ಸಿಎಂ ಡಿ ಕೆ ಶಿವಕುಮಾರ್  
ರಾಜ್ಯ

ಜಿಎಸ್‌ಟಿ ಪಾಲು, ಬರ ಪರಿಹಾರ, ಕಬ್ಬು ಬೆಳೆಗಾರರ ಬೇಡಿಕೆ ವಿಷಯ ಪ್ರಸ್ತಾಪಿಸಿದ ಸಿಎಂ; Video

ಕಬ್ಬಿನ ಬೆಲೆ ಮತ್ತು ಎಥೆನಾಲ್ ಹಂಚಿಕೆ ಸೇರಿದಂತೆ ರೈತರ ಸಮಸ್ಯೆಗಳ ಕುರಿತು ಚರ್ಚಿಸಲು ಸರ್ವಪಕ್ಷ ನಿಯೋಗವನ್ನು ಪ್ರಧಾನಿ ಭೇಟಿಗೆ ಕರೆದೊಯ್ಯಲು ಸಿದ್ಧವಿರುವುದಾಗಿಯೂ ಅವರು ತಿಳಿಸಿದರು.

ರಾಜ್ಯದಾದ್ಯಂತ ತೀವ್ರ ಬರ ಪರಿಸ್ಥಿತಿ ಮತ್ತು ಬೆಳೆ ನಷ್ಟವನ್ನು ಎದುರಿಸಲು ಕರ್ನಾಟಕಕ್ಕೆ ಆರ್ಥಿಕ ನೆರವು ಒದಗಿಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದರು.

ಇಂದು ಬೆಂಗಳೂರಿನಲ್ಲಿ ಪಿಂಕ್ ಲೈನ್ ಮೆಟ್ರೊ ಉದ್ಘಾಟನೆ ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿ ಪ್ರಧಾನ ಮಂತ್ರಿಗಳ ಎದುರು ಸಿಎಂ ಡಿ ಕೆ ಶಿವಕುಮಾರ್ ಈ ಮನವಿ ಮಾಡಿದ್ದಾರೆ. ಕಳೆದ 70 ವರ್ಷಗಳಲ್ಲೇ ಕರ್ನಾಟಕ ಈ ಬಾರಿ ಎರಡನೇ ಅತಿ ಕಡಿಮೆ ಮಳೆಯನ್ನು ದಾಖಲಿಸಿದೆ. ರಾಜ್ಯದ 240 ತಾಲೂಕುಗಳ ಪೈಕಿ 246 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಸುಮಾರು 85 ಲಕ್ಷ ಹೆಕ್ಟೇರ್ ಪ್ರದೇಶದ ಬೆಳೆ ಹಾನಿಗೀಡಾಗಿದೆ. ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ನಿಧಿ (ಎನ್‌ಡಿಆರ್‌ಎಫ್) ಅಡಿಯಲ್ಲಿ ₹22,000 ಕೋಟಿ ನೆರವು ನೀಡುವಂತೆ ಮನವಿ ಮಾಡುತ್ತೇನೆ ಎಂದು ಹೇಳಿದರು.

ಕಬ್ಬಿನ ಬೆಲೆ ಮತ್ತು ಎಥೆನಾಲ್ ಹಂಚಿಕೆ ಸೇರಿದಂತೆ ರೈತರ ಸಮಸ್ಯೆಗಳ ಕುರಿತು ಚರ್ಚಿಸಲು ಸರ್ವಪಕ್ಷ ನಿಯೋಗವನ್ನು ಪ್ರಧಾನಿ ಭೇಟಿಗೆ ಕರೆದೊಯ್ಯಲು ಸಿದ್ಧವಿರುವುದಾಗಿಯೂ ಅವರು ತಿಳಿಸಿದರು.

ಕಬ್ಬು ಬೆಳೆಗಾರರು ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಹೇಳಿದ ಡಿ ಕೆ ಶಿವಕುಮಾರ್, 2019ರಿಂದ ಸಕ್ಕರೆಯ ಕನಿಷ್ಠ ಮಾರಾಟ ಬೆಲೆ (MSP) ಪ್ರತಿ ಕೆ.ಜಿ.ಗೆ 31 ರೂಪಾಯಿಗಳಲ್ಲಿ ಸ್ಥಿರವಾಗಿದೆ ಎಂದು ಗಮನ ಸೆಳೆದರು.

ಕರ್ನಾಟಕದ ಸಕ್ಕರೆ ವಲಯ ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವಂತೆ ಕೇಂದ್ರವನ್ನು ಒತ್ತಾಯಿಸಿದ ಅವರು, ಎಥೆನಾಲ್ ಹಂಚಿಕೆಯಲ್ಲಿ ಕರ್ನಾಟಕಕ್ಕೆ ನ್ಯಾಯಯುತ ಪಾಲು ನೀಡುವಂತೆಯೂ ಮನವಿ ಮಾಡಿದರು. ಕರ್ನಾಟಕದ ಕಬ್ಬು ಬೆಳೆಗಾರರು ಪ್ರತಿ ಟನ್ ಕಬ್ಬಿಗೆ 3,650 ರೂಪಾಯಿ ನ್ಯಾಯಯುತ ಮತ್ತು ಲಾಭದಾಯಕ ಬೆಲೆ (FRP) ಬದಲಿಗೆ ₹5,500 ನೀಡುವಂತೆ ಒತ್ತಾಯಿಸುತ್ತಿದ್ದು, ಅವರ ಸಮಸ್ಯೆಗಳನ್ನು ಪರಿಹರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಪ್ರವೇಶಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದರು.

ಕಬ್ಬಿನ ಬೆಲೆ ಮತ್ತು ಎಥೆನಾಲ್ ಹಂಚಿಕೆ ಸೇರಿದಂತೆ ರೈತರ ಸಮಸ್ಯೆಗಳ ಕುರಿತು ಚರ್ಚಿಸಲು ಸರ್ವಪಕ್ಷ ನಿಯೋಗವನ್ನು ಪ್ರಧಾನಿ ಭೇಟಿಗೆ ಕರೆದೊಯ್ಯಲು ಸಿದ್ಧವಿರುವುದಾಗಿಯೂ ಅವರು ತಿಳಿಸಿದರು.

ಮೆಟ್ರೋ ಯೋಜನೆಗಳಿಗೆ ಅನುಮೋದನೆ ತ್ವರಿತಗೊಳಿಸಲು, ವೆಚ್ಚ ಹಂಚಿಕೆಯಲ್ಲಿ ನ್ಯಾಯಯುತ ಪಾಲಿಗೆ ಸಿಎಂ ಮನವಿ

ಬೆಂಗಳೂರು ಮೆಟ್ರೋ ಯೋಜನೆಗಳ ವೆಚ್ಚ ಹಂಚಿಕೆ ವಿಚಾರವಾಗಿ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ರಾಜಕೀಯ ವಿವಾದ ನಡೆಯುತ್ತಿರುವ ಹಿನ್ನೆಲೆಯಲ್ಲಿ, ಮೆಟ್ರೋ ಯೋಜನೆಗಳ ವೆಚ್ಚವನ್ನು ನ್ಯಾಯಯುತವಾಗಿ ಹಂಚಿಕೊಳ್ಳುವಂತೆ ಹಾಗೂ ವಿಸ್ತರಣೆಗೆ ಬಾಕಿ ಇರುವ ಅನುಮೋದನೆಗಳನ್ನು ತ್ವರಿತವಾಗಿ ನೀಡುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದರು.

ಕೇಂದ್ರ ಮತ್ತು ರಾಜ್ಯದ ನಡುವೆ 50:50ರ ಅನುಪಾತದಲ್ಲಿ ವೆಚ್ಚ ಹಂಚಿಕೆ ಪ್ರಸ್ತಾಪವಿದ್ದರೂ, ಭೂಸ್ವಾಧೀನ ವೆಚ್ಚ, ರಾಜ್ಯ ತೆರಿಗೆಗಳು ಮತ್ತು ಸಾಲ ಮರುಪಾವತಿ ಸೇರಿದಂತೆ ಹೆಚ್ಚಿನ ಆರ್ಥಿಕ ಹೊರೆಯನ್ನು ಕರ್ನಾಟಕವೇ ಭರಿಸುತ್ತಿದೆ ಎಂದು ಹೇಳಿದರು.

ಯೋಜನೆಗಳ ಅನುಮೋದನೆಯಲ್ಲಿ ವಿಳಂಬವಾಗುತ್ತಿರುವುದನ್ನು ಪ್ರಸ್ತಾಪಿಸಿದ ಅವರು, ಪ್ರಸ್ತಾವಿತ ರೆಡ್ ಲೈನ್ ಯೋಜನೆ ಕಳೆದ ಎರಡು ವರ್ಷಗಳಿಂದ ಬಾಕಿ ಉಳಿದಿದೆ. ಇದರ ಅನುಮೋದನೆ ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ಕೇಂದ್ರವನ್ನು ಒತ್ತಾಯಿಸಿದರು. ಅಲ್ಲದೆ, ಎಲ್ಲ ನಗರಗಳಿಗೂ ಒಂದೇ ರಾಷ್ಟ್ರೀಯ ಸರಾಸರಿ ವೆಚ್ಚವನ್ನು ಅನ್ವಯಿಸುವ ಬದಲು, ಆಯಾ ನಗರದ ವಾಸ್ತವ ಪರಿಸ್ಥಿತಿಗೆ ಅನುಗುಣವಾಗಿ ಯೋಜನಾ ವೆಚ್ಚವನ್ನು ನಿರ್ಧರಿಸಬೇಕು ಎಂದು ಹೇಳಿದರು.

ಮೆಟ್ರೋ ಕಾರ್ಯಾಚರಣೆಯ ವೇಳೆ ಉಂಟಾಗುವ ನಗದು ನಷ್ಟ ಮತ್ತು ವಿದೇಶಿ ಸಾಲಗಳ ವಿನಿಮಯ ದರದ ಅಪಾಯಗಳನ್ನೂ ಕೇಂದ್ರ ಸರ್ಕಾರ ಹಂಚಿಕೊಳ್ಳುವ ಮೂಲಕ ಬೆಂಗಳೂರು ಮೆಟ್ರೋಗೆ ಆರ್ಥಿಕ ನೆರವು ನೀಡಬೇಕು ಎಂದು ಮನವಿ ಮಾಡಿದರು.

ದೇಶಾದ್ಯಂತ ಮೆಟ್ರೋ ಯೋಜನೆಗಳ ಅನುಮೋದನೆ ಪ್ರಕ್ರಿಯೆಯನ್ನು ಸರಳಗೊಳಿಸಲು ಮತ್ತು ಸ್ವದೇಶಿ ತಂತ್ರಜ್ಞಾನಕ್ಕೆ ಉತ್ತೇಜನ ನೀಡಲು ಪ್ರತ್ಯೇಕ ತಾಂತ್ರಿಕ ಸಂಸ್ಥೆಯೊಂದನ್ನು ಸ್ಥಾಪಿಸುವ ಪ್ರಸ್ತಾಪವನ್ನೂ ಮುಂದಿಟ್ಟರು. ಬೆಂಗಳೂರಿನ ಮೆಟ್ರೋ ಜಾಲವನ್ನು 500 ಕಿ.ಮೀ.ಗೆ ವಿಸ್ತರಿಸುವ ಗುರಿಯನ್ನು ಉಲ್ಲೇಖಿಸಿದ ಶಿವಕುಮಾರ್, ಕೇಂದ್ರದ ಬೆಂಬಲ ದೊರೆತರೆ ನಗರದ ಸಂಚಾರ ದಟ್ಟಣೆ ಸಮಸ್ಯೆಯ ಶೇ.50ರಷ್ಟನ್ನು ಪರಿಹರಿಸಲು ಈ ವಿಸ್ತರಣೆ ನೆರವಾಗಲಿದೆ ಎಂದರು.

ಕರ್ನಾಟಕದ ಅಭಿವೃದ್ಧಿಗೆ, ಬೆಂಗಳೂರು ಮೆಟ್ರೋ ವಿಸ್ತರಣೆಗೆ ಪ್ರಧಾನಿ ಮೋದಿ ಬೆಂಬಲ ಕೋರಿದ ಸಿಎಂ

ಕರ್ನಾಟಕದ ಅಭಿವೃದ್ಧಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಬೆಂಬಲವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೋರಿದರು. ರಾಷ್ಟ್ರೀಯ ಆರ್ಥಿಕತೆಗೆ ಬೆಂಗಳೂರಿನ ಕೊಡುಗೆ ಹಾಗೂ ತಂತ್ರಜ್ಞಾನ, ರಕ್ಷಣಾ ಮತ್ತು ಬಾಹ್ಯಾಕಾಶ ಕ್ಷೇತ್ರಗಳಲ್ಲಿ ನಗರದ ಹೆಚ್ಚುತ್ತಿರುವ ಪ್ರಾಮುಖ್ಯತೆಯನ್ನು ಅವರು ಪ್ರಸ್ತಾಪಿಸಿದರು.

ರಫ್ತು ಮತ್ತು ಪ್ರತಿಭಾವಂತ ಮಾನವ ಸಂಪನ್ಮೂಲದಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ. ಜಿಎಸ್‌ಟಿ ಸಂಗ್ರಹದಲ್ಲಿ ಎರಡನೇ ಸ್ಥಾನದಲ್ಲಿದ್ದು, ಕಳೆದ ಐದು ವರ್ಷಗಳಲ್ಲಿ ಅತಿ ಹೆಚ್ಚು ವಿದೇಶಿ ನೇರ ಹೂಡಿಕೆಯನ್ನು (ಎಫ್‌ಡಿಐ) ಆಕರ್ಷಿಸಿದೆ ಎಂದು ಹೇಳಿದರು.

"ನಮಗೆ ನಿಮ್ಮ ನೆರವು ಬೇಕು" ಎಂದು ಪ್ರಧಾನಿ ಅವರಿಗೆ ಮನವಿ ಮಾಡಿದ ಅವರು, ಭಾರತದ ಬೆಳವಣಿಗೆಗೆ ಕರ್ನಾಟಕ ನೀಡುತ್ತಿರುವ ಕೊಡುಗೆಯನ್ನು ಒತ್ತಿಹೇಳಿದರು. ಬೆಂಗಳೂರು ಮೆಟ್ರೋ ಜಾಲದ 103 ಕಿ.ಮೀ.ಗೂ ಅಧಿಕ ಕಾಮಗಾರಿ ಪೂರ್ಣಗೊಂಡಿದ್ದು, ಸಂಚಾರ ದಟ್ಟಣೆ ಕಡಿಮೆ ಮಾಡಲು ಅದನ್ನು ಕನಿಷ್ಠ 500 ಕಿ.ಮೀ.ಗೆ ವಿಸ್ತರಿಸುವ ಯೋಜನೆ ಇದೆ ಎಂದು ತಿಳಿಸಿದರು.

ಕರ್ನಾಟಕಕ್ಕೆ ಹೊಸತನದ ಸಾಧನೆಗಳ ಪರಂಪರೆ ಇದೆ: ಸಿಎಂ ಡಿ.ಕೆ. ಶಿವಕುಮಾರ್

ಕರ್ನಾಟಕವು ಹಲವು ಕ್ಷೇತ್ರಗಳಲ್ಲಿ ಪ್ರವರ್ತಕ ಸಾಧನೆಗಳನ್ನು ಮಾಡಿದ ಪರಂಪರೆ ಹೊಂದಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಭಾರತದ ಅಭಿವೃದ್ಧಿಯಲ್ಲಿ ಬೆಂಗಳೂರು ನಿರಂತರವಾಗಿ ಮುಂಚೂಣಿಯಲ್ಲಿರುವ ನಗರವಾಗಿದೆ ಎಂದು ಬಣ್ಣಿಸಿದರು.

1902ರಲ್ಲಿ ಕರ್ನಾಟಕದ ಶಿವನಸಮುದ್ರದಲ್ಲಿ ಏಷ್ಯಾದ ಮೊದಲ ಜಲವಿದ್ಯುತ್ ಉತ್ಪಾದನಾ ಕೇಂದ್ರ ಸ್ಥಾಪನೆಯಾಗಿತ್ತು. ಇದರೊಂದಿಗೆ ವಿದ್ಯುತ್ ಸೌಲಭ್ಯ ಪಡೆದ ಭಾರತದ ಮೊದಲ ನಗರಗಳಲ್ಲಿ ಬೆಂಗಳೂರು ಒಂದಾಗಿತ್ತು ಎಂದು ಸ್ಮರಿಸಿದರು.

ಎಚ್‌ಎಎಲ್‌ನಲ್ಲಿ ಭಾರತದ ಮೊದಲ ವಿಮಾನ ತಯಾರಿಕಾ ಘಟಕ ಸ್ಥಾಪನೆಯಾಗಿದ್ದು, ಟೆಕ್ಸಾಸ್ ಇನ್‌ಸ್ಟ್ರುಮೆಂಟ್ಸ್‌ನ ಮೊದಲ ಜಾಗತಿಕ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರ ಹಾಗೂ ದೇಶದ ಮೊದಲ ಐಫೋನ್ ಜೋಡಣೆ ಘಟಕವೂ ಬೆಂಗಳೂರಿನಲ್ಲೇ ಸ್ಥಾಪನೆಯಾಗಿವೆ ಎಂದು ಉಲ್ಲೇಖಿಸಿದರು. ಈ ಮೈಲಿಗಲ್ಲುಗಳು ಕರ್ನಾಟಕದ ಬಲಿಷ್ಠ ಕೈಗಾರಿಕಾ ಮತ್ತು ತಾಂತ್ರಿಕ ಅಡಿಪಾಯವನ್ನು ಪ್ರತಿಬಿಂಬಿಸುತ್ತವೆ ಎಂದರು.

ಕರ್ನಾಟಕಕ್ಕೆ ನ್ಯಾಯಯುತ ಪಾಲು ನೀಡುವಂತೆ ಪ್ರಧಾನಿ ಮೋದಿಗೆ ಮನವಿ ಸಲ್ಲಿಸಿದ ಶಿವಕುಮಾರ್

ವಿವಿಧ ಕ್ಷೇತ್ರಗಳಲ್ಲಿ ಕರ್ನಾಟಕಕ್ಕೆ ನ್ಯಾಯಯುತ ಪಾಲು ನೀಡುವಂತೆ ಕೋರಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಪ್ರಧಾನಿಯವರ ಬೆಂಬಲಕ್ಕೆ ಧನ್ಯವಾದ ಸಲ್ಲಿಸಿದ ಶಿವಕುಮಾರ್, ಸಮಾಜದ ಎಲ್ಲ ವರ್ಗಗಳಿಗೂ ಸಮಾನ ಪರಿಗಣನೆ ದೊರೆಯಬೇಕೆಂಬುದು ರಾಜ್ಯದ ನಿರೀಕ್ಷೆಯಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

PM Modi visit to Bengaluru | ನಮ್ಮ ಮೆಟ್ರೊ ಪಿಂಕ್ ಲೈನ್ ಪ್ರಧಾನಿ ಮೋದಿ ಉದ್ಘಾಟನೆ; ನ.14ರಿಂದ ಕಾರ್ಯಾಚರಣೆ

'ಮೋದಿಯಿಂದ ನನ್ನ ಫೋನ್ ಕದ್ದಾಲಿಕೆ': ಪ್ರಧಾನಿ ವಿರುದ್ಧ ರಾಹುಲ್ ಗಾಂಧಿ ಗಂಭೀರ ಆರೋಪ

4th ODI: 26 ವರ್ಷಗಳಲ್ಲೇ ಏಕದಿನ ಕ್ರಿಕೆಟ್‌ನಲ್ಲಿ ಅತ್ಯಂತ ಹೀನಾಯ ಸೋಲು, ಆದರೂ 2 ಕಳಪೆ ದಾಖಲೆಗಳಿಂದ ಭಾರತ ಪಾರು!

4th ODI: ಮ್ಯಾಟ್ ಹೆನ್ರಿ ಮಾರಕ ಬೌಲಿಂಗ್, 89 ರನ್ ಗಳಿಗೇ ಭಾರತ ಆಲೌಟ್, 244 ರನ್ ಅಂತರದ ಹೀನಾಯ ಸೋಲು!

4th ODI: 16 ವರ್ಷಗಳ ಬಳಿಕ ಮತ್ತದೇ ಆಘಾತ, ಒಂದೇ ಪಂದ್ಯದಲ್ಲಿ ಶೂನ್ಯಕ್ಕೆ ಔಟಾದ ರೋಹಿತ್ ಶರ್ಮಾ- ವಿರಾಟ್ ಕೊಹ್ಲಿ!