ಬಸನಗೌಡ ಪಾಟೀಲ್ ಯತ್ನಾಳ್  
ರಾಜ್ಯ

ಬಸನಗೌಡ ಪಾಟೀಲ್ ಯತ್ನಾಳ್​ಗೆ ಹಿನ್ನಡೆ: ಮಾನನಷ್ಟ ಮೊಕದ್ದಮೆ ವಿಚಾರಣೆ ರದ್ದುಗೊಳಿಸಲು ನಿರಾಕರಿಸಿದ ಹೈಕೋರ್ಟ್!

ತಮ್ಮ ವಿರುದ್ಧದ ಮಾನನಷ್ಟ ಮೊಕದ್ದಮೆ ಪ್ರಕ್ರಿಯೆಯನ್ನು ರದ್ದು ಕೋರಿ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನಂತ್ ರಾಮನಾಥ್ ಹೆಗಡೆ ಅವರಿದ್ದ ಏಕಸದಸ್ಯ ಪೀಠ ಅರ್ಜಿ ವಜಾಗೊಳಿಸಿ ಆದೇಶಿಸಿದೆ

ಬೆಂಗಳೂರು: ಶಾಸಕ ಶಿವಾನಂದ ಎಸ್.ಪಾಟೀಲ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಹೈಕೋರ್ಟ್​ನಲ್ಲಿ ತೀವ್ರ ಹಿನ್ನಡೆಯಾಗಿದೆ.

ತಮ್ಮ ವಿರುದ್ಧದ ಮಾನನಷ್ಟ ಮೊಕದ್ದಮೆ ಪ್ರಕ್ರಿಯೆಯನ್ನು ರದ್ದು ಕೋರಿ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನಂತ್ ರಾಮನಾಥ್ ಹೆಗಡೆ ಅವರಿದ್ದ ಏಕಸದಸ್ಯ ಪೀಠ ಅರ್ಜಿ ವಜಾಗೊಳಿಸಿ ಆದೇಶಿಸಿದೆ.

ಮಾನಹಾನಿ ಪ್ರಕರಣದಲ್ಲಿ ನ್ಯಾಯಾಲಯ ಸಂಜ್ಞೆಯತೆ ತೆಗೆದುಕೊಳ್ಳುವ ಹಂತದಲ್ಲಿ, 'ದೂರುದಾರರ ಗೌರವಕ್ಕೆ ಧಕ್ಕೆಯಾಗಿದೆ' ಎಂದು ಮೂರನೇ ವ್ಯಕ್ತಿಯೊಬ್ಬರು ನ್ಯಾಯಾಲಯದ ಮುಂದೆ ಸಾಕ್ಷ್ಯ ಹೇಳಲೇಬೇಕು ಎಂಬ ನಿಯಮ ಕಡ್ಡಾಯವಲ್ಲ.

ಆರೋಪಿಯ ಹೇಳಿಕೆಯು ಮೇಲ್ನೋಟಕ್ಕೆ ದೂರುದಾರರ ನೈತಿಕತೆ, ಚಾರಿತ್ರ್ಯ ಮತ್ತು ಗೌರವಕ್ಕೆ ಕುಂದು ತರುವಂತಿದ್ದರೆ ದೂರುದಾರರು ಮತ್ತು ಇತರ ಸಾಕ್ಷಿಗಳ ಹೇಳಿಕೆಗಳನ್ನು ಆಧರಿಸಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ವಿಚಾರಣೆಗೆ ಮುಂದಾಗಬಹುದು ಎಂದು ಪೀಠ ಹೇಳಿತು.

ದೂರುದಾರರು ಮತ್ತು ಇಬ್ಬರು ಸಾಕ್ಷಿಗಳ ಹೇಳಿಕೆಗಳ ಆಧಾರದ ಮೇಲೆ ವಿಚಾರಣಾ ನ್ಯಾಯಾಲಯವು ಈ ಪ್ರಕರಣವನ್ನು ಪರಿಗಣನೆಗೆ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಯತ್ನಾಳ್ ಅವರ ಪರ ವಕೀಲರು ವಾದಿಸಿದರು. ಏಕೆಂದರೆ, ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 499ರ 'ವಿವರಣೆ-4' (Explanation-4) ಅಥವಾ ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 356ರ ಅಗತ್ಯ ಷರತ್ತುಗಳು ಇಲ್ಲಿ ಪೂರೈಸಲ್ಪಟ್ಟಿಲ್ಲ ಎಂದು ಅವರು ಪ್ರತಿಪಾದಿಸಿದರು.

ಅರ್ಜಿದಾರ ಯತ್ನಾಳ್ ಅವರ ಹೇಳಿಕೆಗಳು ಮೇಲ್ನೋಟಕ್ಕೆ ದೂರುದಾರ ಶಿವಾನಂದ ಪಾಟೀಲ್ ಅವರ ಚಾರಿತ್ರ್ಯ ಮತ್ತು ಘನತೆಗೆ ಧಕ್ಕೆ ತರುವಂತಿವೆ. ಅಲ್ಲದೆ, ವಿಚಾರಣಾ ನ್ಯಾಯಾಲಯವು ಇಬ್ಬರು ಸಾಕ್ಷಿಗಳ ಹೇಳಿಕೆಗಳನ್ನು ಆಧಾರದಲ್ಲಿ ಕಾಗ್ನಿಜೆನ್ಸ್‌ ತೆಗೆದುಕೊಂಡಿದ್ದು, ಈ ಕ್ರಮ ದೋಷಪೂರಿತ ಎಂದು ಹೇಳಲಾಗದು.

ಅಲ್ಲದೆ, ಈ ಹೇಳಿಕೆಗಳಿಂದ ಸಾರ್ವಜನಿಕರ ದೃಷ್ಟಿಯಲ್ಲಿ ನಿಜವಾಗಿಯೂ ಗೌರವ ಕಡಿಮೆಯಾಗಿದೆಯೇ ಅಥವಾ ಇಲ್ಲವೇ ಎಂಬುದನ್ನು ವಿಚಾರಣಾ ನ್ಯಾಯಾಲಯದಲ್ಲಿ ಸಾಕ್ಷ್ಯಾಧಾರಗಳ ಮೂಲಕ ನಿರ್ಧರಿಸಬೇಕಾಗುತ್ತದೆ ಎಂದು ಪೀಠ ಸ್ಪಷ್ಟಪಡಿಸಿದೆ.

2025ರ ಏಪ್ರಿಲ್ 30ರಂದು ಖಾಸಗಿ ಯೂಟ್ಯೂಬ್ ನಲ್ಲಿ ಮಾತನಾಡಿದ್ದ ಯತ್ನಾಳ್, ತಮ್ಮ ವಿರುದ್ಧ ತೀವ್ರ ಅವಹೇಳನಕಾರಿ ಮತ್ತು ಮಾನಹಾನಿಕರ ಹೇಳಿಕೆಗಳನ್ನು ನೀಡಿದ ಆರೋಪವಿತ್ತು. ಈ ಸಂಬಂಧ ಶಿವಾನಂದ ಪಾಟೀಲ್ ಅವರು 2025ರ ಜುಲೈ 18ರಂದು ಬೆಂಗಳೂರಿನ 42ನೇ ಹೆಚ್ಚುವರಿ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಆರ್ಥಿಕ ಬೆಳವಣಿಗೆಯ ಪ್ರಮುಖ ಚಾಲನಾ ಶಕ್ತಿ ನವ ಮಧ್ಯಮ ವರ್ಗ: ಪ್ರಧಾನಿ ಮೋದಿ; Video

ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್: ಯಾರಿಗೆ ಕ್ಲೀನ್ ಚಿಟ್? ಕುಮಾರಸ್ವಾಮಿ ಪ್ರಶ್ನೆ

ವಿಧಾನಸೌಧವನ್ನೇ ಮಾರಿಬಿಡಿ: ಸರ್ಕಾರಿ ಆಸ್ತಿಯನ್ನು ರಕ್ಷಿಸಲು ವಿಫಲರಾದ ಅಧಿಕಾರಿಗಳ ವಿರುದ್ದ ಸಾರಿಗೆ ಸಚಿವ ಗರಂ

ಆರೋಗ್ಯ ಮತ್ತು ಸೌಖ್ಯಕ್ಕೆ ಅಭ್ಯಂಗ (ಕುಶಲವೇ ಕ್ಷೇಮವೇ)

ನಿಗೂಢ ವಿದೇಶಿ ಪ್ರಜೆ: ಸೋನಿಯಾ ಗಾಂಧಿ ವಿರುದ್ಧ ವಿವಾದಾತ್ಮಕ ಪೋಸ್ಟ್‌; ಕಂಗನಾ ವಿರುದ್ಧ ಬಿತ್ತು FIR!