ಕಿದ್ವಾಯಿ ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ ಡಿಕೆ ಶಿವಕುಮಾರ್ 
ರಾಜ್ಯ

ಕ್ಯಾನ್ಸರ್ ರೋಗಿಗಳಿಗೆ ಗುಡ್‌ನ್ಯೂಸ್: ಕಿದ್ವಾಯಿಯಲ್ಲಿ 200 ಹಾಸಿಗೆಗಳ ಹೊಸ ಘಟಕ, 5 ಜಿಲ್ಲೆಗಳಲ್ಲಿ ಆಸ್ಪತ್ರೆ: ಸಿಎಂ ಡಿಕೆಶಿ ಘೋಷಣೆ

ಮಕ್ಕಳ ದಿನಾಚರಣೆ ಅಂಗವಾಗಿ ಶನಿವಾರ ಕಿದ್ವಾಯಿ ಆಸ್ಪತ್ರೆಗೆ ಭೇಟಿ ನೀಡಿದ ಅವರು, ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳೊಂದಿಗೆ ಮಾತನಾಡಿ ಧೈರ್ಯ ತುಂಬಿದರು. ಆಸ್ಪತ್ರೆಯ ಕಪೂರ್ ವಾರ್ಡ್ ಹಾಗೂ ಸಾಮಾನ್ಯ ವಾರ್ಡ್‌ಗಳಿಗೆ..

ಬೆಂಗಳೂರು: ರಾಜ್ಯದಲ್ಲಿ ಕ್ಯಾನ್ಸರ್ ಚಿಕಿತ್ಸಾ ಸೌಲಭ್ಯವನ್ನು ಮತ್ತಷ್ಟು ವಿಸ್ತರಿಸಲು ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ ಹೆಚ್ಚುವರಿಯಾಗಿ 200 ಹಾಸಿಗೆಗಳ ಘಟಕ ನಿರ್ಮಿಸಲಾಗುವುದು ಎಂದು ಘೋಷಿಸಲಾಗಿದೆ.

ಮಕ್ಕಳ ದಿನಾಚರಣೆ ಅಂಗವಾಗಿ ಶನಿವಾರ ಕಿದ್ವಾಯಿ ಆಸ್ಪತ್ರೆಗೆ ಭೇಟಿ ನೀಡಿದ ಅವರು, ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳೊಂದಿಗೆ ಮಾತನಾಡಿ ಧೈರ್ಯ ತುಂಬಿದರು.

ಆಸ್ಪತ್ರೆಯ ಕಪೂರ್ ವಾರ್ಡ್ ಹಾಗೂ ಸಾಮಾನ್ಯ ವಾರ್ಡ್‌ಗಳಿಗೆ ತೆರಳಿ ಮಕ್ಕಳ ಆರೋಗ್ಯ, ಚಿಕಿತ್ಸೆ ಮತ್ತು ಊಟದ ವ್ಯವಸ್ಥೆ ಬಗ್ಗೆ ಮಾಹಿತಿ ಪಡೆದರು. ಮಕ್ಕಳಿಗೆ ಚಾಕೊಲೇಟ್ ಹಾಗೂ ಚಿತ್ರ ಬಿಡಿಸುವ ಪುಸ್ತಕಗಳನ್ನು ವಿತರಿಸಿದರು.

ಮಕ್ಕಳ ಊರು, ಭವಿಷ್ಯದ ಆಸೆ ಮತ್ತು ಗುರಿಗಳ ಬಗ್ಗೆ ವಿಚಾರಿಸಿದ ಸಿಎಂ, ಯಾವುದೇ ಕಾರಣಕ್ಕೂ ಭರವಸೆ ಕಳೆದುಕೊಳ್ಳಬಾರದು. ನೀವು ಗುಣಮುಖರಾಗುತ್ತೀರಿ ಎಂದು ಮಕ್ಕಳಿಗೆ ಆತ್ಮಸ್ಥೈರ್ಯ ತುಂಬಿದರು.

5 ಜಿಲ್ಲೆಗಳಲ್ಲಿ ಆಸ್ಪತ್ರೆ

ಇದೇ ಸಂದರ್ಭದಲ್ಲಿ ಮೈಸೂರು, ಬಳ್ಳಾರಿ, ರಾಯಚೂರು, ತುಮಕೂರು ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಕ್ಯಾನ್ಸರ್ ಚಿಕಿತ್ಸಾ ಸೌಲಭ್ಯ ಕಲ್ಪಿಸಲು ಯೋಜನೆ ರೂಪಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಚಿಕ್ಕ ಮಕ್ಕಳಲ್ಲಿ ಕ್ಯಾನ್ಸರ್ ಹೆಚ್ಚಳದ ಬಗ್ಗೆ ಕಳವಳ

ಅತಿ ಚಿಕ್ಕ ವಯಸ್ಸಿನ ಮಕ್ಕಳಲ್ಲೂ ಕ್ಯಾನ್ಸರ್ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆ. ಈ ಕಾಯಿಲೆಯನ್ನು ತಡೆಗಟ್ಟಲು ಮತ್ತು ನಿಯಂತ್ರಿಸಲು ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು. ಮಕ್ಕಳೊಂದಿಗೆ ಬಂದಿದ್ದ ತಾಯಂದಿರೊಂದಿಗೂ ಅವರು ಮಾತನಾಡಿದರು.

ಆಸ್ಪತ್ರೆಯಲ್ಲಿ ಅಗತ್ಯ ಸೌಲಭ್ಯಗಳು ಸಿಗುತ್ತಿವೆಯೇ, ಚಿಕಿತ್ಸೆಗಾಗಿ ಯಾರಾದರೂ ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆಯೇ ಎಂಬುದನ್ನು ವಿಚಾರಿಸಿದರು. ಚಿಕಿತ್ಸೆ ಪಡೆಯುತ್ತಿರುವ ಮಕ್ಕಳ ಜತೆ ಉಳಿದುಕೊಳ್ಳುವ ಪೋಷಕರ ಅನುಕೂಲಕ್ಕಾಗಿ ಮೂರು ಎಕರೆ ಜಮೀನು ಮತ್ತು ಪ್ರತ್ಯೇಕ ವಾರ್ಡ್‌ಗಳನ್ನು ಒದಗಿಸುವಂತೆ ತಾಯಂದಿರು ಮನವಿ ಮಾಡಿದರು. ಈ ಬೇಡಿಕೆಯನ್ನು ಪರಿಶೀಲಿಸುವುದಾಗಿ ಸಿಎಂ ಭರವಸೆ ನೀಡಿದರು.

ಪ್ರತಿದಿನ 1,000 ರೋಗಿಗಳಿಗೆ ಚಿಕಿತ್ಸೆ

ಕಿದ್ವಾಯಿ ಆಸ್ಪತ್ರೆಗೆ ಪ್ರತಿವರ್ಷ ಸುಮಾರು 3.5 ಲಕ್ಷ ರೋಗಿಗಳು ಭೇಟಿ ನೀಡುತ್ತಿದ್ದಾರೆ. ಪ್ರತಿದಿನ ಸರಾಸರಿ 1,000 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಪಶ್ಚಿಮ ಬಂಗಾಳ, ತಮಿಳುನಾಡು ಸೇರಿದಂತೆ ಹೊರರಾಜ್ಯಗಳಿಂದಲೂ ರೋಗಿಗಳು ಇಲ್ಲಿಗೆ ಬರುತ್ತಿದ್ದಾರೆ. ಆಸ್ಪತ್ರೆಯಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಐದು ಜಿಲ್ಲೆಗಳಲ್ಲಿ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ

ಕ್ಯಾನ್ಸರ್ ಚಿಕಿತ್ಸೆಗಾಗಿ ದೂರದ ಜಿಲ್ಲೆಗಳಿಂದ ಬೆಂಗಳೂರಿಗೆ ಬರಬೇಕಾದ ಅನಿವಾರ್ಯತೆಯನ್ನು ತಪ್ಪಿಸಲು ಸರ್ಕಾರ ಮುಂದಾಗಿದೆ. ಮೈಸೂರು, ಬಳ್ಳಾರಿ, ರಾಯಚೂರು, ತುಮಕೂರು ಮತ್ತು ಕಲಬುರಗಿಯಲ್ಲಿ ಕ್ಯಾನ್ಸರ್ ಚಿಕಿತ್ಸಾ ಸೌಲಭ್ಯಗಳನ್ನು ಆರಂಭಿಸಲು ಯೋಜನೆ ರೂಪಿಸಲಾಗುತ್ತಿದೆ. ಇದರಿಂದ ಆಯಾ ಜಿಲ್ಲೆಗಳ ರೋಗಿಗಳಿಗೆ ಸ್ಥಳೀಯವಾಗಿಯೇ ಚಿಕಿತ್ಸೆ ಪಡೆಯಲು ಅನುಕೂಲವಾಗಲಿದೆ ಎಂದರು.

ಕಿದ್ವಾಯಿ ಆಸ್ಪತ್ರೆಯಲ್ಲಿ ಹೆಚ್ಚುವರಿಯಾಗಿ 200 ಹಾಸಿಗೆಗಳ ಘಟಕ ನಿರ್ಮಿಸುವ ಪ್ರಸ್ತಾವನೆ ಕುರಿತು ಸಚಿವ ಸಂಪುಟದ ಮಟ್ಟದಲ್ಲೂ ಚರ್ಚಿಸಲಾಗಿದೆ. ಆಸ್ಪತ್ರೆಯ ಅಭಿವೃದ್ಧಿಗೆ ಹಣಕಾಸು ನೆರವು ಹಾಗೂ ಕಟ್ಟಡಗಳನ್ನು ಒದಗಿಸಿರುವ ದಾನಿಗಳ ಕೊಡುಗೆಯನ್ನೂ ಮುಖ್ಯಮಂತ್ರಿ ಇದೇ ವೇಳೆ ಸ್ಮರಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

5th ODI: 5ನೇ ಏಕದಿನ ಪಂದ್ಯ: ಟಾಸ್ ಗೆದ್ದ ನ್ಯೂಜಿಲೆಂಡ್ ಬೌಲಿಂಗ್ ಆಯ್ಕೆ, ಭಾರತ ತಂಡದಲ್ಲಿ 2 ಬದಲಾವಣೆ, ಯಶ್ ಠಾಕೂರ್ ಪದಾರ್ಪಣೆ!

ಕೊನೆಯ ಎಸೆತದವರೆಗೂ ಹೋರಾಡಿ ಗೆದ್ದ ಯುವಪಡೆ: ಟೀಮ್ ಇಂಡಿಯಾ ಭವಿಷ್ಯದ ಬಗ್ಗೆ ಬಿಸಿಸಿಐ ಮೆಚ್ಚುಗೆ, VVS ಲಕ್ಷ್ಮಣ್ ತರಬೇತಿಗೂ ಶ್ಲಾಘನೆ!

'ವಿದೇಶಿಗ ಭಾರತದ ಪ್ರಜಾಪ್ರಭುತ್ವವನ್ನು ಹೀಯಾಳಿಸುವಾಗ ರಾಹುಲ್ ಗಾಂಧಿ ನಗ್ತಾರೆ'; ವಿದೇಶಿ ಶಕ್ತಿಗಳ ತಾಳಕ್ಕೆ ಅವರು ಕುಣಿಯೋದು: ಬಿಜೆಪಿ

ಉತ್ತರ ಪ್ರದೇಶ ಚುನಾವಣೆ: 181 ಸ್ಥಾನಗಳಿಗೆ ಕಾಂಗ್ರೆಸ್ ಬೇಡಿಕೆ: ಎಸ್ ಪಿ ನಾಯಕ ಅಖಿಲೇಶ್ ಯಾದವ್ ಹೇಳಿದ್ದೇನು?

U19 ಏಷ್ಯಾಕಪ್ ಫೈನಲ್: ಕೊನೇ ಎಸೆತದಲ್ಲಿ ಬೌಂಡರಿ; ಪಾಕ್ ವಿರುದ್ಧ ಭಾರತಕ್ಕೆ 1 ವಿಕೆಟ್‌ ರೋಚಕ ಜಯ!