ಯುಟಿ ಖಾದರ್ ರಾಜಿನಾಮೆ 
ರಾಜ್ಯ

ಖಾಯಂ ವೈದ್ಯರ ನೇಮಕವಾದರೂ ಒಪ್ಪಂದ ಆಧಾರಿತ ವೈದ್ಯರಿಗೆ ಕೊಕ್ ಇಲ್ಲ: ರಾಜ್ಯ ಸರ್ಕಾರ

ಆರೋಗ್ಯ ಇಲಾಖೆಯಲ್ಲಿ ವೈದ್ಯಕೀಯ ಸಿಬ್ಬಂದಿ ಕೊರತೆ ನೀಗಿಸಲು ಹಾಗೂ ರಾಜ್ಯಾದ್ಯಂತ ಆರೋಗ್ಯ ಸೇವೆಗಳಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳಲು ತಾವು ಸಚಿವರಾಗಿ ಅಧಿಕಾರ ವಹಿಸಿಕೊಂಡ ಕೆಲವೇ ದಿನಗಳಲ್ಲಿ 300ಕ್ಕೂ ಹೆಚ್ಚು ವೈದ್ಯಾಧಿಕಾರಿಗಳನ್ನು ಒಪ್ಪಂದದ ಆಧಾರದ ಮೇಲೆ ನೇಮಕ ಮಾಡಲಾಗಿತ್ತು.

ಬೆಂಗಳೂರು: ಖಾಯಂ ವೈದ್ಯಕೀಯ ಸೇವೆ (ಸಿಎಂಎಸ್) ವೈದ್ಯರನ್ನು ನೇಮಕ ಮಾಡಿದರೂ, ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಒಪ್ಪಂದ ಆಧಾರಿತ ವೈದ್ಯಾಧಿಕಾರಿಗಳನ್ನು ಅವರ ಹಾಲಿ ಹುದ್ದೆಗಳಿಂದ ತೆರವುಗೊಳಿಸಬಾರದು ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ (ಡಿಎಚ್‌ಒ) ಸೂಚನೆ ನೀಡಿದ್ದಾರೆ.

ಈ ಕುರಿತು ರಾಜ್ಯದ ಎಲ್ಲ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಪತ್ರ ಬರೆದಿರುವ ಅವರು, ಆರೋಗ್ಯ ಕೇಂದ್ರಗಳಲ್ಲಿ ಈಗಾಗಲೇ ಕರ್ತವ್ಯ ನಿರ್ವಹಿಸುತ್ತಿರುವ ಒಪ್ಪಂದ ಆಧಾರಿತ ವೈದ್ಯರು ಯಾವುದೇ ಅಡೆತಡೆಯಿಲ್ಲದೆ ತಮ್ಮ ಕೆಲಸ ಮುಂದುವರಿಸಲು ಅವಕಾಶ ನೀಡಬೇಕು ಎಂದು ತಿಳಿಸಿದ್ದಾರೆ.

ಅದೇ ಸ್ಥಳಗಳಿಗೆ ಖಾಯಂ ವೈದ್ಯರನ್ನು ನೇಮಕ ಮಾಡಿದರೂ, ಹಾಲಿ ವೈದ್ಯರು ತಮ್ಮ ಹುದ್ದೆಗಳನ್ನು ತೆರವುಗೊಳಿಸುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಆರೋಗ್ಯ ಇಲಾಖೆಯಲ್ಲಿ ವೈದ್ಯಕೀಯ ಸಿಬ್ಬಂದಿ ಕೊರತೆ ನೀಗಿಸಲು ಹಾಗೂ ರಾಜ್ಯಾದ್ಯಂತ ಆರೋಗ್ಯ ಸೇವೆಗಳಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳಲು ತಾವು ಸಚಿವರಾಗಿ ಅಧಿಕಾರ ವಹಿಸಿಕೊಂಡ ಕೆಲವೇ ದಿನಗಳಲ್ಲಿ 300ಕ್ಕೂ ಹೆಚ್ಚು ವೈದ್ಯಾಧಿಕಾರಿಗಳನ್ನು ಒಪ್ಪಂದದ ಆಧಾರದ ಮೇಲೆ ನೇಮಕ ಮಾಡಲಾಗಿತ್ತು ಎಂದು ಹೇಳಿದ್ದಾರೆ.

ಕರ್ನಾಟಕದ ಆರೋಗ್ಯ ಇಲಾಖೆಯ ಇತಿಹಾಸದಲ್ಲೇ ಇಷ್ಟು ದೊಡ್ಡ ಪ್ರಮಾಣದಲ್ಲಿ ಒಪ್ಪಂದ ಆಧಾರಿತ ವೈದ್ಯಾಧಿಕಾರಿಗಳನ್ನು ನೇಮಕ ಮಾಡಿರುವುದು ಇದೇ ಮೊದಲು ಎಂದು ತಿಳಿಸಿದ್ದಾರೆ.

ಗ್ರಾಮೀಣ ಹಾಗೂ ನಗರ ಪ್ರದೇಶಗಳೆರಡರಲ್ಲೂ ಆರೋಗ್ಯ ಸೇವೆಗಳ ನಿರಂತರತೆ ಮತ್ತು ಸ್ಥಿರತೆಯನ್ನು ಕಾಪಾಡುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಹೇಳಿದ್ದಾರೆ.

ಒಪ್ಪಂದ ಆಧಾರಿತ ವೈದ್ಯರನ್ನು ಹುದ್ದೆಯಿಂದ ತೆರವುಗೊಳಿಸುವ ಜಿಲ್ಲಾ ಆರೋಗ್ಯಾಧಿಕಾರಿಗಳ ವಿರುದ್ಧ ಯಾವುದೇ ವಿನಾಯಿತಿ ಇಲ್ಲದೆ ಕಠಿಣ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಇಂತಹ ಘಟನೆಗಳು ಕಂಡುಬಂದರೆ ಸಂಬಂಧಪಟ್ಟವರು ನೇರವಾಗಿ ಆಯುಕ್ತರ ಕಚೇರಿಗೆ ದೂರು ನೀಡುವಂತೆಯೂ ಸೂಚಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಚೀನಾ Spy ಮೋಹಕ್ಕೆ ಬಿದ್ದರಾ ಟೆಕ್ ದಿಗ್ಗಜ..? Nvidia CEO ಕುರ್ಚಿಗೆ ಕುತ್ತು, Jensen Huang ತಲೆದಂಡಕ್ಕೆ ಮುಹೂರ್ತ ಫಿಕ್ಸ್..?

E-ಖಾತಾ ಅಕ್ರಮ: GBA ಸಹಾಯಕ ಆಯುಕ್ತ ಮಾಗಿ ಸೇರಿ 31 ಜನರ ವಿರುದ್ಧ FIR ದಾಖಲು

ನಟಿ-ಮಾಡೆಲ್ ಸಮ್ರೀನ್ ಜತೆ ಸ್ಟಾರ್‌ ಕ್ರಿಕೆಟರ್‌ ಅರ್ಷ್‌ದೀಪ್ ಸಿಂಗ್ ಎಂಗೇಜ್‌ಮೆಂಟ್; ಫೋಟೋ ಹಂಚಿಕೊಂಡ ಗರ್ಲ್​ಫ್ರೆಂಡ್!

ಪ್ರೀತಿ, ನಷ್ಟ, ನೋವು, ತ್ಯಾಗದ ಅಪರೂಪದ ಕಥನ; ಪ್ರತಿಯೊಬ್ಬ ಭಾರತೀಯರ ಓದಲೇಬೇಕಾದ ಪುಸ್ತಕ': ಸೋನಿಯಾ ಗಾಂಧಿ ಆತ್ಮಕಥನಕ್ಕೆ ಕಾಂಗ್ರೆಸ್ ನಾಯಕರ ಮೆಚ್ಚುಗೆ..!

'ಕೈ' ಕಾರ್ಯಕರ್ತರಿಗೆ ಸರ್ಕಾರ ಭರ್ಜರಿ ಗಿಫ್ಟ್; 428 ಮಂದಿಗೆ ನಿಗಮ-ಮಂಡಳಿಗಳಲ್ಲಿ ಸ್ಥಾನ..!