ಚಿರತೆ ಸೆರೆ (ಸಂಗ್ರಹ ಚಿತ್ರ) 
ರಾಜ್ಯ

ಚಿತ್ರದುರ್ಗ ಗ್ರಾಮದಲ್ಲಿ ಹಲವು ದಿನಗಳಿಂದ ಆತಂಕ ಸೃಷ್ಟಿಸಿದ್ದ ಚಿರತೆ ಕೊನೆಗೂ ಸೆರೆ; ನಿಟ್ಟುಸಿರು ಬಿಟ್ಟ ಜನತೆ..!

ಕಳೆದ ಹಲವು ದಿನಗಳಿಂದ ಈ ಪ್ರದೇಶದಲ್ಲಿ ಚಿರತೆ ಹಾವಳಿ ಹೆಚ್ಚಾಗಿತ್ತು. ಸಾಕುಪ್ರಾಣಿಗಳ ಮೇಲೆ ದಾಳಿ ನಡೆಸುತ್ತಿದ್ದ ಚಿರತೆಯಿಂದಾಗಿ ಗ್ರಾಮಸ್ಥರು ಭಯದ ವಾತಾವರಣದಲ್ಲಿ ದಿನ ಕಳೆಯುವಂತಾಗಿತ್ತು.

ಚಿತ್ರದುರ್ಗ: ಜಿಲ್ಲೆಯ ಗ್ರಾಮವೊಂದರಲ್ಲಿ ಕಳೆದ ಹಲವು ದಿನಗಳಿಂದ ಆತಂಕ ಮೂಡಿಸಿದ್ದ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸೆರೆಹಿಡಿದಿದ್ದಾರೆ. ಇದರಿಂದ ಭಯಭೀತರಾಗಿದ್ದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಸಣ್ಣ ಕಿಟ್ಟದಲ್ ಗ್ರಾಮದ ಸುತ್ತಮುತ್ತ ಚಿರತೆ ಕಾಣಿಸಿಕೊಂಡಿದ್ದರಿಂದ ಸ್ಥಳೀಯರು ಆತಂಕಕ್ಕೊಳಗಾಗಿದ್ದರು. ಈ ಕುರಿತು ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ, ಚಿರತೆ ಸಂಚರಿಸುತ್ತಿದ್ದ ಸ್ಥಳದಲ್ಲಿ ಬೋನು ಇರಿಸಿ ಸೆರೆಹಿಡಿಯಲು ಕಾರ್ಯಾಚರಣೆ ಆರಂಭಿಸಲಾಗಿತ್ತು. ಅಂತಿಮವಾಗಿ ಚಿರತೆ ಬೋನಿಗೆ ಬಿದ್ದಿದ್ದು, ಈ ಮೂಲಕ ಅಧಿಕಾರಿಗಳು ಚಿರತೆ ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಕಳೆದ ಹಲವು ದಿನಗಳಿಂದ ಈ ಪ್ರದೇಶದಲ್ಲಿ ಚಿರತೆ ಹಾವಳಿ ಹೆಚ್ಚಾಗಿತ್ತು. ಸಾಕುಪ್ರಾಣಿಗಳ ಮೇಲೆ ದಾಳಿ ನಡೆಸುತ್ತಿದ್ದ ಚಿರತೆಯಿಂದಾಗಿ ಗ್ರಾಮಸ್ಥರು ಭಯದ ವಾತಾವರಣದಲ್ಲಿ ದಿನ ಕಳೆಯುವಂತಾಗಿತ್ತು.

ಇದೀಗ ಚಿರತೆ ಬೋನಿನಲ್ಲಿ ಸೆರೆಯಾದ ಸುದ್ದಿ ತಿಳಿಯುತ್ತಿದ್ದಂತೆ ಅದನ್ನು ನೋಡಲು ಗ್ರಾಮಸ್ಥರು ದೊಡ್ಡ ಸಂಖ್ಯೆಯಲ್ಲಿ ಸ್ಥಳಕ್ಕೆ ಧಾವಿಸಿದ್ದಾರೆ. ಹಲವರು ಚಿರತೆಯ ದೃಶ್ಯಗಳನ್ನು ತಮ್ಮ ಮೊಬೈಲ್‌ಗಳಲ್ಲಿ ಸೆರೆಹಿಡಿದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CRPF ಯೋಧರ ಮೇಲೆ ಗುಂಡಿನ ದಾಳಿ: ಹೊಣೆ ಹೊತ್ತ ಹೊಸ ಉಗ್ರ ಸಂಘಟನೆ; RSS, 'ಹಿಂದುತ್ವ ಆಡಳಿತ'ಕ್ಕೆ 'ವಿನಾಶಕಾರಿ' ಬೆದರಿಕೆ!

'₹7 ಕೋಟಿ ಕೊಡಿ, ಇಲ್ಲದಿದ್ದರೆ...': ಬಿಷ್ಣೋಯ್ ಗ್ಯಾಂಗ್‌ನಿಂದ ಅರವಿಂದ್ ಕೇಜ್ರಿವಾಲ್, ಅವರ ಮಗಳಿಗೆ ಕೊಲೆ ಬೆದರಿಕೆ!

'ಟಾಕ್ಸಿಕ್'​ ಹಸಿಬಿಸಿ ದೃಶ್ಯಗಳ ಟ್ರೋಲಿಂಗ್‌ ಬಗ್ಗೆ ಮೌನ ಮುರಿದ ಕಿಯಾರಾ; ಪತಿ ಸಿದ್ಧಾರ್ಥ್ ಪ್ರತಿಕ್ರಿಯೆ ಬಹಿರಂಗ!

ದೀಪಾವಳಿ ಹಬ್ಬಕ್ಕೆ ಕರೀನಾ ಕಪೂರ್ ಧರಿಸಿದ್ದ ಪೆಂಡೆಂಟ್‌ನಲ್ಲಿ ಕುರಾನ್‌ ಪದ್ಯ; ಬಾಲಿವುಡ್ ನಟಿಗೆ ಲೀಗಲ್ ನೋಟಿಸ್‌!

ನಟಿ-ಮಾಡೆಲ್ ಸಮ್ರೀನ್ ಜತೆ ಸ್ಟಾರ್‌ ಕ್ರಿಕೆಟರ್‌ ಅರ್ಷ್‌ದೀಪ್ ಸಿಂಗ್ ಎಂಗೇಜ್‌ಮೆಂಟ್; ಫೋಟೋ ಹಂಚಿಕೊಂಡ ಗರ್ಲ್​ಫ್ರೆಂಡ್!