ಮಾಲಾಶ್ರೀ - ರಾಜಶೇಖರ್  
ರಾಜ್ಯ

ಬೆಂಗಳೂರು: ಮಕ್ಕಳಾಗಿಲ್ಲವೆಂದು ಕಿರುಕುಳ ನೀಡುತ್ತಿದ್ದ ಗಂಡನನ್ನು ಚುಚ್ಚಿ ಕೊಂದ ಪತ್ನಿ!

ಕೊಲೆಯಾದ ವ್ಯಕ್ತಿಯನ್ನು ರಾಜಶೇಖರ್ (44) ಎಂದು ಗುರುತಿಸಲಾಗಿದ್ದು, ಪತಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ಪತ್ನಿ ಮಾಲಾಶ್ರೀ(35)ಯನ್ನು ಬಂಧಿಸಲಾಗಿದೆ.

ಬೆಂಗಳೂರು: ಮಕ್ಕಳಾಗಿಲ್ಲವೆಂದು ಹೊಡೆದು ಬಡಿದು ಕಿರುಕುಳ ನೀಡುತ್ತಿದ್ದ ಪತಿಯನ್ನು ಪತ್ನಿಯೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಆಘಾತಕಾರಿ ಘಟನೆ ಬೆಂಗಳೂರಿನ ಕೆಂಪೇಗೌಡ ನಗರದ ಲಕ್ಷೀಪುರದಲ್ಲಿ ನಡೆದಿದೆ.

ಕೊಲೆಯಾದ ವ್ಯಕ್ತಿಯನ್ನು ರಾಜಶೇಖರ್ (44) ಎಂದು ಗುರುತಿಸಲಾಗಿದ್ದು, ಪತಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ಪತ್ನಿ ಮಾಲಾಶ್ರೀ(35)ಯನ್ನು ಬಂಧಿಸಲಾಗಿದೆ.

ಖಾಸಗಿ ಬ್ಯಾಂಕಿನ ಲೋನ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ರಾಜಶೇಖರ್, ಪ್ರತಿದಿನ ರಾತ್ರಿ ಮದ್ಯದ ನಶೆಯಲ್ಲಿ ಮನೆಗೆ ಬಂದು ಪತ್ನಿಯೊಂದಿಗೆ ಜಗಳವಾಡುತ್ತಿದ್ದನು. ದಂಪತಿಗೆ ಮಕ್ಕಳಾಗಿರಲಿಲ್ಲ ಎಂಬ ಕಾರಣಕ್ಕೆ ಈ ವಿಷಯ ಮುಂದಿಟ್ಟುಕೊಂಡು ಆಗಾಗ ಗಲಾಟೆ ನಡೆಯುತ್ತಿತ್ತು. ಬೆಳಗ್ಗೆ ತುಂಬಾ ಚೆನ್ನಾಗಿ ನೋಡಿಕೊಳ್ತಿದ್ದ ಪತಿ ರಾತ್ರಿಯಾದರೆ ಸಾಕು ಕುಡಿದು ಬಂದು ಪತ್ನಿಗೆ ನಿತ್ಯವೂ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ.

ನಿನ್ನೆ ರಾತ್ರಿಯೂ ಎಂದಿನಂತೆ ಕುಡಿದು ಬಂದ ರಾಜಶೇಖರ್ ಮಕ್ಕಳ ವಿಚಾರವಾಗಿ ಜಗಳ ತೆಗೆದಿದ್ದಾನೆ. ಆಕ್ರೋಶಗೊಂಡ ಮಾಲಾಶ್ರೀ, ಮನೆಯಲ್ಲಿದ್ದ ಅಡುಗೆ ಮನೆಯ ಚಾಕುವಿನಿಂದ ಪತಿಯ ಎದೆಗೆ ಚುಚ್ಚಿ ಭೀಕರವಾಗಿ ಹತ್ಯೆ ಮಾಡಿದ್ದಾಳೆ. ಗಂಭೀರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ರಾಜಶೇಖರ್ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಸಂಬಂಧ ಕೆಂಪೇಗೌಡ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಶ್ಮೀರ: ಕರ್ತವ್ಯದ ವೇಳೆ ನಾಪತ್ತೆಯಾಗಿದ್ದ ಇಬ್ಬರು ಪೊಲೀಸ್ ಅಧಿಕಾರಿಗಳು ಶವವಾಗಿ ಪತ್ತೆ

'ಟಾಕ್ಸಿಕ್'​ ಹಸಿಬಿಸಿ ದೃಶ್ಯಗಳ ಟ್ರೋಲಿಂಗ್‌ ಬಗ್ಗೆ ಮೌನ ಮುರಿದ ಕಿಯಾರಾ; ಪತಿ ಸಿದ್ಧಾರ್ಥ್ ಪ್ರತಿಕ್ರಿಯೆ ಬಹಿರಂಗ!

ದೀಪಾವಳಿ ಹಬ್ಬಕ್ಕೆ ಕರೀನಾ ಕಪೂರ್ ಧರಿಸಿದ್ದ ಪೆಂಡೆಂಟ್‌ನಲ್ಲಿ ಕುರಾನ್‌ ಪದ್ಯ; ಬಾಲಿವುಡ್ ನಟಿಗೆ ಲೀಗಲ್ ನೋಟಿಸ್‌!

ನಟಿ-ಮಾಡೆಲ್ ಸಮ್ರೀನ್ ಜತೆ ಸ್ಟಾರ್‌ ಕ್ರಿಕೆಟರ್‌ ಅರ್ಷ್‌ದೀಪ್ ಸಿಂಗ್ ಎಂಗೇಜ್‌ಮೆಂಟ್; ಫೋಟೋ ಹಂಚಿಕೊಂಡ ಗರ್ಲ್​ಫ್ರೆಂಡ್!

ಚೀನಾ Spy ಮೋಹಕ್ಕೆ ಬಿದ್ದರಾ ಟೆಕ್ ದಿಗ್ಗಜ..? Nvidia CEO ಕುರ್ಚಿಗೆ ಕುತ್ತು, Jensen Huang ತಲೆದಂಡಕ್ಕೆ ಮುಹೂರ್ತ ಫಿಕ್ಸ್..?