ಸಾಂದರ್ಭಿಕ ಚಿತ್ರ 
ರಾಜ್ಯ

ಗ್ರಾಹಕರ ನಂಬಿಕೆಗೆ ದ್ರೋಹ; ಅಡವಿಟ್ಟ ಚಿನ್ನವನ್ನೇ ಕದ್ದು ಹಣ ಮಾಡಿಕೊಂಡ ಬ್ಯಾಂಕ್ ಸಿಬ್ಬಂದಿ, ಬಂಧನ..!

ದೊಡ್ಡಬಳ್ಳಾಪುರದ ರೋಜಿಪುರ ಗೇಟ್ ನಿವಾಸಿ ಪವನ್ ಕುಮಾರ್ ಆರ್ ಬಂಧಿತ ಆರೋಪಿ. ವೃತ್ತಿಯಲ್ಲಿ ಅಕ್ಕಸಾಲಿಗನಾಗಿದ್ದ ಈತ, ರಾಜಾನುಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಸಾರ್ವಜನಿಕ ವಲಯದ ಬ್ಯಾಂಕ್‌ವೊಂದರಲ್ಲಿ ಚಿನ್ನದ ಮೌಲ್ಯಮಾಪಕನಾಗಿ ಕಾರ್ಯನಿರ್ವಹಿಸುತ್ತಿದ್ದ.

ಬೆಂಗಳೂರು: ಬ್ಯಾಂಕ್ ಗ್ರಾಹಕರು ಅಡವಿಟ್ಟಿದ್ದ ಸುಮಾರು ₹1.80 ಕೋಟಿ ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿದ್ದಲ್ಲದೆ, ಚಿನ್ನ ಅಡವಿಟ್ಟು ಬ್ಯಾಂಕ್‌ಗೆ ₹35.40 ಲಕ್ಷ ವಂಚಿಸಿದ್ದ ಚಿನ್ನದ ಮೌಲ್ಯಮಾಪಕನನ್ನು (ಅಪ್ರೈಸರ್) ರಾಜಾನುಕುಂಟೆ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯು ವಿವಿಧ ಚಿನ್ನಾಭರಣ ಅಂಗಡಿಗಳಲ್ಲಿ ಅಡವಿಟ್ಟಿದ್ದ ಕದ್ದ ಆಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ದೊಡ್ಡಬಳ್ಳಾಪುರದ ರೋಜಿಪುರ ಗೇಟ್ ನಿವಾಸಿ ಪವನ್ ಕುಮಾರ್ ಆರ್ ಬಂಧಿತ ಆರೋಪಿ. ವೃತ್ತಿಯಲ್ಲಿ ಅಕ್ಕಸಾಲಿಗನಾಗಿದ್ದ ಈತ, ರಾಜಾನುಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಸಾರ್ವಜನಿಕ ವಲಯದ ಬ್ಯಾಂಕ್‌ವೊಂದರಲ್ಲಿ ಚಿನ್ನದ ಮೌಲ್ಯಮಾಪಕನಾಗಿ ಕಾರ್ಯನಿರ್ವಹಿಸುತ್ತಿದ್ದ.

ಇತರ ವ್ಯಕ್ತಿಗಳ ಹೆಸರಿನಲ್ಲಿ ಚಿನ್ನದ ಸಾಲದ ಖಾತೆಗಳನ್ನು ತೆರೆದು ನಕಲಿ ಚಿನ್ನಾಭರಣಗಳನ್ನು ಅಡವಿಟ್ಟಿದ್ದ ಎನ್ನಲಾಗಿದೆ. ಈ ಮೂಲಕ ಬ್ಯಾಂಕ್‌ಗೆ 35.40 ಲಕ್ಷ ರೂ. ವಂಚಿಸಿದ್ದ ಎಂದು ಆರೋಪಿಸಲಾಗಿದೆ.

ಇದರ ಜತೆಗೆ, ವಿವಿಧ ಗ್ರಾಹಕರು ಚಿನ್ನದ ಸಾಲಕ್ಕಾಗಿ ಬ್ಯಾಂಕ್‌ನಲ್ಲಿ ಅಡವಿಟ್ಟಿದ್ದ 1 ಕೆ.ಜಿ. 198 ಗ್ರಾಂ ಚಿನ್ನಾಭರಣಗಳನ್ನು ಕದ್ದು, ಅವುಗಳನ್ನು ವಿವಿಧ ಚಿನ್ನಾಭರಣ ಅಂಗಡಿಗಳಲ್ಲಿ ಅಡವಿಟ್ಟು ಹಣ ಪಡೆದಿದ್ದ ಎನ್ನಲಾಗಿದೆ.

ಈ ಸಂಬಂಧ ಬ್ಯಾಂಕ್‌ನ ಪ್ರಾದೇಶಿಕ ವ್ಯವಸ್ಥಾಪಕರು 2026ರ ಅಕ್ಟೋಬರ್ 9ರಂದು ರಾಜಾನುಕುಂಟೆ ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದರು.

ತನಿಖೆಯ ವೇಳೆ ವಿವಿಧ ಮೂಲಗಳಿಂದ ಮಾಹಿತಿ ಸಂಗ್ರಹಿಸಿದ ಪೊಲೀಸರು, ಖಚಿತ ಸುಳಿವಿನ ಮೇರೆಗೆ 2026ರ ಅಕ್ಟೋಬರ್ 13ರಂದು ದೊಡ್ಡಬಳ್ಳಾಪುರದ ರೋಜಿಪುರ ಗೇಟ್ ಸಮೀಪದ ನಿವಾಸದಿಂದ ಆರೋಪಿಯನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಆತ ಕೃತ್ಯದಲ್ಲಿ ಭಾಗಿಯಾಗಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಕ್ಟೋಬರ್ 13ರಂದು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ 10 ದಿನಗಳ ಪೊಲೀಸ್ ವಶಕ್ಕೆ ಪಡೆಯಲಾಗಿತ್ತು. ವಿಚಾರಣೆ ವೇಳೆ ರಾಜಾನುಕುಂಟೆಯ ಎರಡು ಹಾಗೂ ದೊಡ್ಡಬಳ್ಳಾಪುರದ ನಾಲ್ಕು ಚಿನ್ನಾಭರಣ ಅಂಗಡಿಗಳಲ್ಲಿ ಕದ್ದ ಚಿನ್ನವನ್ನು ಅಡವಿಟ್ಟಿರುವುದಾಗಿ ಆರೋಪಿ ಮಾಹಿತಿ ನೀಡಿದ್ದಾನೆ ಎನ್ನಲಾಗಿದೆ.

ಅಕ್ಟೋಬರ್ 14ರಿಂದ 22ರವರೆಗೆ ಪೊಲೀಸರು ರಾಜಾನುಕುಂಟೆಯ ಎರಡು ಮತ್ತು ದೊಡ್ಡಬಳ್ಳಾಪುರದ ಎರಡು ಚಿನ್ನಾಭರಣ ಅಂಗಡಿಗಳಿಂದ ಒಟ್ಟು 1.198 ಕೆ.ಜಿ. ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಶ್ಮೀರ: ಕರ್ತವ್ಯದ ವೇಳೆ ನಾಪತ್ತೆಯಾಗಿದ್ದ ಇಬ್ಬರು ಪೊಲೀಸ್ ಅಧಿಕಾರಿಗಳು ಶವವಾಗಿ ಪತ್ತೆ

ನಟಿ-ಮಾಡೆಲ್ ಸಮ್ರೀನ್ ಜತೆ ಸ್ಟಾರ್‌ ಕ್ರಿಕೆಟರ್‌ ಅರ್ಷ್‌ದೀಪ್ ಸಿಂಗ್ ಎಂಗೇಜ್‌ಮೆಂಟ್; ಫೋಟೋ ಹಂಚಿಕೊಂಡ ಗರ್ಲ್​ಫ್ರೆಂಡ್!

ಚೀನಾ Spy ಮೋಹಕ್ಕೆ ಬಿದ್ದರಾ ಟೆಕ್ ದಿಗ್ಗಜ..? Nvidia CEO ಕುರ್ಚಿಗೆ ಕುತ್ತು, Jensen Huang ತಲೆದಂಡಕ್ಕೆ ಮುಹೂರ್ತ ಫಿಕ್ಸ್..?

E-ಖಾತಾ ಅಕ್ರಮ: GBA ಸಹಾಯಕ ಆಯುಕ್ತ ಮಾಗಿ ಸೇರಿ 31 ಜನರ ವಿರುದ್ಧ FIR ದಾಖಲು

ಪ್ರೀತಿ, ನಷ್ಟ, ನೋವು, ತ್ಯಾಗದ ಅಪರೂಪದ ಕಥನ; ಪ್ರತಿಯೊಬ್ಬ ಭಾರತೀಯರ ಓದಲೇಬೇಕಾದ ಪುಸ್ತಕ': ಸೋನಿಯಾ ಗಾಂಧಿ ಆತ್ಮಕಥನಕ್ಕೆ ಕಾಂಗ್ರೆಸ್ ನಾಯಕರ ಮೆಚ್ಚುಗೆ..!