ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ದೂರು ಸಲ್ಲಿಸಿದ ಜೆಡಿಎಸ್ ಶಾಸಕರ ನಿಯೋಗ. 
ರಾಜ್ಯ

ಹಾಸನ DC ಕಚೇರಿಯಲ್ಲಿ ಕೋಟ್ಯಂತರ ರೂ. ಭ್ರಷ್ಟಾಚಾರ ಆರೋಪ; ಸ್ವತಂತ್ರ ತನಿಖೆಗೆ JDS ಪಟ್ಟು..!

ಈ ಪ್ರಕರಣವನ್ನು ಜಿಲ್ಲಾಡಳಿತದ ಆಂತರಿಕ ವಿಚಾರಣೆಗೆ ಮಾತ್ರ ಸೀಮಿತಗೊಳಿಸಬಾರದು. ಲೋಕಾಯುಕ್ತ ಅಥವಾ ಸಮರ್ಥ ಸ್ವತಂತ್ರ ತನಿಖಾ ಸಂಸ್ಥೆಯ ಮೂಲಕ ಉನ್ನತ ಮಟ್ಟದಲ್ಲಿ ತನಿಖೆ ನಡೆಸಬೇಕು ಎಂದು ನಿಯೋಗ ಮನವಿಯಲ್ಲಿ ತಿಳಿಸಿದೆ.

ಬೆಂಗಳೂರು: ಹಾಸನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೋಟ್ಯಂತರ ರೂಪಾಯಿ ಹಣಕಾಸು ವಹಿವಾಟು ಮತ್ತು ಭ್ರಷ್ಟಾಚಾರ ನಡೆದಿದೆ ಎಂಬ ಆರೋಪಗಳ ಕುರಿತು ಸಮಗ್ರ ಹಾಗೂ ಸ್ವತಂತ್ರ ತನಿಖೆ ನಡೆಸುವಂತೆ ಆಗ್ರಹಿಸಿ ಜೆಡಿಎಸ್ ಶಾಸಕರ ನಿಯೋಗ ಬುಧವಾರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ದೂರು ಸಲ್ಲಿಸಿದೆ.

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಶಾಸಕ ಸಿ.ಬಿ. ಸುರೇಶ್ ಬಾಬು, ವಿಧಾನ ಪರಿಷತ್ತಿನ ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕ ಟಿ.ಎ. ಶರವಣ ಮತ್ತು ಶಾಸಕ ರಾಜುಗೌಡ ಪಾಟೀಲ್ ಅವರು ನಿಯೋಗದಲ್ಲಿದ್ದರು.

ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಮಧ್ಯವರ್ತಿಗಳ ಪಾತ್ರ, ಹಣಕಾಸು ವಹಿವಾಟಿನ ಮೂಲ, ಬ್ಯಾಂಕ್ ಖಾತೆಗಳು, ಯುಪಿಐ ಮೂಲಕ ನಡೆದ ವಹಿವಾಟುಗಳು ಮತ್ತು ಇತರ ಹಣಕಾಸು ದಾಖಲೆಗಳನ್ನು ಸಮಗ್ರವಾಗಿ ಪರಿಶೀಲಿಸಬೇಕು ಎಂದು ನಿಯೋಗ ಮನವಿಯಲ್ಲಿ ಒತ್ತಾಯಿಸಿದೆ.

ಸಾರ್ವಜನಿಕವಾಗಿ ಬಹಿರಂಗಗೊಂಡಿರುವ ವಾಟ್ಸ್‌ಆ್ಯಪ್ ಸಂಭಾಷಣೆಗಳ ಸತ್ಯಾಸತ್ಯತೆಯನ್ನೂ ಮೂಲ ಮೊಬೈಲ್ ಫೋನ್‌ಗಳು, ಡಿಜಿಟಲ್ ದಾಖಲೆಗಳು ಹಾಗೂ ವಿಧಿವಿಜ್ಞಾನ ಪರೀಕ್ಷೆಯ ಮೂಲಕ ದೃಢಪಡಿಸಬೇಕು ಎಂದು ಆಗ್ರಹಿಸಿದೆ.

ಈ ಪ್ರಕರಣವನ್ನು ಜಿಲ್ಲಾಡಳಿತದ ಆಂತರಿಕ ವಿಚಾರಣೆಗೆ ಮಾತ್ರ ಸೀಮಿತಗೊಳಿಸಬಾರದು. ಲೋಕಾಯುಕ್ತ ಅಥವಾ ಸಮರ್ಥ ಸ್ವತಂತ್ರ ತನಿಖಾ ಸಂಸ್ಥೆಯ ಮೂಲಕ ಉನ್ನತ ಮಟ್ಟದಲ್ಲಿ ತನಿಖೆ ನಡೆಸಬೇಕು ಎಂದು ನಿಯೋಗ ಮನವಿಯಲ್ಲಿ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಚೀನಾ Spy ಮೋಹಕ್ಕೆ ಬಿದ್ದರಾ ಟೆಕ್ ದಿಗ್ಗಜ..? Nvidia CEO ಕುರ್ಚಿಗೆ ಕುತ್ತು, Jensen Huang ತಲೆದಂಡಕ್ಕೆ ಮುಹೂರ್ತ ಫಿಕ್ಸ್..?

E-ಖಾತಾ ಅಕ್ರಮ: GBA ಸಹಾಯಕ ಆಯುಕ್ತ ಮಾಗಿ ಸೇರಿ 31 ಜನರ ವಿರುದ್ಧ FIR ದಾಖಲು

ನಟಿ-ಮಾಡೆಲ್ ಸಮ್ರೀನ್ ಜತೆ ಸ್ಟಾರ್‌ ಕ್ರಿಕೆಟರ್‌ ಅರ್ಷ್‌ದೀಪ್ ಸಿಂಗ್ ಎಂಗೇಜ್‌ಮೆಂಟ್; ಫೋಟೋ ಹಂಚಿಕೊಂಡ ಗರ್ಲ್​ಫ್ರೆಂಡ್!

ಪ್ರೀತಿ, ನಷ್ಟ, ನೋವು, ತ್ಯಾಗದ ಅಪರೂಪದ ಕಥನ; ಪ್ರತಿಯೊಬ್ಬ ಭಾರತೀಯರ ಓದಲೇಬೇಕಾದ ಪುಸ್ತಕ': ಸೋನಿಯಾ ಗಾಂಧಿ ಆತ್ಮಕಥನಕ್ಕೆ ಕಾಂಗ್ರೆಸ್ ನಾಯಕರ ಮೆಚ್ಚುಗೆ..!

'ಕೈ' ಕಾರ್ಯಕರ್ತರಿಗೆ ಸರ್ಕಾರ ಭರ್ಜರಿ ಗಿಫ್ಟ್; 428 ಮಂದಿಗೆ ನಿಗಮ-ಮಂಡಳಿಗಳಲ್ಲಿ ಸ್ಥಾನ..!