ಮೃತ ಯುವಕರು 
ರಾಜ್ಯ

ತುಮಕೂರು: ಬೈಕಿಗೆ KSRTC ಬಸ್ ಡಿಕ್ಕಿ; ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸಾವು!

ಮೃತ ಯುವಕರನ್ನು ಗೆದ್ದಲೆಹಳ್ಳಿ ನಿವಾಸಿ ದಿನೇಶ್ ಅವರ ಪುತ್ರ ಸಂಜು(23) ಹಾಗೂ ಬೈರನಾಯಕನಹಳ್ಳಿ ಗ್ರಾಮದ ಆನಂದ್ ಕುಮಾರ್ ಅವರ ಪುತ್ರ ಹರ್ಷ(23) ಎಂದು ಗುರುತಿಸಲಾಗಿದೆ.

ತುಮಕೂರು: ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಮಾದಿಹಳ್ಳಿ ಬಳಿ ಬೈಕಿಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ.

ಮೃತ ಯುವಕರನ್ನು ಗೆದ್ದಲೆಹಳ್ಳಿ ನಿವಾಸಿ ದಿನೇಶ್ ಅವರ ಪುತ್ರ ಸಂಜು(23) ಹಾಗೂ ಬೈರನಾಯಕನಹಳ್ಳಿ ಗ್ರಾಮದ ಆನಂದ್ ಕುಮಾರ್ ಅವರ ಪುತ್ರ ಹರ್ಷ(23) ಎಂದು ಗುರುತಿಸಲಾಗಿದೆ.

ಇಂದು ಸಂಬಂಧಿಕರ ಮದುವೆ ಮುಗಿಸಿ ಬೈಕ್‌ನಲ್ಲಿ ವಾಪಸ್ ಬರುತ್ತಿದ್ದ ಯುವಕರು ತಿಪಟೂರು-ಅರಸೀಕೆರೆ ರಸ್ತೆಯ ಮಾದಿಹಳ್ಳಿ ಬಳಿ ಯೂ-ಟರ್ನ್ ತೆಗೆದುಕೊಳ್ಳುವಾಗ ಅರಸೀಕೆರೆ ಕಡೆಯಿಂದ ತಿಪಟೂರಿಗೆ ಬರುತ್ತಿದ್ದ ಬಸ್ ಡಿಕ್ಕಿ ಹೊಡೆದಿದೆ.

ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಈ ಸಂಬಂಧ ತಿಪಟೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಹವಾಮಾನ: ನವೆಂಬರ್ 17ರ ವೇಳೆಗೆ ಬಂಗಾಳ ಕೊಲ್ಲಿಯಲ್ಲಿ ತೀವ್ರ ಚಂಡಮಾರುತ ಸಾಧ್ಯತೆ; ಭಾರಿ ಮಳೆಯ ಎಚ್ಚರಿಕೆ

ಟಿಟಿಡಿಯ ಶ್ರೀ ವೆಂಕಟೇಶ್ವರ ಅನ್ನಪ್ರಸಾದ ಟ್ರಸ್ಟ್‌ಗೆ ₹10 ಕೋಟಿ ದೇಣಿಗೆ ನೀಡಿದ ಭಕ್ತ!

ಮಿಯಾಮಿ ವಿಮಾನ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ; ಟ್ಯಾಕ್ಸಿವೇಯಲ್ಲಿ ಬೋಯಿಂಗ್ ವಿಮಾನಗಳ ಡಿಕ್ಕಿ, ಇಬ್ಬರಿಗೆ ಗಾಯ!

ಜೌಲ್ಜಿಬಿ ಮೇಳದಲ್ಲಿ ಹೈಡ್ರಾಮಾ: ವೇದಿಕೆಯಲ್ಲೇ ಮೈಕ್ ಎಸೆದ ಕಾಂಗ್ರೆಸ್ ಶಾಸಕ, ಉತ್ತರಾಖಂಡ ಸಿಎಂಗೆ ಬಹಿರಂಗ ಸವಾಲು!

ಗಾಜಾ: ಅಕ್ಟೋಬರ್ 7ರ ದಾಳಿಯ ರೂವಾರಿ, ಹಮಾಸ್ ಕಮಾಂಡರ್ ಸಮೀರ್ ಅಬು ಯೂನಿಸ್ ಇಸ್ರೇಲ್ ದಾಳಿಯಲ್ಲಿ ಫಿನಿಶ್!