ಹಿರಿಯ ಐಪಿಎಸ್ ಅಧಿಕಾರಿ ಎನ್. ವಿಷ್ಣುವರ್ಧನ 
ರಾಜ್ಯ

ಸೀಮಾ ಲಾಟ್ಕರ್ ಎತ್ತಂಗಡಿ: ಮೈಸೂರು ನಗರ ಪೊಲೀಸ್ ಆಯುಕ್ತರಾಗಿ ಎನ್ ವಿಷ್ಣುವರ್ಧನ ನೇಮಕ!

ಕಳೆದ ಮೂರು ವರ್ಷದಿಂದ ಮೈಸೂರು ನಗರ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದ ಸೀಮಾ ಲಾಟ್ಕರ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಸದ್ಯಕ್ಕೆ ಅವರಿಗೆ ಯಾವ ಹುದ್ದೆ ಎಂಬುದನ್ನು ತಿಳಿಸಿಲ್ಲ.

ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಎನ್. ವಿಷ್ಣುವರ್ಧನ ಅವರನ್ನು ಮೈಸೂರು ನಗರದ ನೂತನ ಪೊಲೀಸ್ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

2012ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿರುವ ವಿಷ್ಣುವರ್ಧನ ಅವರು, ಈ ಹಿಂದೆ ಪೊಲೀಸ್ ಉಪ ಮಹಾನಿರೀಕ್ಷಕರಾಗಿ (ಡಿಐಜಿ) ಹಾಗೂ ಮೈಸೂರಿನ ಕರ್ನಾಟಕ ಪೊಲೀಸ್ ಅಕಾಡೆಮಿಯ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು ಎಂದು ಮಾಹಿತಿ ನೀಡಿದ್ದಾರೆ.

ರಾಜ್ಯ ಸರ್ಕಾರ ನವೆಂಬರ್ 13 ರಂದು ಹೊರಡಿಸಿದ ಅಧಿಕೃತ ಅಧಿಸೂಚನೆ ಪ್ರಕಾರ, ಪೊಲೀಸ್ ಉಪ ಮಹಾನಿರೀಕ್ಷಕರು ಹಾಗೂ ಮೈಸೂರಿನ ಕರ್ನಾಟಕ ಪೊಲೀಸ್ ಅಕಾಡೆಮಿ ನಿರ್ದೇಶಕರಾಗಿರುವ ಎನ್. ವಿಷ್ಣುವರ್ಧನ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ. ಮುಂದಿನ ಆದೇಶದವರೆಗೆ ಅವರು ಮೈಸೂರು ನಗರ ಪೊಲೀಸ್ ಆಯುಕ್ತರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ತಿಳಿಸಲಾಗಿದೆ.

ಕಳೆದ ಮೂರು ವರ್ಷದಿಂದ ಮೈಸೂರು ನಗರ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದ ಸೀಮಾ ಲಾಟ್ಕರ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಸದ್ಯಕ್ಕೆ ಅವರಿಗೆ ಯಾವ ಹುದ್ದೆ ಎಂಬುದನ್ನು ತಿಳಿಸಿಲ್ಲ.

ಐಪಿಎಸ್ (ವೇತನ) ನಿಯಮಗಳು, 2016ರ ನಿಯಮ 12ರ ಅಡಿಯಲ್ಲಿ ಮೈಸೂರು ನಗರ ಪೊಲೀಸ್ ಆಯುಕ್ತರ ಹುದ್ದೆಯನ್ನು ಪೊಲೀಸ್ ಮಹಾನಿರ್ದೇಶಕರ ತನಿಖಾ ವಿಭಾಗದ (ಸಿಐಡಿ) ಡಿಐಜಿಪಿ ಕೇಡರ್ ಹುದ್ದೆಗೆ ಸಮಾನ ಸ್ಥಾನಮಾನ ಮತ್ತು ಜವಾಬ್ದಾರಿ ಹೊಂದಿರುವ ಹುದ್ದೆ ಎಂದು ಸರ್ಕಾರ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಂಗ್ರೆಸ್ vs ಕಾಂಗ್ರೆಸ್: ಪ್ರಧಾನಿ ಮೋದಿ ಮುಂದೆ ಮೇಕೆದಾಟು ಪ್ರಸ್ತಾಪಿಸಿದ CM ಡಿಕೆಶಿ; ಖಂಡಿಸಿದ ಮಾಣಿಕ್ಯಂ ಟ್ಯಾಗೋರ್!

IND vs PAK, U19 Asia Cup: ಪಾಕ್ ಬೌಲರ್‌ಗಳ ಬೆವರಿಳಿಸಿದ ಸೆಹ್ವಾಗ್ ಪುತ್ರ; ಆರ್ಯವೀರ್ ಆಟಕ್ಕೆ ಫ್ಯಾನ್ಸ್ ಫಿದಾ! Video

ರಾಜಕೀಯ ಬದ್ಧವೈರಿ ನಿತೀಶ್ ಕುಮಾರ್ ಮನೆಯಲ್ಲಿ 'ಖೀರ್' ಸವಿಯಲು ಲಾಲು ಪುತ್ರಿ ರೋಹಿಣಿ ನಿರ್ಧಾರ!

'ಅತ್ಯಂತ ಅಮಾನವೀಯ, 70 ವರ್ಷ ಬದುಕಬೇಕಿದ್ದ ಆನೆ 30ನೇ ವಯಸ್ಸಿಗೇ ಸಾವು'; ದೇಗುಲದ ಆನೆಗಳ ಸಂಕಷ್ಟದ ಬಗ್ಗೆ ನಟಿ ರಮ್ಯಾ ಕಿಡಿ, Video

'ನಮಗೆ ಪಾಠ ಮಾಡುವ ಮೊದಲು ನಿಮ್ಮ ಪೂರ್ವಗ್ರಹ ಸರಿಪಡಿಸಿಕೊಳ್ಳಿ, ಆಂತರಿಕ ವಿಚಾರದಲ್ಲಿ ಮೂಗು ತೂರಿಸಬೇಡಿ': ಅಮೆರಿಕಕ್ಕೆ ಭಾರತ ಖಡಕ್ ತಿರುಗೇಟು!