ಪೊಲೀಸ್ ಸಿಬ್ಬಂದಿ 
ರಾಜ್ಯ

ಬೆಂಗಳೂರು: ನದಿಗೆ ಹಾರಿ ಮಹಿಳೆ ಆತ್ಮಹತ್ಯೆ; ಪೊಲೀಸರ ನಿರ್ಲಕ್ಷ್ಯಕ್ಕೆ ಶವ ಹೊರತೆಗೆಯಲು ಬಂದ ವ್ಯಕ್ತಿಯೂ ಬಲಿ!

ಸರ್ಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಕಲ್ಕುಂಟೆ ಅಗ್ರಹಾರ ಗ್ರಾಮದ ನಿವಾಸಿ ಕವಿತಾ ಶ್ರೀನಿವಾಸ್(35) ಎಂಬ ಮಹಿಳೆ ಮುಗಳೂರಿನ ದಕ್ಷಿಣ ಪಿನಾಕಿನಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಂಗಳೂರು: ನದಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಮೃತದೇಹ ಹೊರತೆಗೆಯಲು ಬಂದ ವ್ಯಕ್ತಿಯೂ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘೋರ ದುರಂತವೊಂದು ಸೋಮವಾರ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನಲ್ಲಿ ನಡೆದಿದೆ.

ಸರ್ಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಕಲ್ಕುಂಟೆ ಅಗ್ರಹಾರ ಗ್ರಾಮದ ನಿವಾಸಿ ಕವಿತಾ ಶ್ರೀನಿವಾಸ್(35) ಎಂಬ ಮಹಿಳೆ ಮುಗಳೂರಿನ ದಕ್ಷಿಣ ಪಿನಾಕಿನಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕವಿತಾ ಅವರ ಮೃತದೇಹ ಹೊರ ತೆಗೆಯಲು ಬಂದ ಮಾಲೂರಿನ ಮಂಜುನಾಥ್ ಅವರು ಸಹ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಕವಿತಾ ಅವರು ಸುಮಾರು 14 ವರ್ಷಗಳ ಹಿಂದೆ ವಿವಾಹವಾಗಿದ್ದು, ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಇತ್ತೀಚೆಗೆ ಪತಿ ಮತ್ತು ಪತ್ನಿ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿತ್ತು. ಇದರಿಂದ ಮನನೊಂದ ಕವಿತಾ ದಕ್ಷಿಣ ಪಿನಾಕಿನಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನದಿಯಲ್ಲಿ ಮಹಿಳೆಯ ಮೃತದೇಹ ತೇಲುತ್ತಿರುವುದನ್ನು ಗಮನಿಸಿದ ಸ್ಥಳೀಯರು ಸರ್ಜಾಪುರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಮೃತದೇಹವಮ್ಮು ಹೊರತೆಗೆಯಲು ಮಾಲೂರಿನ ಮಂಜುನಾಥ್​ ಎಂಬುವವರನ್ನು ಪೊಲೀಸರು ಕರೆಸಿದ್ದರು. ಆದರೆ ಮೃತದೇಹವನ್ನು ಹೊರತೆಗೆಯುವ ಸಂದರ್ಭದಲ್ಲಿ ಮಂಜುನಾಥ್​ ಕೂಡ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಪೊಲೀಸರ ನಿರ್ಲಕ್ಷ್ಯ ಆರೋಪ

ಇನ್ನು ಸರ್ಜಾಪುರ ಪೊಲೀಸರು ಮೃತದೇಹ ಹೊರತೆಗೆಯುವ ಕಾರ್ಯಚರಣೆ ವೇಳೆ ಯಾವುದೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿಲ್ಲ. ಅವರ ನಿರ್ಲಕ್ಷ್ಯಕ್ಕೆ ರಕ್ಷಣೆಗೆ ಬಂದ ಮಂಜುನಾಥ್ ಸಹ ಮೃತಪಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಇನ್ನು ಅಗ್ನಿಶಾಮಕ ತಂಡ ದಕ್ಷಿಣ ಪಿನಾಕಿನಿ ನದಿಯಲ್ಲಿ ಕವಿತಾ ಹಾಗೂ ಮಂಜುನಾಥ್ ಇಬ್ಬರ ಮೃತದೇಹಗಳಿಗಾಗಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'SIRಗೆ ಆದೇಶ ನೀಡಿದ್ದು ಯಾರು?': ಚುನಾವಣಾ ಆಯೋಗದ ವಿರುದ್ಧ 48 ಪ್ರಶ್ನೆಗಳ ಅಸ್ತ್ರ; ಸುಪ್ರೀಂ ಅನುಮತಿ ಕೋರಿದ INDIA!

ಹೊಸ ಟ್ರಾಫಿಕ್ ರೂಲ್ಸ್: ರಾಜ್ಯದಲ್ಲಿ ಹಾಫ್ ಹೆಲ್ಮೆಟ್ ಬ್ಯಾನ್; ಫುಟ್‌ಪಾತ್‌ ಮೇಲೆ ಬೈಕ್ ಓಡಿಸಿದರೆ ₹5,000 ದಂಡ, Ola, Uberಗೂ ಕಡಿವಾಣ!

ಹಿರಿಯೂರು ಉಪಚುನಾವಣೆ: ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಮೈತ್ರಿಯಲ್ಲಿ ಭಿನ್ನಾಭಿಪ್ರಾಯವಿಲ್ಲ; ಒಮ್ಮತದ ಅಭ್ಯರ್ಥಿ ಆಯ್ಕೆ: ಎಚ್.ಡಿ. ಕುಮಾರಸ್ವಾಮಿ

ಆರ್ಥಿಕ ಸಹಾಯಕ್ಕಾಗಿ ಮನವಿ ವಿಡಿಯೋ ವೈರಲ್: 'ಜೋಶ್' ನಟ ಶರದ್ ಕಪೂರ್ ಭೇಟಿ ಮಾಡಿದ ಸೋನು ಸೂದ್! Video

'ನಮ್ಮ ಮಕ್ಕಳನ್ನೇ ಸೋಲಿಸೋಕೆ ಆಗಿಲ್ಲ, ಇನ್ನು?': U19 ಏಷ್ಯಾಕಪ್ ಗೆಲುವಿನ ಬೆನ್ನಲ್ಲೇ ಪಾಕ್ ಕಾಲೆಳೆದ ಓವೈಸಿ, Video