ರಾಜ್ಯ

ನವೆಂಬರ್ 16ರಿಂದ 27ನೇ ಅಖಿಲ ಭಾರತ ಪೊಲೀಸ್ ಲಾನ್ ಟೆನಿಸ್ ಚಾಂಪಿಯನ್‌ಶಿಪ್‌: ಪ್ರಿಯಾಂಕ್ ಖರ್ಗೆ ಲಾಂಛನ ಬಿಡುಗಡೆ; Video

ಪೊಲೀಸ್ ಇಲಾಖೆಯಲ್ಲಿ ದೈಹಿಕ ಕ್ಷಮತೆ, ಮಾನಸಿಕ ಸದೃಢತೆ ಹಾಗೂ ಶಿಸ್ತು ಬಹಳ ಮುಖ್ಯ. ಪೊಲೀಸ್ ಸಿಬ್ಬಂದಿಗೆ ಈ ಮೂರೂ ಅಂಶಗಳು ಅತ್ಯಗತ್ಯ ಎಂದು ಹೇಳಿದರು.

ಬೆಂಗಳೂರು: ನವೆಂಬರ್ 16ರಿಂದ ಬೆಂಗಳೂರಿನಲ್ಲಿ ನಡೆಯಲಿರುವ 27ನೇ ಅಖಿಲ ಭಾರತ ಪೊಲೀಸ್ ಲಾನ್ ಟೆನಿಸ್ ಚಾಂಪಿಯನ್‌ಶಿಪ್‌ನ ಲಾಂಛನವನ್ನು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬಿಡುಗಡೆ ಮಾಡಿದರು.

ಪೊಲೀಸ್ ಮಹಾನಿರ್ದೇಶಕರು ಮತ್ತು ಮಹಾನಿರೀಕ್ಷಕರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ. ಸಲೀಂ, ಸಿಐಡಿ ಡಿಜಿಪಿ ಪ್ರಣಬ್ ಮೊಹಂತಿ, ಪೊಲೀಸ್ ವಸತಿ ನಿಗಮದ ಡಿಜಿಪಿ ಅರುಣ್ ಚಕ್ರವರ್ತಿ ಸೇರಿದಂತೆ ಹಿರಿಯ ಐಪಿಎಸ್ ಅಧಿಕಾರಿಗಳು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಚಾಂಪಿಯನ್‌ಶಿಪ್‌ನ ಅಧಿಕೃತ ಟಿ-ಶರ್ಟ್ ಮತ್ತು ಕ್ಯಾಪ್‌ಗಳನ್ನು ಕೂಡ ಬಿಡುಗಡೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಿಯಾಂಕ್ ಖರ್ಗೆ, ಪೊಲೀಸ್ ಇಲಾಖೆಯಲ್ಲಿ ದೈಹಿಕ ಕ್ಷಮತೆ, ಮಾನಸಿಕ ಸದೃಢತೆ ಹಾಗೂ ಶಿಸ್ತು ಬಹಳ ಮುಖ್ಯ. ಪೊಲೀಸ್ ಸಿಬ್ಬಂದಿಗೆ ಈ ಮೂರೂ ಅಂಶಗಳು ಅತ್ಯಗತ್ಯ ಎಂದು ಹೇಳಿದರು.

ತಾವು ಕೂಡ ಟೆನಿಸ್ ಪಂದ್ಯಾವಳಿಗಳಲ್ಲಿ ಭಾಗವಹಿಸುತ್ತಿದ್ದೆ ಎಂದ ಖರ್ಗೆ, ಕರ್ನಾಟಕ ರಾಜ್ಯ ಲಾನ್ ಟೆನಿಸ್ ಅಸೋಸಿಯೇಷನ್‌ (ಕೆಎಸ್‌ಎಲ್‌ಟಿಎ) ಜತೆಗಿನ ತಮ್ಮ ಒಡನಾಟವನ್ನು ಸ್ಮರಿಸಿದರು. ಪ್ರವಾಸೋದ್ಯಮ ಸಚಿವರಾಗಿದ್ದ ಸಂದರ್ಭದಲ್ಲಿ ಅಸೋಸಿಯೇಷನ್‌ ನ್ನು ಪ್ರತಿನಿಧಿಸಿದ್ದ ತಮಗೆ ಬಳಿಕ ಉಪಾಧ್ಯಕ್ಷ ಸ್ಥಾನ ನೀಡಲಾಗಿತ್ತು. ಪ್ರಸ್ತುತ ಅಸೋಸಿಯೇಷನ್‌ನ ಹಿರಿಯ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವುದಾಗಿ ತಿಳಿಸಿದರು.

ದೇಶದ ವಿವಿಧ ರಾಜ್ಯಗಳ ಪೊಲೀಸ್ ಸಿಬ್ಬಂದಿ ಈ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಲಿದ್ದಾರೆ. ಪಂದ್ಯಾವಳಿಯನ್ನು ಯಶಸ್ವಿಯಾಗಿ ಆಯೋಜಿಸಲು ಸಂಘಟಕರು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಚಾಂಪಿಯನ್‌ಶಿಪ್‌ನಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಆಗಮಿಸುವ ಇತರ ರಾಜ್ಯಗಳ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಅತ್ಯುತ್ತಮ ಆತಿಥ್ಯ ನೀಡುವಂತೆ ಪೊಲೀಸ್ ಇಲಾಖೆಗೆ ಸೂಚಿಸಿದರು.

ಇತರ ರಾಜ್ಯಗಳ ಪೊಲೀಸ್ ಅಧಿಕಾರಿಗಳಿಗೆ ಆತಿಥ್ಯ ನೀಡುವಲ್ಲಿ ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಅಗತ್ಯವಿರುವ ಎಲ್ಲ ವ್ಯವಸ್ಥೆಗಳನ್ನು ಮಾಡಲಾಗುವುದು. ಕೆಎಸ್‌ಎಲ್‌ಟಿಎ ಸಹಕಾರದೊಂದಿಗೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗುವುದು ಎಂದರು.

ಕ್ರೀಡಾಕೂಟಗಳನ್ನು ಪರಿಣಾಮಕಾರಿಯಾಗಿ ಆಯೋಜಿಸುವ ಸಾಮರ್ಥ್ಯವನ್ನು ಕರ್ನಾಟಕ ಪ್ರದರ್ಶಿಸಬೇಕು. ಇಂತಹ ಚಾಂಪಿಯನ್‌ಶಿಪ್‌ಗಳು ರಾಜ್ಯದಲ್ಲಿ ನಿಯಮಿತವಾಗಿ ನಡೆಯುವಂತಾಗಬೇಕು ಎಂದರು.

ಪೊಲೀಸ್ ಸಿಬ್ಬಂದಿಯಲ್ಲಿ ಕ್ರೀಡಾಸಕ್ತಿಯನ್ನು ಉತ್ತೇಜಿಸಲು ಇತರ ರಾಜ್ಯಗಳು ಕೈಗೊಂಡಿರುವ ಉಪಕ್ರಮಗಳನ್ನು ಅಧ್ಯಯನ ಮಾಡಿ, ನಮ್ಮ ಇಲಾಖೆಯಲ್ಲೂ ಅಳವಡಿಸಿಕೊಳ್ಳುವಂತೆ ಸಲಹೆ ನೀಡಿದರು.

ಅಖಿಲ ಭಾರತ ಮಟ್ಟದ ಕ್ರೀಡಾಕೂಟಗಳಲ್ಲಿ ಪೊಲೀಸ್ ಇಲಾಖೆ ತಂಡಗಳನ್ನು ಕಣಕ್ಕಿಳಿಸಬೇಕು. ಪೊಲೀಸ್ ಸಿಬ್ಬಂದಿಯಲ್ಲಿ ಕ್ರೀಡಾ ಚಟುವಟಿಕೆಗಳನ್ನು ಬಲಪಡಿಸಲು ಅಗತ್ಯವಿರುವ ಕ್ರಮಗಳ ಕುರಿತು ಪ್ರಸ್ತಾವನೆ ಸಲ್ಲಿಸುವಂತೆಯೂ ಅಧಿಕಾರಿಗಳಿಗೆ ಮನವಿ ಮಾಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಶ್ಮೀರ: ಕರ್ತವ್ಯದ ವೇಳೆ ನಾಪತ್ತೆಯಾಗಿದ್ದ ಇಬ್ಬರು ಪೊಲೀಸ್ ಅಧಿಕಾರಿಗಳು ಶವವಾಗಿ ಪತ್ತೆ

'ಟಾಕ್ಸಿಕ್'​ ಹಸಿಬಿಸಿ ದೃಶ್ಯಗಳ ಟ್ರೋಲಿಂಗ್‌ ಬಗ್ಗೆ ಮೌನ ಮುರಿದ ಕಿಯಾರಾ; ಪತಿ ಸಿದ್ಧಾರ್ಥ್ ಪ್ರತಿಕ್ರಿಯೆ ಬಹಿರಂಗ!

ದೀಪಾವಳಿ ಹಬ್ಬಕ್ಕೆ ಕರೀನಾ ಕಪೂರ್ ಧರಿಸಿದ್ದ ಪೆಂಡೆಂಟ್‌ನಲ್ಲಿ ಕುರಾನ್‌ ಪದ್ಯ; ಬಾಲಿವುಡ್ ನಟಿಗೆ ಲೀಗಲ್ ನೋಟಿಸ್‌!

ನಟಿ-ಮಾಡೆಲ್ ಸಮ್ರೀನ್ ಜತೆ ಸ್ಟಾರ್‌ ಕ್ರಿಕೆಟರ್‌ ಅರ್ಷ್‌ದೀಪ್ ಸಿಂಗ್ ಎಂಗೇಜ್‌ಮೆಂಟ್; ಫೋಟೋ ಹಂಚಿಕೊಂಡ ಗರ್ಲ್​ಫ್ರೆಂಡ್!

ಚೀನಾ Spy ಮೋಹಕ್ಕೆ ಬಿದ್ದರಾ ಟೆಕ್ ದಿಗ್ಗಜ..? Nvidia CEO ಕುರ್ಚಿಗೆ ಕುತ್ತು, Jensen Huang ತಲೆದಂಡಕ್ಕೆ ಮುಹೂರ್ತ ಫಿಕ್ಸ್..?