ಸಚಿವ ಸಂಪುಟ ಸಭೆ (ಸಂಗ್ರಹ ಚಿತ್ರ) 
ರಾಜ್ಯ

ಸ್ಥಳೀಯ ಸಂಸ್ಥೆಗಳ ಚುನಾವಣೆಗೂ SIR ಬಿಸಿ: ಹಳೆಯ ಪಟ್ಟಿ ಬಳಸಬೇಕಾ, ಪರಿಷ್ಕೃತ ಪಟ್ಟಿ ಬೇಕಾ? ಸಂಪುಟದಲ್ಲಿ ಚರ್ಚೆ, ನಿರ್ಧಾರ ಮುಂದೂಡಿಕೆ..!

ಕರ್ನಾಟಕದಲ್ಲಿ ನಡೆದ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಯಾವುದೇ ಲೋಪದೋಷಗಳಿಲ್ಲದೆ ಪೂರ್ಣಗೊಂಡಿದೆ. ಹೀಗಾಗಿ, ಪರಿಷ್ಕೃತ ಮತದಾರರ ಪಟ್ಟಿಯನ್ನೇ ಚುನಾವಣೆಗಳಿಗೆ ಬಳಸಬಹುದು ಎಂದು ಕೆಲವು ಸಚಿವರು ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರು: ಬೃಹತ್ ಬೆಂಗಳೂರು ಪ್ರಾಧಿಕಾರ (GBA) ಸೇರಿದಂತೆ ಸ್ಥಳೀಯ ಸಂಸ್ಥೆಗಳು ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿಗಳ ಚುನಾವಣೆಗಳನ್ನು ಹಳೆಯ ಮತದಾರರ ಪಟ್ಟಿಯ ಆಧಾರದ ಮೇಲೆ ನಡೆಸಬೇಕೇ ಅಥವಾ ವಿಶೇಷ ತೀವ್ರ ಪರಿಷ್ಕರಣೆ (SIR) ಬಳಿಕ ಸಿದ್ಧಪಡಿಸಲಾದ ಪರಿಷ್ಕೃತ ಮತದಾರರ ಪಟ್ಟಿಯನ್ನು ಬಳಸಬೇಕೇ ಎಂಬ ಬಗ್ಗೆ ರಾಜ್ಯ ಸಚಿವ ಸಂಪುಟ ಗುರುವಾರ ಸುದೀರ್ಘ ಚರ್ಚೆ ನಡೆಸಿತು.

ಆದರೆ, ಈ ವಿಚಾರದಲ್ಲಿ ಯಾವುದೇ ಅಂತಿಮ ನಿರ್ಧಾರ ಕೈಗೊಳ್ಳಲಾಗಿಲ್ಲ. ಇತರೆ ರಾಜ್ಯಗಳು ಯಾವ ಕ್ರಮ ಅನುಸರಿಸುತ್ತಿವೆ ಎಂಬುದನ್ನು ಪರಿಶೀಲಿಸಿದ ಬಳಿಕ ತೀರ್ಮಾನ ಕೈಗೊಳ್ಳಲು ನಿರ್ಧರಿಸಲಾಗಿದೆ.

ಕರ್ನಾಟಕದಲ್ಲಿ ನಡೆದ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಯಾವುದೇ ಲೋಪದೋಷಗಳಿಲ್ಲದೆ ಪೂರ್ಣಗೊಂಡಿದೆ. ಹೀಗಾಗಿ, ಪರಿಷ್ಕೃತ ಮತದಾರರ ಪಟ್ಟಿಯನ್ನೇ ಚುನಾವಣೆಗಳಿಗೆ ಬಳಸಬಹುದು ಎಂದು ಕೆಲವು ಸಚಿವರು ಅಭಿಪ್ರಾಯಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಈಶ್ವರ್ ಬಿ. ಖಂಡ್ರೆ ಅವರು, ಇವಿಎಂಗಳ ಬದಲಿಗೆ ಮತಪತ್ರಗಳ ಮೂಲಕ ಚುನಾವಣೆ ನಡೆಸುವ ನಿರ್ಧಾರ ಈಗಾಗಲೇ ಕೈಗೊಳ್ಳಲಾಗಿದೆ ಎಂದು ಪುನರುಚ್ಚರಿಸಿದರು.

ಮತಪೆಟ್ಟಿಗೆಗಳ ಖರೀದಿಗಾಗಿ ನಾವು ಅನುದಾನ ಮಂಜೂರು ಮಾಡಿದ್ದೇವೆ. ಯಾವ ಮತದಾರರ ಪಟ್ಟಿಯನ್ನು ಬಳಸಿ ಚುನಾವಣೆ ನಡೆಸಬೇಕು ಎಂಬುದನ್ನು ಸ್ವಾಯತ್ತ ಸಾಂವಿಧಾನಿಕ ಸಂಸ್ಥೆಯಾಗಿರುವ ರಾಜ್ಯ ಚುನಾವಣಾ ಆಯೋಗ ನಿರ್ಧರಿಸಲಿದೆ ಎಂದು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಅಮೆರಿಕಕ್ಕೆ ಬಿಗ್ ಶಾಕ್; ಪರಮಾಣು ಸ್ಥಾವರಗಳ ಮೇಲಿನ ದಾಳಿಗೆ ಖಂಡನೆ, ಇರಾನ್ ಪರ ನಿಂತ ರಷ್ಯಾ; ಯುದ್ಧ ನಿಲ್ಲಿಸಲು ಸರ್ವಪ್ರಯತ್ನ ಎಂದ ಪುಟಿನ್..!

ಅಮೆರಿಕ ಚುನಾವಣೆಯಲ್ಲಿ ಹಿನ್ನಡೆ ಬೆನ್ನಲ್ಲೇ ಇರಾನ್ ಮೇಲೆ ಟ್ರಂಪ್ ಕೆಂಗಣ್ಣು; ಯುದ್ಧ ಮತ್ತಷ್ಟು ಭೀಕರಗೊಳಿಸುವ ಸುಳಿವು, ಇಡೀ ದೇಶವನ್ನೇ ನಾಶಪಡಿಸುವ ಎಚ್ಚರಿಕೆ..!

ಕಬ್ಬು ಬೆಳೆಗಾರರ ಹೋರಾಟ ಅಂತ್ಯ, ಶುಕ್ರವಾರದಿಂದ ಕಾರ್ಖಾನೆಗಳು ಆರಂಭ: ರೈತ ಮುಖಂಡ ಚೂನಪ್ಪ ಪೂಜಾರಿ

Asian Champions Trophy 2026 Final: ಜಪಾನ್ ವಿರುದ್ಧ 4-1 ಅಂತರದ ಗೆಲುವು; ದಾಖಲೆ ನಿರ್ಮಿಸಿದ ಭಾರತಕ್ಕೆ 6ನೇ ಟ್ರೋಫಿ

ಬೆಂಗಳೂರು ಟರ್ಫ್ ಕ್ಲಬ್‌ಗೆ 4 ಎಕರೆ ಜಮೀನು ಗುತ್ತಿಗೆ; ₹20 ಸಾವಿರ ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಸಚಿವ ಸಂಪುಟ ಅಸ್ತು!