ವಿಜಯಲಕ್ಷ್ಮೀ-ಧನ್ವೀರ್ 
ರಾಜ್ಯ

ವಿಜಯಲಕ್ಷ್ಮಿ ಜತೆ ಜಟಾಪಟಿ: ನಟ ಧನ್ವೀರ್​​ಗೆ ಬಿಗ್ ರಿಲೀಫ್; ಮೂರು ಎಫ್‌ಐಆರ್‌ಗಳ ತನಿಖೆಗೆ ಹೈಕೋರ್ಟ್ ತಡೆ!

ವಿಜಯಲಕ್ಷ್ಮಿ ಅವರನ್ನು ನಿಂದಿಸಿದ ಆರೋಪದ ಮೇಲೆ ನಟ ಧನ್ವೀರ್‌ ವಿರುದ್ಧ ವಿರುದ್ಧ ದಾಖಲಾಗಿರುವ ಮೂರು ಪ್ರತ್ಯೇಕ ಎಫ್‌ಐಆರ್‌ಗಳ ತನಿಖೆಗೆ ಕರ್ನಾಟಕ ಹೈಕೋರ್ಟ್ ಸೋಮವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ವಿರುದ್ಧ ಶೀತಲ ಸಮರ ಸಾರಿದ್ದ ನಟ ಧನ್ವೀರ್ ಗೌಡಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.

ವಿಜಯಲಕ್ಷ್ಮಿ ಅವರನ್ನು ನಿಂದಿಸಿದ ಆರೋಪದ ಮೇಲೆ ನಟ ಧನ್ವೀರ್‌ ವಿರುದ್ಧ ವಿರುದ್ಧ ದಾಖಲಾಗಿರುವ ಮೂರು ಪ್ರತ್ಯೇಕ ಎಫ್‌ಐಆರ್‌ಗಳ ತನಿಖೆಗೆ ಕರ್ನಾಟಕ ಹೈಕೋರ್ಟ್ ಸೋಮವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ.

ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರಿ ನಟ ಧನ್ವೀರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನಂತ್ ರಮಾನಾಥ್ ಹೆಗ್ಡೆ ಅವರಿದ್ದ ಏಕಸದಸ್ಯ ಪೀಠ, ಎಫ್‌ಐಆರ್‌ಗಳ ತನಿಖೆಗೆ ಮಧ್ಯಂತರ ತಡೆ ನೀಡಿದ್ದಾರೆ.

ವಿಚಾರಣೆ ವೇಳೆ ಧನ್ವೀರ್ ಪರ ಹಿರಿಯ ವಕೀಲ ಫಣೀಂದ್ರ ವಾದ ಮಂಡಿಸಿ, ದೂರಿನಲ್ಲಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಆದರೆ, ನಿರ್ದಿಷ್ಟವಾಗಿ ಯಾವ ಮಹಿಳೆಗೆ ನಿಂದನೆ ಮಾಡಲಾಗಿದೆ ಎಂಬುದನ್ನು ಎಲ್ಲಿಯೂ ಉಲ್ಲೇಖಿಸಿಲ್ಲ. ಅಲ್ಲದೆ, ಕೇವಲ ಅವಾಚ್ಯ ಶಬ್ದಗಳ ಬಳಕೆಯಿಂದ ಸಾರ್ವಜನಿಕ ಶಾಂತಿಗೆ ಯಾವುದೇ ಧಕ್ಕೆಯಾಗುವುದಿಲ್ಲ. ಹೀಗಾಗಿ ಪ್ರಕರಣದ ತನಿಖೆಗೆ ತಡೆ ನೀಡಬೇಕು ಎಂದು ಮನವಿ ಮಾಡಿದರು. ಇದಕ್ಕೆ ಸರ್ಕಾರದ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿ ತಡೆಯಾಜ್ಞೆ ನೀಡದಂತೆ ವಾದಿಸಿದರು.

ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠವು, ರಾಜಾಜಿನಗರ ಹಾಗೂ ಬಸವೇಶ್ವರನಗರ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಎಫ್‌ಐಆರ್‌ಗಳ ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ಇದರ ಜೊತೆಗೆ, ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಈ ಹಿಂದೆ ನೀಡಲಾಗಿದ್ದ ತಡೆಯಾಜ್ಞೆಯನ್ನು ಸಹ ನ್ಯಾಯಾಲಯ ಮುಂದುವರಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ನಿಂದನೆ ಮಾಡಲಾಗಿದೆ ಎನ್ನಲಾದ ಆಡಿಯೋದ ಸಂಪೂರ್ಣ ವಿವರಣೆಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಸೂಚಿಸಿದ ಹೈಕೋರ್ಟ್, ಮುಂದಿನ ವಿಚಾರಣೆಯನ್ನು ಶನಿವಾರಕ್ಕೆ ಮುಂದೂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'SIRಗೆ ಆದೇಶ ನೀಡಿದ್ದು ಯಾರು?': ಚುನಾವಣಾ ಆಯೋಗದ ವಿರುದ್ಧ 48 ಪ್ರಶ್ನೆಗಳ ಅಸ್ತ್ರ; ಸುಪ್ರೀಂ ಅನುಮತಿ ಕೋರಿದ INDIA!

ನಿಮ್ಮ ವಿಚ್ಛೇದನ ಯಾವಾಗ?: ಶ್ರುತಿ ಹಾಸನ್ ನೇರ ಪ್ರಶ್ನೆಗೆ ಆವಕ್ಕಾದ ಹಿರಿಯ ನಟಿ ಸುಹಾಸಿನಿ, Video!

ಹೊಸ ಟ್ರಾಫಿಕ್ ರೂಲ್ಸ್: ರಾಜ್ಯದಲ್ಲಿ ಹಾಫ್ ಹೆಲ್ಮೆಟ್ ಬ್ಯಾನ್; ಫುಟ್‌ಪಾತ್‌ ಮೇಲೆ ಬೈಕ್ ಓಡಿಸಿದರೆ ₹5,000 ದಂಡ, Ola, Uberಗೂ ಕಡಿವಾಣ!

ಬೆಂಗಳೂರು: ನದಿಗೆ ಹಾರಿ ಮಹಿಳೆ ಆತ್ಮಹತ್ಯೆ; ಪೊಲೀಸರ ನಿರ್ಲಕ್ಷ್ಯಕ್ಕೆ ಶವ ಹೊರತೆಗೆಯಲು ಬಂದ ವ್ಯಕ್ತಿಯೂ ಬಲಿ!

ಹಿರಿಯೂರು ಉಪಚುನಾವಣೆ: ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಮೈತ್ರಿಯಲ್ಲಿ ಭಿನ್ನಾಭಿಪ್ರಾಯವಿಲ್ಲ; ಒಮ್ಮತದ ಅಭ್ಯರ್ಥಿ ಆಯ್ಕೆ: ಎಚ್.ಡಿ. ಕುಮಾರಸ್ವಾಮಿ