ಡಿಕೆ ಶಿವಕುಮಾರ್ 
ರಾಜ್ಯ

ಬೆಂಗಳೂರಿಗರಿಗೆ ಭೂ ಗ್ಯಾರಂಟಿ ಘೋಷಿಸಿದ CM ಡಿಕೆಶಿ; ಅಕ್ರಮ ಮನೆಗಳ ಸಕ್ರಮ ಶುಲ್ಕದಲ್ಲಿ ಶೇ.50ರಷ್ಟು ರಿಯಾಯಿತಿ!

ಇಂದು ಬಿಡಿಎ ಕಚೇರಿಯಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಯೋಜನೆಗಳ ಕುರಿತು ಪ್ರಗತಿ ಪರಿಶೀಲನೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಿಎಂ.

ಬೆಂಗಳೂರು: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ರಾಜಧಾನಿ ಬೆಂಗಳೂರಿನ ಜನತೆಗೆ ದೀಪಾವಳಿ ಹಬ್ಬದಂದು ಭರ್ಜರಿ ಗಿಫ್ಟ್ ನೀಡಿದ್ದು, ಸೋಮವಾರ ಅಕ್ರಮ ಮನೆಗಳ ಸಕ್ರಮ ಶುಲ್ಕದಲ್ಲಿ ಶೇ.50ರಷ್ಟು ರಿಯಾಯಿತಿ ಘೋಷಿಸಿದ್ದಾರೆ.

ಇಂದು ಬಿಡಿಎ ಕಚೇರಿಯಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಯೋಜನೆಗಳ ಕುರಿತು ಪ್ರಗತಿ ಪರಿಶೀಲನೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಿಎಂ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಭೂಸ್ವಾಧೀನಕ್ಕೊಳಪಟ್ಟ ಜಮೀನಿನಲ್ಲಿ ದಿನಾಂಕ 10.7.2008 ರ ಪೂರ್ವದಲ್ಲಿ ನಿರ್ಮಿಸಲಾದ ಅನಧಿಕೃತ ಕಟ್ಟಡಗಳನ್ನು ಸಕ್ರಮಗೊಳಿಸಲು ಈಗಾಗಲೇ ಅಧಿಸೂಚನೆ ಹೊರಡಿಸಿದ್ದು, ಈ ಹಿಂದಿನ ಸಕ್ರಮ ಶುಲ್ಕದಲ್ಲಿ ಶೇ.50ರಷ್ಟು ರಿಯಾಯಿತಿ ನೀಡಲು ತೀರ್ಮಾನಿಸಲಾಗಿದೆ ಎಂದರು.

ಇದೇ ವೇಳೆ ಬಿಡಿಎ 50ನೇ ವರ್ಷಾಚರಣೆ ಸಂದರ್ಭದಲ್ಲಿ ಆಸ್ತಿ ದಾಖಲೆಗಳಿಲ್ಲದ ಭೂ ಮಾಲಿಕರಿಗೆ ಭೂ ಗ್ಯಾರಂಟಿ ಸೇರಿದಂತೆ ಹೊಸ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಯೋಜನೆ ರೂಪಿಸಲಾಗಿದೆ ಎಂದು ಸಿಎಂ ತಿಳಿಸಿದರು.

ಈ ಸೌಲಭ್ಯ ಕಲಂ 38(ಡಿ) ತಿದ್ದುಪಡಿ ಮೂಲಕ ಈಗಾಗಲೇ ಜಾರಿಗೆ ಬಂದಿದ್ದು, ಡಿಸೆಂಬರ್‌ 17 ರ ಒಳಗಾಗಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಎರಡು ವರ್ಷಗಳ ಅವಧಿಯೊಳಗಾಗಿ ಈ ಸೌಲಭ್ಯವನ್ನು ಬಳಸಿಕೊಳ್ಳದಿದ್ದರೆ, ಪ್ರಾಧಿಕಾರದ ಭೂಮಿಯಲ್ಲಿರುವ ಅಂತಹ ಕಟ್ಟಡಗಳನ್ನು ತೆರವುಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

2008 ಕ್ಕಿಂತ ಮುಂಚೆ ಮನೆ ಕಟ್ಟಿದವರಿಗೆ, ಸುಮಾರು 1 ಲಕ್ಷ ಮಾಲಿಕರಿಗೆ ಆಸ್ತಿ ದೊರಕಿಸಬೇಕು ಎಂಬ ಉದ್ದೇಶದಿಂದ ಹಿಂದಿನ ಸರ್ಕಾರ ಈ ಅವಕಾಶ ನೀಡಿತ್ತು. 2021ರಲ್ಲಿಯೇ ದರ ನಿಗದಿ ಮಾಡಿತ್ತು. ಆದರೆ ಶುಲ್ಕ ಹೆಚ್ಚಾಯಿತೆಂದು ಕೇವಲ 600 ಜನ ಮಾತ್ರ ಅರ್ಜಿ ಹಾಕಿದ್ದರು. ಆದರೆ ನಾವು ಶುಲ್ಕ ಕಡಿಮೆ ಮಾಡಿ ಇನ್ನೊಂದು ಅವಕಾಶ ನೀಡಿದ್ದೇವೆ. ಕ್ಲೀನ್ ಬಿಡಿಎ, ಪರಿಶುದ್ಧವಾದ ಆಡಳಿತವನ್ನು ಬೆಂಗಳೂರಿಗರಿಗೆ ನೀಡುವ ಉದ್ದೇಶದಿಂದ ಸರ್ಕಾರ ಈ ಸೌಲಭ್ಯವನ್ನು ಜಾರಿಗೊಳಿಸಿದೆ ಎಂದು ಸಿಎಂ ಹೇಳಿದರು.

ನಿಗದಿತ ಅವಧಿಯ ಒಳಗಾಗಿ ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸಿ, ಈ ಸೌಲಭ್ಯವನ್ನು ಬಳಸಿಕೊಂಡು ಆಸ್ತಿಯ ಹಕ್ಕನ್ನು ಪಡೆದುಕೊಳ್ಳಲು ಇದು ಉತ್ತಮ ಅವಕಾಶವಾಗಿದೆ ಎಂದರು.

“ಮೂಲೆ ನಿವೇಶನ ಹೊರತುಪಡಿಸಿ ಕಟ್ಟಡದೊಂದಿಗಿನ ಭೂಮಿಯ ವ್ಯಾಪ್ತಿ 20×30 ರವರೆಗೆ ಪ್ರಸ್ತುತ ಮಾರ್ಗಸೂಚಿ ಮೌಲ್ಯದ ಶೇ.5ರಷ್ಟು, 20×30 ಕ್ಕಿಂತ ಹೆಚ್ಚು ಮತ್ತು 30×40 ರವರೆಗೆ ಶೇ.12.5% ರಷ್ಟು, 30×40 ಕ್ಕಿಂತ ಹೆಚ್ಚು ಮತ್ತು 40×60 ರವರೆಗೆ ಶೇ.20% ರಷ್ಟು ಮತ್ತು 40×60 ಕ್ಕಿಂತ ಹೆಚ್ಚು ಮತ್ತು 50×80 ರವರೆಗೆ ಶೇ.25% ರಷ್ಟು ದರವನ್ನು ನಿಗದಿಪಡಿಸಲಾಗಿದೆ. ಇದು ಈ ಹಿಂದಿನ ಸರ್ಕಾರ ನಿಗದಿಪಡಿಸಿದ್ದ ದರಕ್ಕಿಂತ ಶೇ.50ರಷ್ಟು ಕಡಿಮೆಯಾಗಿದೆ” ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಟಾಕಿಗಳಿಂದ ಬಾಲಿವುಡ್ ನಟನ ಮನೆಗೆ ಬೆಂಕಿ; ಹೊತ್ತಿ ಉರಿದ ಬಾಲ್ಕನಿ! ಅನುಮತಿ ನೀಡುವುದೇ ಮೂರ್ಖತನ: ಪಿರ್ಜಾದಾ ಕಿಡಿ

ಸಿದ್ದರಾಮಯ್ಯ ವಿರುದ್ಧದ 'ಸ್ಟಿಂಗ್ ಆಪರೇಷನ್' ಪ್ರಕರಣ: ಸಿಸಿಬಿ ವಿಚಾರಣೆಗೆ ಹಾಜರಾದ ಕೃಪಾ ಆಳ್ವ!

'ಇಡೀ ದೇಶ ಹುಡುಕಿದ್ರೂ ಅವಳಂತಹ ಮತ್ತೊಬ್ಬ ಸೀತೆ ಸಿಗಲ್ಲ': ಟ್ರೋಲ್‌ಗೆ ಗುರಿಯಾದ ಸಾಯಿ ಪಲ್ಲವಿ ಪರ ಧನುಷ್ ಬ್ಯಾಟಿಂಗ್ Video

ಬಾಯ್​ಫ್ರೆಂಡ್​ ಜತೆ ಸೇರಿ ಪತಿ ಹತ್ಯೆ: ಹೃದಯಾಘಾತವೆಂದು ಬಿಂಬಿಸಿದ್ದ ಖತರ್ನಾಕ್‌ ಪತ್ನಿ, ಪ್ರಿಯಕರನ ಬಂಧನ!

ಇಷ್ಟು ದಿನ ಎಲ್ಲಿದ್ದಿ?..ದಶಕಗಳ ನಂತರ ನಟಿ ದೀಪಾ ಸನ್ನಿಧಿ ಪ್ರತ್ಯಕ್ಷ! ಫ್ಯಾನ್ಸ್ ಗೆ ಹೇಳಿದ್ದೇನು?