ನಮ್ಮ ಮೆಟ್ರೊ ನೇರಳೆ ಮಾರ್ಗ 
ರಾಜ್ಯ

ವಿಜಯನಗರ ಮೆಟ್ರೋ ನಿಲ್ದಾಣದಲ್ಲಿ ಹಳಿಗೆ ಹಾರಿದ ಪ್ರಯಾಣಿಕ: ತಕ್ಷಣ ರಕ್ಷಿಸಿದ ಸಿಬ್ಬಂದಿ, ನೇರಳೆ ಮಾರ್ಗದಲ್ಲಿ 27 ನಿಮಿಷ ಸಂಚಾರ ವ್ಯತ್ಯಯ..!

ತಕ್ಷಣವೇ ಕಾರ್ಯಪ್ರವೃತ್ತರಾದ ಬೆಂಗಳೂರು ಮೆಟ್ರೋ ರೈಲು ನಿಗಮದ (BMRCL) ಸಿಬ್ಬಂದಿ ಹಾಗೂ ಭದ್ರತಾ ಅಧಿಕಾರಿಗಳು ತುರ್ತು ರಕ್ಷಣಾ ಕಾರ್ಯಾಚರಣೆ ನಡೆಸಿ ಪ್ರಯಾಣಿಕನನ್ನು ರಕ್ಷಿಸಿದ್ದಾರೆ. ಬಳಿಕ ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಬೆಂಗಳೂರು: ನಗರದ ವಿಜಯನಗರ ಮೆಟ್ರೋ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರು ಹಳಿಗೆ ಹಾರಿದ ಘಟನೆಯಿಂದಾಗಿ ನಮ್ಮ ಮೆಟ್ರೋದ ನೇರಳೆ ಮಾರ್ಗದ (Purple Line) ರೈಲು ಸೇವೆಗಳಲ್ಲಿ ಮಂಗಳವಾರ (ನವೆಂಬರ್ 10) ಮಧ್ಯಾಹ್ನ ಸುಮಾರು 27 ನಿಮಿಷಗಳ ಕಾಲ ವ್ಯತ್ಯಯ ಉಂಟಾಯಿತು.

ಮಧ್ಯಾಹ್ನ 1:31 ರ ಸುಮಾರಿಗೆ ವಿಜಯನಗರ ಮೆಟ್ರೋ ನಿಲ್ದಾಣಕ್ಕೆ ರೈಲು ಆಗಮಿಸುತ್ತಿದ್ದ ವೇಳೆ, ಪ್ರಯಾಣಿಕರೊಬ್ಬರು ಏಕಾಏಕಿ ಅಪ್-ಟ್ರ್ಯಾಕ್‌ಗೆ (up-track) ಹಾರಿದ್ದಾರೆ.

ತಕ್ಷಣವೇ ಕಾರ್ಯಪ್ರವೃತ್ತರಾದ ಬೆಂಗಳೂರು ಮೆಟ್ರೋ ರೈಲು ನಿಗಮದ (BMRCL) ಸಿಬ್ಬಂದಿ ಹಾಗೂ ಭದ್ರತಾ ಅಧಿಕಾರಿಗಳು ತುರ್ತು ರಕ್ಷಣಾ ಕಾರ್ಯಾಚರಣೆ ನಡೆಸಿ ಪ್ರಯಾಣಿಕನನ್ನು ರಕ್ಷಿಸಿದ್ದಾರೆ. ಬಳಿಕ ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಬಿಎಂಆರ್‌ಸಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ.

ರಕ್ಷಣೆ ಮತ್ತು ಸುರಕ್ಷತಾ ಕಾರ್ಯಾಚರಣೆ ನಡೆಯುತ್ತಿದ್ದ ಸಂದರ್ಭದಲ್ಲಿ ಪ್ರಯಾಣಿಕರಿಗೆ ತೊಂದರೆಯಾಗದಂತೆ ನೇರಳೆ ಮಾರ್ಗದ ಬಾಧಿತವಲ್ಲದ ವಿಭಾಗಗಳಲ್ಲಿ ಮಾತ್ರ ರೈಲು ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಕೆಂಪೇಗೌಡ ನಿಲ್ದಾಣ (ಮೆಜೆಸ್ಟಿಕ್) ಮತ್ತು ವೈಟ್‌ಫೀಲ್ಡ್ (ಕಾಡುಗೋಡಿ) ನಡುವೆ ಹಾಗೂ ಮೈಸೂರು ರಸ್ತೆ ಮತ್ತು ಚಲ್ಲಘಟ್ಟ ನಡುವೆ ರೈಲುಗಳು ಸಂಚರಿಸಿದವು ಎಂದು ನಿಗಮ ತಿಳಿಸಿದೆ.

ಮಧ್ಯಾಹ್ನ 1.58ರಿಂದ ನೇರಳೆ ಮಾರ್ಗದಲ್ಲಿ ರೈಲು ಸಂಚಾರ ಸಹಜ ಸ್ಥಿತಿಗೆ ಮರಳಿತು. ಹಸಿರು ಮತ್ತು ಹಳದಿ ಮಾರ್ಗಗಳ ಮೆಟ್ರೋ ಸೇವೆಗಳಿಗೆ ಯಾವುದೇ ತೊಂದರೆಯಾಗಿಲ್ಲ ಎಂದು ಸ್ಪಷ್ಟಪಡಿಸಿದೆ.

ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗಾಗಿ ಬಿಎಂಆರ್‌ಸಿಎಲ್ ವಿಷಾದಿಸುತ್ತದೆ. ಸಹಕಾರ ಮತ್ತು ತಿಳಿವಳಿಕೆ ತೋರಿದ ಪ್ರಯಾಣಿಕರಿಗೆ ಧನ್ಯವಾದ ಸಲ್ಲಿಸುತ್ತದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Babri ಧ್ವಂಸದ ದಿನ ಬಿಕ್ಕಿ ಬಿಕ್ಕಿ ಅತ್ತಿದ್ದೆ: ಇಂದಿರಾ ಹತ್ಯೆ ನಂತರ ಪ್ರತಿಕ್ಷಣವೂ ಭಯದಲ್ಲೇ ಬದುಕಿದ್ದೆವು: ‘Belonging’ ಆತ್ಮಚರಿತ್ರೆಯಲ್ಲಿ ಹಳೇ ನೆನಪುಗಳ ಕೆದಕಿದ ಸೋನಿಯಾ ಗಾಂಧಿ..!

ಅಮೆರಿಕ ರಾಜಕೀಯದಲ್ಲಿ ಹೈಡ್ರಾಮಾ: ರಕ್ಷಣಾ ಕಾರ್ಯದರ್ಶಿ ಹೆಗ್ಸೆತ್ ವಿರುದ್ಧದ ವಾಗ್ದಂಡನೆ ನಿರ್ಣಯಕ್ಕೆ ಸೋಲು, Trump ಬೆಂಬಲಕ್ಕೆ ನಿಂತ ರಿಪಬ್ಲಿಕನ್ನರು..!

ಮಗುವನ್ನು ನದಿಗೆ ಬಿಡಲು ಒಪ್ಪದ ಸೋನಿಯಾ: ಮೆಹ್ರೌಲಿ ತೋಟದಲ್ಲಿ ನಡೆದಿತ್ತು ಆ ಪುಟ್ಟ ಕಂದನ ಅಂತ್ಯಕ್ರಿಯೆ, 57 ವರ್ಷಗಳ ಬಳಿಕ ಮನದ ನೋವು ಬಿಚ್ಚಿಟ್ಟ ಕಾಂಗ್ರೆಸ್ ನಾಯಕಿ..!

ಆರ್ಥಿಕ ನಿರ್ಬಂಧಗಳು ಪರಿಣಾಮಕಾರಿಯಾಗಿವೆ, ಇರಾನ್ ವಿರುದ್ಧ ಯುದ್ಧ ಕಾರ್ಯಾಚರಣೆ ಅಗತ್ಯವಿಲ್ಲ: US ವಿದೇಶಾಂಗ ಸಚಿವ ರೂಬಿಯೊ

ಅಜ್ಜನ ಆಸ್ತಿಯಲ್ಲಿ ಮೊಮ್ಮಗನಿಗೆ ಜನ್ಮಸಿದ್ಧ ಹಕ್ಕು ಇದೆಯೇ?: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು