ಆರೋಪಿಯನ್ನು ಕರೆದೊಯ್ಯುತ್ತಿರುವ ಪೊಲೀಸರು 
ರಾಜ್ಯ

ಬೆಂಗಳೂರು ಒಂದೇ ಕುಟುಂಬದ 7 ಮಂದಿ ಹತ್ಯೆ ಪ್ರಕರಣ: ಶಿರಾಡಿ ಘಾಟ್‌ನಲ್ಲಿ ಮತ್ತೆರಡು ಶವಗಳು ಪತ್ತೆ, ಕುಟುಂಬಗಳಿಗೆ ಹಸ್ತಾಂತರ ಸಾಧ್ಯತೆ..!

ಶಿರಾಡಿ ಘಾಟ್‌ನಲ್ಲಿ ಮತ್ತೆ ಎರಡು ಮೃತದೇಹಗಳು ಪತ್ತೆಯಾಗಿದ್ದು, ಇದರೊಂದಿಗೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಎಲ್ಲಾ ಏಳು ಮಂದಿಯ ಮೃತದೇಹಗಳು ಪತ್ತೆಯಾದಂತಾಗಿದೆ.

ಬೆಂಗಳೂರು: ರಾಜ್ಯಾದ್ಯಂತ ಸಂಚಲನ ಮೂಡಿಸಿರುವ ಏಳು ಮಂದಿಯ ಹತ್ಯೆ ಪ್ರಕರಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆಯಾಗಿದೆ.

ಶಿರಾಡಿ ಘಾಟ್‌ನಲ್ಲಿ ಮತ್ತೆ ಎರಡು ಮೃತದೇಹಗಳು ಪತ್ತೆಯಾಗಿದ್ದು, ಇದರೊಂದಿಗೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಎಲ್ಲಾ ಏಳು ಮಂದಿಯ ಮೃತದೇಹಗಳು ಪತ್ತೆಯಾದಂತಾಗಿದೆ.

ಪ್ರಕರಣದ ತನಿಖೆಗಾಗಿ ಆರು ವಿಶೇಷ ತಂಡಗಳನ್ನು ರಚಿಸಲಾಗಿತ್ತು. ಈ ತಂಡಗಳು ವಿವಿಧೆಡೆ ಶೋಧ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಶಿರಾಡಿ ಘಾಟ್‌ನಲ್ಲಿ ಎರಡು ಮೃತದೇಹಗಳು ಪತ್ತೆಯಾಗಿವೆ.

ಇವು ಹತ್ಯೆಗೀಡಾದ ಶಂಕರ್‌ ಮತ್ತು ನಳಿನಿ ಅವರ ಮೃತದೇಹಗಳೆಂದು ಶಂಕಿಸಲಾಗಿದೆ. ಈ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆ ರಾಜಾಜಿನಗರ ಪೊಲೀಸರು ಹಾಗೂ ವಿಧಿವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್‌ಎಲ್‌) ತಂಡ ಬೆಂಗಳೂರಿನಿಂದ ಶಿರಾಡಿ ಘಾಟ್‌ಗೆ ತೆರಳಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ.

ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಪತ್ತೆಯಾಗಿದ್ದ ದಿವ್ಯಾ ಮತ್ತು ಶಿವಕುಮಾರ್‌ ಅವರ ಮೃತದೇಹಗಳು, ಸೇಲಂನಲ್ಲಿ ಪತ್ತೆಯಾಗಿದ್ದ ರೂಪವತಿ ಮತ್ತು ಸುನೀತಾ ಅವರ ಮೃತದೇಹಗಳು ಹಾಗೂ ಶಿರಾಡಿ ಘಾಟ್‌ನಲ್ಲಿ ಇಂದು ಪತ್ತೆಯಾಗಿರುವ ಶಂಕರ್‌ ಮತ್ತು ನಳಿನಿ ಅವರ ಮೃತದೇಹಗಳನ್ನು ಪೊಲೀಸರು ಇಂದು ಕುಟುಂಬಸ್ಥರಿಗೆ ಹಸ್ತಾಂತರಿಸುವ ಸಾಧ್ಯತೆಯಿದೆ. ಬಳಿಕ ಎಲ್ಲರ ಅಂತ್ಯಕ್ರಿಯೆಯನ್ನು ಒಂದೇ ಸ್ಥಳದಲ್ಲಿ ನೆರವೇರಿಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.

ಇನ್ನು ಹತ್ಯೆಗೀಡಾಗಿದ್ದ ಬಾಲಕ ಪುನೀತ್‌ನ ಅಂತ್ಯಕ್ರಿಯೆಯನ್ನು ನವೆಂಬರ್‌ 7ರ ಶನಿವಾರ ರಾಜಾಜಿನಗರದ ಹರಿಶ್ಚಂದ್ರ ಘಾಟ್‌ನಲ್ಲಿ ನೆರವೇರಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

West Asia war: 'ಯುದ್ಧ ನಿಲ್ಲಿಸಿ ಸಂಧಾನಕ್ಕೆ ಬನ್ನಿ, ಇಲ್ಲದಿದ್ದರೆ ನರಕ ಸೃಷ್ಟಿಸುತ್ತೇವೆ': ಅಮೆರಿಕ ಅಧ್ಯಕ್ಷ ಟ್ರಂಪ್‌ಗೆ ಇರಾನ್ ಖಡಕ್ ಎಚ್ಚರಿಕೆ..!

DC ಹುದ್ದೆಯಲ್ಲಿ ಮುಂದುವರಿಯಲು 75 ಲಕ್ಷ ರೂ. ಲಂಚ?: ಹಾಸನ ಜಿಲ್ಲಾಡಳಿತದಲ್ಲಿ ಸಂಚಲನ ಸೃಷ್ಟಿಸಿದ ವಾಟ್ಸ್‌ಆ್ಯಪ್ ಚಾಟ್, ತನಿಖೆಗೆ HDK ಒತ್ತಾಯ..!

ವಾಹನ ಸವಾರರೇ ಗಮನಿಸಿ: ಮೇಖ್ರಿ ಸರ್ಕಲ್ ಎಲಿವೇಟೆಡ್ ಕಾರಿಡಾರ್ ಕಾಮಗಾರಿ ಆರಂಭ; ಮುಂದಿನ 18 ತಿಂಗಳು ಸಂಚಾರ ಬದಲಾವಣೆ..!

ಒಂದೇ ತಿಂಗಳಲ್ಲಿ LPG ದರ ಕೆ.ಜಿಗೆ 11 ರೂ. ಹೆಚ್ಚಳ: ಆಟೋ ಚಾಲಕರಿಗೆ ಗಾಯದ ಮೇಲೆ ಬರೆ, ಪ್ರಯಾಣ ದರ ಮಾತ್ರ ಯಥಾಸ್ಥಿತಿ..!

ರಾಜ್ಯದಲ್ಲಿ ತಾರಕಕ್ಕೇರಿದ ಪೋಸ್ಟರ್ ವಾರ್: ಕಾಂಗ್ರೆಸ್-BJP ನಡುವೆ ತೀವ್ರ ವಾಕ್ಸಮರ..!