ಸಿದ್ದರಾಮಯ್ಯ ಮತ್ತು ರಾಹುಲ್ ಗಾಂಧಿ 
ರಾಜ್ಯ

ಹಾಸನಾಂಬೆ ದರ್ಶನಕ್ಕೆ ಸಮಯ ನಿಗದಿ: ರಾಹುಲ್ ಗಾಂಧಿ ಸಭೆಗೆ ಸಿದ್ದರಾಮಯ್ಯ ಗೈರು!

ಕಾಂಗ್ರೆಸ್ ನಾಯಕರು ಕರೆದಿರುವ ಈ ಸಭೆಯಲ್ಲಿ (ಚಹಾ ಕೂಟದಲ್ಲಿ), ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಮತ್ತು ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗವಹಿಸಲಿದ್ದಾರೆ.

ಬೆಂಗಳೂರು: ಹಾಸನದಲ್ಲಿ ಪೂರ್ವನಿಗದಿತ ಕಾರ್ಯಕ್ರಮಗಳಿರುವ ಕಾರಣ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸುವ ಸಾಧ್ಯತೆಯಿಲ್ಲ.

ಏಕೆಂದರೆ ಹಾಸನದಲ್ಲಿ ಮೊದಲೇ ನಿಗದಿಯಾಗಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕಿರುವುದರಿಂದ,ರಾಹುಲ್ ಗಾಂಧಿ ಸಭೆಗೆ ಹಾಜರಾಗಲು ಸಾಧ್ಯವಾಗುವುದಿಲ್ಲ ಎಂದು ಸಿದ್ದರಾಮಯ್ಯ ಪಕ್ಷಕ್ಕೆ ತಿಳಿಸಿದ್ದಾರೆ.

ಕಾಂಗ್ರೆಸ್ ನಾಯಕರು ಕರೆದಿರುವ ಈ ಸಭೆಯಲ್ಲಿ (ಚಹಾ ಕೂಟದಲ್ಲಿ), ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಮತ್ತು ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗವಹಿಸಲಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹಾಸನಕ್ಕೆ ಭೇಟಿ ನೀಡಿ, ವಾರ್ಷಿಕ ಹಾಸನಾಂಬ ಉತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಐತಿಹಾಸಿಕ ಹಾಸನಾಂಬ ದೇವಾಲಯದಲ್ಲಿ ದರ್ಶನ ಪಡೆಯಲಿದ್ದಾರೆ.

ಹಾಸನದಲ್ಲಿ ವಾರ್ಷಿಕ ಹಾಸನಾಂಬ ದೇವಾಲಯದ ಜಾತ್ರಾ ಮಹೋತ್ಸವ ಸದ್ಯ ನಡೆಯುತ್ತಿದೆ. ಹೊಯ್ಸಳ ಕಾಲದ ಈ ಐತಿಹಾಸಿಕ ದೇವಾಲಯದ ಬಾಗಿಲು ಅಕ್ಟೋಬರ್ 29 ರಂದು ತೆರೆದಿದ್ದು, ನವೆಂಬರ್ 11, ರಂದು ಮುಕ್ತಾಯಗೊಳ್ಳಲಿವೆ. ಈ ಜಾತ್ರಾ ಮಹೋತ್ಸವದಲ್ಲಿ ಸಿದ್ದರಾಮಯ್ಯ ಪಾಲ್ಗೋಳ್ಳುವ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಆಯೋಜಿಸಿರುವ ಸಭೆಯಲ್ಲಿ ಪಾಲ್ಗೋಳ್ಳುತ್ತಿಲ್ಲ.

ತಮ್ಮನ್ನು ಗುರಿಯಾಗಿಸಿಕೊಂಡು ನಡೆಸಲಾದ 'ನಕಲಿ ಸ್ಟಿಂಗ್ ಆಪರೇಷನ್' ವಿಡಿಯೋ ಪ್ರಕರಣದ ಕುರಿತು ಚರ್ಚಿಸಲು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ನವದೆಹಲಿಯಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಹಿರಿಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದರು.

ಈ ಗೌಪ್ಯ ಸಭೆಯು ಸೋಮವಾರ (ನವೆಂಬರ್ 3) ನವದೆಹಲಿಯ 10 ಜನಪಥ್‌ನಲ್ಲಿ (ಸೋನಿಯಾ ಗಾಂಧಿ ಅವರ ನಿವಾಸ) ನಡೆಯಿತು. ಸಿದ್ದರಾಮಯ್ಯ ಅವರೊಂದಿಗೆ ಅವರ ಪುತ್ರ ಹಾಗೂ ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಕೂಡ ಇದ್ದರು. ಇದಲ್ಲದೆ, ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಮತ್ತು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೂ ಈ ವಿಷಯದ ಬಗ್ಗೆ ಚರ್ಚಿಸಿದ್ದರು.

ಕೌಟುಂಬಿಕ ಕಲಹ: ಬೆಂಗಳೂರಿನಲ್ಲಿ ಒಂದೇ ಕುಟುಂಬದ 7 ಮಂದಿಯನ್ನು ಭೀಕರ ಹತ್ಯೆ ಮಾಡಿದ ಕ್ಯಾಬ್ ಚಾಲಕ !

ದೆಹಲಿಯಲ್ಲಿ ಹೆಚ್ಚಿದ ವಾಯು ಮಾಲಿನ್ಯ: 400ರ ಗಡಿ ತಲುಪಿದ AQI; ವಾಹನಗಳೇ ಮಾಲಿನ್ಯದ ಪ್ರಮುಖ ಮೂಲ ಎಂದ ಸುಪ್ರೀಂಕೋರ್ಟ್, ಕೇಂದ್ರ-ರಾಜ್ಯ ಸರ್ಕಾರಗಳಿಗೆ ತರಾಟೆ..!

Iraq ವಾಯುಪ್ರದೇಶ ಮುಕ್ತ: ಅಮೆರಿಕಕ್ಕೆ ತೆರಳುವ ಪ್ರಯಾಣಿಕರಿಗೆ ಬಿಗ್ ರಿಲೀಫ್; ಮುಂಬೈ, ದೆಹಲಿಯಿಂದ Air India ನೇರ ವಿಮಾನ ಸೇವೆ ಪುನರಾರಂಭ..!

ಅಮೆರಿಕಕ್ಕೆ ಬಿಗ್ ಶಾಕ್; ಪರಮಾಣು ಸ್ಥಾವರಗಳ ಮೇಲಿನ ದಾಳಿಗೆ ಖಂಡನೆ, ಇರಾನ್ ಪರ ನಿಂತ ರಷ್ಯಾ; ಯುದ್ಧ ನಿಲ್ಲಿಸಲು ಸರ್ವಪ್ರಯತ್ನ ಎಂದ ಪುಟಿನ್..!

ಅಮೆರಿಕ ಚುನಾವಣೆಯಲ್ಲಿ ಹಿನ್ನಡೆ ಬೆನ್ನಲ್ಲೇ ಇರಾನ್ ಮೇಲೆ ಟ್ರಂಪ್ ಕೆಂಗಣ್ಣು; ಯುದ್ಧ ಮತ್ತಷ್ಟು ಭೀಕರಗೊಳಿಸುವ ಸುಳಿವು, ಇಡೀ ದೇಶವನ್ನೇ ನಾಶಪಡಿಸುವ ಎಚ್ಚರಿಕೆ..!