ಸಿಎಂ ಡಿ ಕೆ ಶಿವಕುಮಾರ್, ರಾಹುಲ್ ಗಾಂಧಿ  
ರಾಜ್ಯ

ರಾಹುಲ್ ಗಾಂಧಿಯನ್ನು ಮೆಚ್ಚಿಸಲು ಕಾಂಗ್ರೆಸ್ ಎಥೆನಾಲ್ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ: ಪ್ರಲ್ಹಾದ್ ಜೋಶಿ; Video

ನಿನ್ನೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಲ್ಹಾದ್ ಜೋಶಿ, ಎಥೆನಾಲ್ ಮಿಶ್ರಿತ ಪೆಟ್ರೋಲ್ ಕುರಿತು ಕೇಂದ್ರ ಸರ್ಕಾರ ಈಗಾಗಲೇ ಸ್ಪಷ್ಟನೆ ನೀಡಿದ್ದರೂ ಕಾಂಗ್ರೆಸ್ ಯಾವುದೇ ಆಧಾರವಿಲ್ಲದ ಆರೋಪಗಳನ್ನು ಮಾಡುತ್ತಿದೆ ಎಂದು ದೂರಿದರು.

ಬೆಂಗಳೂರು: ಪೆಟ್ರೋಲ್‌ನಲ್ಲಿ ಎಥೆನಾಲ್ ಮಿಶ್ರಣ ಮಾಡುವ ವಿಚಾರವಾಗಿ ರಾಜಕೀಯ ವಾಗ್ವಾದ ತೀವ್ರಗೊಂಡಿದ್ದು, ಕಾಂಗ್ರೆಸ್ ಪಕ್ಷವು ರಾಹುಲ್ ಗಾಂಧಿ ಅವರನ್ನು ಮೆಚ್ಚಿಸಲು ಈ ವಿಷಯವನ್ನು ರಾಜಕೀಯಗೊಳಿಸುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದ್ದಾರೆ.

ಮತ್ತೊಂದೆಡೆ, ಇಂಧನದ ಗುಣಮಟ್ಟದ ಬಗ್ಗೆ ಹೆಚ್ಚಿನ ಪಾರದರ್ಶಕತೆ ಮತ್ತು ಸ್ವತಂತ್ರ ಪರೀಕ್ಷೆ ನಡೆಸಬೇಕೆಂದು ಸಚಿವ ರಿಜ್ವಾನ್ ಅರ್ಷದ್ ಆಗ್ರಹಿಸಿದ್ದಾರೆ.

ನಿನ್ನೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಲ್ಹಾದ್ ಜೋಶಿ, ಎಥೆನಾಲ್ ಮಿಶ್ರಿತ ಪೆಟ್ರೋಲ್ ಕುರಿತು ಕೇಂದ್ರ ಸರ್ಕಾರ ಈಗಾಗಲೇ ಸ್ಪಷ್ಟನೆ ನೀಡಿದ್ದರೂ ಕಾಂಗ್ರೆಸ್ ಯಾವುದೇ ಆಧಾರವಿಲ್ಲದ ಆರೋಪಗಳನ್ನು ಮಾಡುತ್ತಿದೆ ಎಂದು ದೂರಿದರು.

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಮತ್ತು ವಿದ್ಯುನ್ಮಾನ ಮತಯಂತ್ರಗಳ (EVM) ವಿಚಾರಗಳಲ್ಲಿ ಜನರ ಬೆಂಬಲ ಪಡೆಯಲು ವಿಫಲವಾದ ಬಳಿಕ ರಾಜಕೀಯವಾಗಿ ಪ್ರಸ್ತುತವಾಗಿರಲು ಪ್ರತಿಪಕ್ಷವು ಈ ವಿವಾದವನ್ನು ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದರು.

ತೈಲ ಮಾರುಕಟ್ಟೆ ಕಂಪನಿಗಳ (OMC) ಅಧಿಕಾರಿಗಳು ಮತ್ತು ರಾಜ್ಯ ಸರ್ಕಾರದ ಪ್ರತಿನಿಧಿಗಳನ್ನು ಒಳಗೊಂಡ ಜಂಟಿ ಸಭೆ ನಡೆಸುವ ಪ್ರಸ್ತಾಪವನ್ನೂ ಅವರು ಮುಂದಿಟ್ಟರು. ಸಚಿವ ರಿಜ್ವಾನ್ ಅರ್ಷದ್ ಅವರು ಸಭೆಯ ಅಧ್ಯಕ್ಷತೆ ವಹಿಸಿ, ಪ್ರಕ್ರಿಯೆಯ ಮೇಲ್ವಿಚಾರಣೆ ನಡೆಸಬಹುದು ಎಂದು ಸಲಹೆ ನೀಡಿದರು.

ಆದರೆ, ಪ್ರಲ್ಹಾದ್ ಜೋಶಿ ಅವರ ಮಧ್ಯಪ್ರವೇಶವನ್ನು ತಿರಸ್ಕರಿಸಿದ ರಿಜ್ವಾನ್ ಅರ್ಷದ್, ಈ ವಿಚಾರಕ್ಕೆ ಸಂಬಂಧಿಸಿದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಮುಖ್ಯಸ್ಥರು ಕೇಂದ್ರ ಸಚಿವರಲ್ಲ ಎಂದು ಗಮನಸೆಳೆದರು. ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಪರವಾಗಿ ಪ್ರಲ್ಹಾದ್ ಜೋಶಿ ಮಾತನಾಡುತ್ತಿದ್ದಾರೆ ಎಂದು ಆರೋಪಿಸಿದರು.

ರಾಜ್ಯದ ನಿಲುವನ್ನು ಸ್ಪಷ್ಟಪಡಿಸಿದ ಸಚಿವ ಅರ್ಷದ್, ಎಥೆನಾಲ್ ಮಿಶ್ರಣಕ್ಕೆ ಕರ್ನಾಟಕ ವಿರೋಧ ವ್ಯಕ್ತಪಡಿಸುತ್ತಿಲ್ಲ ಎಂದರು. ಇದರಿಂದ ರೈತರು ಮತ್ತು ಸಕ್ಕರೆ ಉದ್ಯಮಕ್ಕೆ ಅನುಕೂಲವಾಗುವ ಸಾಧ್ಯತೆಯಿದೆ ಎಂಬುದನ್ನೂ ಒಪ್ಪಿಕೊಂಡರು. ಆದರೆ, ಮಾರಾಟವಾಗುತ್ತಿರುವ ಇಂಧನದ ನೈಜ ಸಂಯೋಜನೆ ಏನು ಎಂಬ ಬಗ್ಗೆ ಗ್ರಾಹಕರಿಗೆ ಉತ್ತರ ಸಿಗದಂತಾಗಬಾರದು ಎಂದು ಒತ್ತಾಯಿಸಿದರು.

ಶೇ.26ರಿಂದ 31ರಷ್ಟು ಎಥೆನಾಲ್ ಹೊಂದಿರುವ ಪೆಟ್ರೋಲ್ ನ್ನು ಇ20 ಎಂದು ಮಾರಾಟ ಮಾಡುವ ಕ್ರಮವನ್ನು ಅವರು ಪ್ರಶ್ನಿಸಿದರು. ಗ್ರಾಹಕರು ತಾವು ಖರೀದಿಸುತ್ತಿರುವ ಇಂಧನದಲ್ಲಿ ಎಷ್ಟು ಪ್ರಮಾಣದ ಎಥೆನಾಲ್ ಇದೆ ಎಂಬುದನ್ನು ನಿಖರವಾಗಿ ತಿಳಿದುಕೊಳ್ಳುವ ಹಕ್ಕು ಹೊಂದಿದ್ದಾರೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Babri ಧ್ವಂಸದ ದಿನ ಬಿಕ್ಕಿ ಬಿಕ್ಕಿ ಅತ್ತಿದ್ದೆ: ಇಂದಿರಾ ಹತ್ಯೆ ನಂತರ ಪ್ರತಿಕ್ಷಣವೂ ಭಯದಲ್ಲೇ ಬದುಕಿದ್ದೆವು: ‘Belonging’ ಆತ್ಮಚರಿತ್ರೆಯಲ್ಲಿ ಹಳೇ ನೆನಪುಗಳ ಕೆದಕಿದ ಸೋನಿಯಾ ಗಾಂಧಿ..!

Mother Dairy: ಮತ್ತೆ ಹಾಲಿನ ದರ ಏರಿಕೆ, ಲೀಟರ್`ಗೆ ಬರೊಬ್ಬರಿ 4 ರೂ ಹೆಚ್ಚಳ, ನಾಳೆಯಿಂದಲೇ ನೂತನ ದರ ಜಾರಿ!

ಪವನ್ ಕಲ್ಯಾಣ್‌ ವಿಚ್ಚೇದನ: ಘೋಷಣೆಗೂ ತಿಂಗಳ ಹಿಂದಷ್ಟೇ ಹೆಸರು ಬದಲಿಸಿಕೊಂಡಿದ್ದ ಅನ್ನಾ, ಕೊನಿಡೆಲಾ ಮನೆತನದ ಹೆಸರು ಸೇರ್ಪಡೆ!

ಅಮೆರಿಕ ರಾಜಕೀಯದಲ್ಲಿ ಹೈಡ್ರಾಮಾ: ರಕ್ಷಣಾ ಕಾರ್ಯದರ್ಶಿ ಹೆಗ್ಸೆತ್ ವಿರುದ್ಧದ ವಾಗ್ದಂಡನೆ ನಿರ್ಣಯಕ್ಕೆ ಸೋಲು, Trump ಬೆಂಬಲಕ್ಕೆ ನಿಂತ ರಿಪಬ್ಲಿಕನ್ನರು..!

'ಗಂಡು ಎಷ್ಟು ಮದುವೆಯಾದರೂ ತಪ್ಪಿಲ್ಲ, ಹೆಣ್ಣು ಮರುಮದುವೆಯಾಗಬಾರದಾ?': ಟ್ರೋಲಿಗರಿಗೆ ಪವನ್ ಕಲ್ಯಾಣ್ ಮಾಜಿ ಪತ್ನಿ ರೇಣು ದೇಸಾಯಿ ಖಡಕ್ ತಿರುಗೇಟು!