ್ಯೆ ಮಾಡಿದ ಕ್ಯಾಬ್ ಚಾಲಕ !

ಅಮೆರಿಕಕ್ಕೆ ಬಿಗ್ ಶಾಕ್; ಪರಮಾಣು ಸ್ಥಾವರಗಳ ಮೇಲಿನ ದಾಳಿಗೆ ಖಂಡನೆ, ಇರಾನ್ ಪರ ನಿಂತ ರಷ್ಯಾ; ಯುದ್ಧ ನಿಲ್ಲಿಸಲು ಸರ್ವಪ್ರಯತ್ನ ಎಂದ ಪುಟಿನ್..!

ಅಮೆರಿಕ ಚುನಾವಣೆಯಲ್ಲಿ ಹಿನ್ನಡೆ ಬೆನ್ನಲ್ಲೇ ಇರಾನ್ ಮೇಲೆ ಟ್ರಂಪ್ ಕೆಂಗಣ್ಣು; ಯುದ್ಧ ಮತ್ತಷ್ಟು ಭೀಕರಗೊಳಿಸುವ ಸುಳಿವು, ಇಡೀ ದೇಶವನ್ನೇ ನಾಶಪಡಿಸುವ ಎಚ್ಚರಿಕೆ..!

ಕಬ್ಬು ಬೆಳೆಗಾರರ ಹೋರಾಟ ಅಂತ್ಯ, ಶುಕ್ರವಾರದಿಂದ ಕಾರ್ಖಾನೆಗಳು ಆರಂಭ: ರೈತ ಮುಖಂಡ ಚೂನಪ್ಪ ಪೂಜಾರಿ

Asian Champions Trophy 2026 Final: ಜಪಾನ್ ವಿರುದ್ಧ 4-1 ಅಂತರದ ಗೆಲುವು; ದಾಖಲೆ ನಿರ್ಮಿಸಿದ ಭಾರತಕ್ಕೆ 6ನೇ ಟ್ರೋಫಿ