ಸಾಂಕೇತಿಕ ಚಿತ್ರ 
ರಾಜ್ಯ

ಉತ್ತರ ಕನ್ನಡ: ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿಯಾಗಿಸಿದ ಆರೋಪ; 65 ವರ್ಷದ ವ್ಯಕ್ತಿ ಬಂಧನ!

ಆರೋಪಿ ಇಸ್ಮಾಯಿಲ್ ಹುಲ್ಗಾರ್ (ಪ್ಲಂಬರ್ , ಪರಿಶಿಷ್ಟ ಪಂಗಡಕ್ಕೆ ಸೇರಿದ 12 ವರ್ಷದ ಬಾಲಕಿಯನ್ನು ಚಾಕುವಿನಿಂದ ಬೆದರಿಸಿ ಲೈಂಗಿಕ ದೌರ್ಜನ್ಯವೆಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ

ಉತ್ತರ ಕನ್ನಡ: ಆರನೇ ತರಗತಿಯಲ್ಲಿ ಓದುತ್ತಿರುವ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿ, ಆಕೆಯನ್ನು ಗರ್ಭಿಣಿಯನ್ನಾಗಿಸಿದ ಆರೋಪದ ಮೇಲೆ 65 ವರ್ಷದ ವ್ಯಕ್ತಿಯೊಬ್ಬನನ್ನು ಮುಂಡಗೋಡು ಬಂಧಿಸಿದ್ದಾರೆ. ಈತನ ವಿರುದ್ಧ 'ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳ ತಡೆ ಕಾಯ್ದೆ'ಯ (POCSO Act) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಆರೋಪಿ ಇಸ್ಮಾಯಿಲ್ ಹುಲ್ಗಾರ್ (ಪ್ಲಂಬರ್ ಕೆಲಸ ಮಾಡುವವನು), ಪರಿಶಿಷ್ಟ ಪಂಗಡಕ್ಕೆ ಸೇರಿದ 12 ವರ್ಷದ ಬಾಲಕಿಯನ್ನು ಚಾಕುವಿನಿಂದ ಬೆದರಿಸಿ ಲೈಂಗಿಕ ದೌರ್ಜನ್ಯವೆಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಮತ್ತು ಸಂತ್ರಸ್ತೆ ಇಬ್ಬರೂ ಮುಂಡಗೋಡಿನಿಂದ 10 ಕಿ.ಮೀ ದೂರದಲ್ಲಿರುವ ಗ್ರಾಮವೊಂದರ ನಿವಾಸಿಗಳಾಗಿದ್ದಾರೆ.

ಸಂತ್ರಸ್ತೆಯ ನೆರೆಹೊರೆಯವನಾದ ಹುಲ್ಗಾರ್, ಮನೆಯಲ್ಲಿ ಯಾರೂ ಇಲ್ಲದ ಸಮಯವನ್ನು ನೋಡಿ ಬಾಲಕಿಯನ್ನು ಬಲವಂತವಾಗಿ ಕರೆದೊಯ್ದು ಲೈಂಗಿಕ ದೌರ್ಜನ್ಯವೆಸಗಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಅಲ್ಲದೆ, ಈ ವಿಷಯವನ್ನು ಮನೆಯವರಿಗೆ ತಿಳಿಸದಂತೆ ಆಕೆಯನ್ನು ಎಚ್ಚರಿಸಿದ ಆರೋಪಿ, ಒಂದು ವೇಳೆ ವಿಷಯ ಬಹಿರಂಗಪಡಿಸಿದರೆ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿ ಗರ್ಭಿಣಿಯಾಗಿದ್ದರೂ, ಪೋಷಕರಿಗೆ ಈ ವಿಷಯ ತಿಳಿದಿರಲಿಲ್ಲ. ಬಾಲಕಿಗೆ ಹೊಟ್ಟೆ ನೋವು ಕಾಣಿಸಿಕೊಂಡಾಗ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು ಆಗ ಆಕೆ ಸುಮಾರು ಒಂಬತ್ತು ತಿಂಗಳ ಗರ್ಭಿಣಿ ಎಂಬುದು ವೈದ್ಯಕೀಯ ತಪಾಸಣೆಯಿಂದ ಬಹಿರಂಗಗೊಂಡಿತು.

ಈ ಸಂದರ್ಭದಲ್ಲಿ ಬಾಲಕಿ ತನ್ನ ಪೋಷಕರಿಗೆ ನಡೆದ ಲೈಂಗಿಕ ದೌರ್ಜನ್ಯದ ಬಗ್ಗೆ ತಿಳಿಸಿದಳು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ದೂರು ದಾಖಲಾದ ನಂತರ, ಪೊಲೀಸರು ಆರೋಪಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಇದೀಗ ದಲಿತ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದು, ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

West Asia war: 'ಯುದ್ಧ ನಿಲ್ಲಿಸಿ ಸಂಧಾನಕ್ಕೆ ಬನ್ನಿ, ಇಲ್ಲದಿದ್ದರೆ ನರಕ ಸೃಷ್ಟಿಸುತ್ತೇವೆ': ಅಮೆರಿಕ ಅಧ್ಯಕ್ಷ ಟ್ರಂಪ್‌ಗೆ ಇರಾನ್ ಖಡಕ್ ಎಚ್ಚರಿಕೆ..!

DC ಹುದ್ದೆಯಲ್ಲಿ ಮುಂದುವರಿಯಲು 75 ಲಕ್ಷ ರೂ. ಲಂಚ?: ಹಾಸನ ಜಿಲ್ಲಾಡಳಿತದಲ್ಲಿ ಸಂಚಲನ ಸೃಷ್ಟಿಸಿದ ವಾಟ್ಸ್‌ಆ್ಯಪ್ ಚಾಟ್, ತನಿಖೆಗೆ HDK ಒತ್ತಾಯ..!

ವಾಹನ ಸವಾರರೇ ಗಮನಿಸಿ: ಮೇಖ್ರಿ ಸರ್ಕಲ್ ಎಲಿವೇಟೆಡ್ ಕಾರಿಡಾರ್ ಕಾಮಗಾರಿ ಆರಂಭ; ಮುಂದಿನ 18 ತಿಂಗಳು ಸಂಚಾರ ಬದಲಾವಣೆ..!

ಒಂದೇ ತಿಂಗಳಲ್ಲಿ LPG ದರ ಕೆ.ಜಿಗೆ 11 ರೂ. ಹೆಚ್ಚಳ: ಆಟೋ ಚಾಲಕರಿಗೆ ಗಾಯದ ಮೇಲೆ ಬರೆ, ಪ್ರಯಾಣ ದರ ಮಾತ್ರ ಯಥಾಸ್ಥಿತಿ..!

ರಾಜ್ಯದಲ್ಲಿ ತಾರಕಕ್ಕೇರಿದ ಪೋಸ್ಟರ್ ವಾರ್: ಕಾಂಗ್ರೆಸ್-BJP ನಡುವೆ ತೀವ್ರ ವಾಕ್ಸಮರ..!