HD ಕುಮಾರಸ್ವಾಮಿ, ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ 
ರಾಜ್ಯ

ತೇಜೋವಧೆಗೆ ಹುನ್ನಾರ: 'ಸತ್ಯಾಸತ್ಯತೆ' ಹೊರಬರಬೇಕಿದೆ; HD ಕುಮಾರಸ್ವಾಮಿ ಆರೋಪಕ್ಕೆ ಹಾಸನ ಜಿಲ್ಲಾಧಿಕಾರಿ ತಿರುಗೇಟು, Video

ಈ ಆರೋಪ ಕುರಿತು ಸ್ಪಷ್ಟನೆ ನೀಡಿರುವ ಜಿಲ್ಲಾಧಿಕಾರಿ ಲತಾ ಕುಮಾರಿ, ನಾನು ಯಾವುದೇ ಕಾರಣಕ್ಕೂ ಅನಧಿಕೃತ ಅಥವಾ ಕಾನೂನುಬಾಹಿರ ಕೆಲಸಗಳನ್ನು ಮಾಡಿಲ್ಲ, ಮುಂದೆಯೂ ಮಾಡುವುದಿಲ್ಲ ಎಂದು ಹೇಳಿದ್ದಾರೆ

ಹಾಸನ: ಹಾಸನ ಜಿಲ್ಲಾಡಳಿತ ವಿರುದ್ಧ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಮಾಡಿರುವ ಲಂಚದ ಆರೋಪ ಇದೀಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಜಿಲ್ಲಾಧಿಕಾರಿ ಲತಾ ಕುಮಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವಲಿಂಗೇಗೌಡ ಲಕ್ಷ ಲಕ್ಷ ಲಂಚ ಹೊಡೆಯುತ್ತಿದ್ದಾರೆ ಅಂತಾ ಕುಮಾರಸ್ವಾಮಿ ಆರೋಪ ಮಾಡಿದ್ದು, ಜಿಲ್ಲಾಧಿಕಾರಿ ಪಿಎ ಶಶಿಕಿರಣ್ ಅವರದು ಎನ್ನಲಾದ ವಾಟ್ಸಾಟ್ ಚಾಟ್ ಗಳನ್ನು ಬಿಡುಗಡೆ ಮಾಡಿದ್ದಾರೆ.

ಈ ಆರೋಪ ಕುರಿತು ಸ್ಪಷ್ಟನೆ ನೀಡಿರುವ ಜಿಲ್ಲಾಧಿಕಾರಿ ಲತಾ ಕುಮಾರಿ, ನಾನು ಯಾವುದೇ ಕಾರಣಕ್ಕೂ ಅನಧಿಕೃತ ಅಥವಾ ಕಾನೂನುಬಾಹಿರ ಕೆಲಸಗಳನ್ನು ಮಾಡಿಲ್ಲ, ಮುಂದೆಯೂ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಅಲ್ಲದೇ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಮಾಡಿರುವ ಆರೋಪಗಳಿಗೆ ಪೊಲೀಸ್‌ ದೂರು ದಾಖಲಿಸುವುದಾಗಿ ತಿಳಿಸಿದ್ದಾರೆ.

ಹಾಸನ ಜಿಲ್ಲಾಧಿಕಾರಿ ಪಿಎ ಅವರ ವಾಟ್ಸಾಪ್ ಚಾಟ್ ಎಂದು ಕೆಲವು ಮಾಧ್ಯಮಗಳಲ್ಲಿ ಅನಧಿಕೃತವಾಗಿ ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡಲಾಗುತ್ತಿದೆ. ನಾವು ಯಾವುದೇ ಕಾರಣಕ್ಕೂ ಯಾವುದೇ ಅನಧಿಕೃತ ಅಥವಾ ಕಾನೂನುಬಾಹಿರ ಕೆಲಸಗಳನ್ನು ಮಾಡಿಲ್ಲ, ಮುಂದೆಯೂ ಮಾಡುವುದಿಲ್ಲ ಎಂದಿದ್ದಾರೆ.

ನಮ್ಮ ಕಚೇರಿಯಿಂದ ಅಥವಾ ಪಿಎ ಸೆಕ್ಷನ್‌ನಿಂದ ಇಂತಹ ಯಾವುದೇ ತಪ್ಪು ಸಂದೇಶಗಳು ಹೋಗಿದ್ದರೆ ಅದು ಖಂಡಿತವಾಗಿಯೂ ಸರಿಯಲ್ಲ. ಸಾರ್ವಜನಿಕರು ಮತ್ತು ಮಾಧ್ಯಮಗಳು ಇಂತಹ ಸುಳ್ಳು ಮಾಹಿತಿ ಹಾಗೂ ಅಪಪ್ರಚಾರಗಳನ್ನು ದಯವಿಟ್ಟು ನಂಬಬೇಡಿ ಎಂದು ಮನವಿ ಮಾಡಿದ್ದಾರೆ.

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾಧಿಕಾರಿ, ಸತ್ಯಾಸತ್ಯತೆ ಹೊರಬರಬೇಕಿದೆ. ಈ ಬಗ್ಗೆ ಸಂಪೂರ್ಣ ತನಿಖೆ ನಡೆಸಲು ಸೈಬರ್ ಕ್ರೈಂ ವಿಭಾಗಕ್ಕೆ ದೂರು ನೀಡಲಾಗುತ್ತಿದೆ ಮತ್ತು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗುತ್ತಿದೆ. ಸಂಪೂರ್ಣ ವಿಚಾರಣೆ ನಡೆದು ತಪ್ಪು ಯಾರದ್ದೇ ಇದ್ದರೂ ಅವರಿಗೆ ಕಾನೂನು ಪ್ರಕಾರ ಶಿಸ್ತುಕ್ರಮ ಆಗಬೇಕು ಎಂದು ಒತ್ತಾಯಿಸಿದ್ದಾರೆ.

"ಸುಳ್ಳು ಮಾಹಿತಿಯನ್ನಿಟ್ಟುಕೊಂಡು ಒಬ್ಬ ಅಧಿಕಾರಿಯ ಅಥವಾ ವ್ಯಕ್ತಿಯ ತೇಜೋವಧೆ ಮಾಡುವುದು, ಅವರನ್ನು ಟಾರ್ಗೆಟ್ ಮಾಡಿ ತಲೆತಗ್ಗಿಸುವಂತೆ ಮಾಡುವುದು ಅಕ್ಷಮ್ಯ ಅಪರಾಧ. ಇಂತಹ ಕೃತ್ಯಗಳನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ನಾವು ಯಾವುದೇ ತಪ್ಪು ಮಾಡಿಲ್ಲ, ಮಾಡುವುದೂ ಇಲ್ಲ. ಸತ್ಯ ಶೀಘ್ರದಲ್ಲೇ ಹೊರಬರಲಿದೆ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸೌದಿ ಅರೇಬಿಯಾದ Aramco ಕಚೇರಿ ಮೇಲೆ ದಾಳಿ ಯತ್ನ; ಕಟ್ಟಡಕ್ಕೆ ಹಾನಿ, ಪ್ರಾಣಾಪಾಯವಿಲ್ಲ!

'ಇದು ನಮಗೆ ಅತ್ಯಂತ ಭರ್ಜರಿ ದೀಪಾವಳಿ': ಪುತ್ರ ವಿಹಾನ್‌ ಮೊದಲ ಫೋಟೋ ಹಂಚಿಕೊಂಡ ಕತ್ರಿನಾ ಕೈಫ್, ವಿಕ್ಕಿ ಕೌಶಲ್!

ಹಾಸನಾಂಬೆ ಪಾದದಾಣೆಗೂ ಒಂದೇ ಒಂದು ಪೈಸೆ ಲೋಪ ಮಾಡಿಲ್ಲ: ಹೆಚ್ ಡಿ ಕುಮಾರಸ್ವಾಮಿ ಆರೋಪಕ್ಕೆ ಶಿವಲಿಂಗೇಗೌಡ ಖಡಕ್ ಉತ್ತರ!

ಬರೀ ಗಡ್ಡ ಬೆಳೆಸಿದರೇ ಸಾಲದು, ನರಿ ಎಂದೂ ಹುಲಿ ಆಗದು: ತೆಲಂಗಾಣ ಸಿಎಂ ರೇವಂತ್ ರೆಡ್ಡಿ

Bastarನಲ್ಲಿ ವೀರ ಯೋಧರೊಂದಿಗೆ ಪ್ರಧಾನಿ ಮೋದಿ ದೀಪಾವಳಿ ಆಚರಣೆ: ನಕ್ಸಲ್ ಭಯೋತ್ಪಾದನೆಗೆ ಅಂತ್ಯ ಹಾಡಿದ ಭದ್ರತಾ ಪಡೆಗಳಿಗೆ ಸಲಾಂ, ನಕ್ಸಲ್ ಮುಕ್ತ ಭಾರತ ಘೋಷಣೆ..!