ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ 
ರಾಜ್ಯ

ಸಿನಿಮಾ ನಟರನ್ನು ನೋಡಿ ಯುವ ಜನತೆ ಹಾಳಾಗಬೇಡಿ: ಯು.ಟಿ ಖಾದರ್ ಕಿವಿಮಾತು

ಯು.ಟಿ. ಖಾದರ್, ಟಿವಿ ಮತ್ತು ಸಿನಿಮಾಗಳಲ್ಲಿ ನಟರು ಕೇವಲ ಸಿಗರೇಟ್ ಹಿಡಿದುಕೊಂಡು ಪೋಸ್ ಕೊಡುತ್ತಾರೆ. ಅದನ್ನು ನೋಡಿ ಯುವಜನತೆ ಹಾಳಾಗಬೇಡಿ. ನಟರು ತೆರೆಯ ಮೇಲೆ ಪೋಸ್ ಕೊಟ್ಟರು ಅಂತ ನೀವು ಸಿಗರೇಟ್ ಸೇದಲು ಶುರು ಮಾಡಿದರೆ, ಮುಂದೆ ನೀವು ಆಸ್ಪತ್ರೆಯ ಐಸಿಯು (ICU) ಸೇರಬೇಕಾಗುತ್ತದೆ.

ಬೆಂಗಳೂರು: ಸಿನಿಮಾಗಳಲ್ಲಿ ನಟರು ಸಿಗರೇಟ್ ಹಿಡಿದು ಪೋಸ್ ಕೊಡುವುದನ್ನು ನೋಡಿ ಯುವಜನತೆ ಪ್ರೇರಣೆಗೊಂಡು ದಾರಿ ತಪ್ಪಬಾರದು ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಆಯೋಜಿಸಲಾಗಿದ್ದ ತಂಬಾಕು ಮುಕ್ತ ಯುವ ಅಭಿಯಾನ 4.0 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕಾರ್ಯಕ್ರಮದಲ್ಲಿ ಯುವಜನತೆಗೆ ಕಿವಿಮಾತು ಹೇಳಿದ ಯು.ಟಿ. ಖಾದರ್, ಟಿವಿ ಮತ್ತು ಸಿನಿಮಾಗಳಲ್ಲಿ ನಟರು ಕೇವಲ ಸಿಗರೇಟ್ ಹಿಡಿದುಕೊಂಡು ಪೋಸ್ ಕೊಡುತ್ತಾರೆ.

ಅದನ್ನು ನೋಡಿ ಯುವಜನತೆ ಹಾಳಾಗಬೇಡಿ. ನಟರು ತೆರೆಯ ಮೇಲೆ ಪೋಸ್ ಕೊಟ್ಟರು ಅಂತ ನೀವು ಸಿಗರೇಟ್ ಸೇದಲು ಶುರು ಮಾಡಿದರೆ, ಮುಂದೆ ನೀವು ಆಸ್ಪತ್ರೆಯ ಐಸಿಯು (ICU) ಸೇರಬೇಕಾಗುತ್ತದೆ. ಅಂತಹ ದುಶ್ಚಟಗಳ ವಿಚಾರದಲ್ಲಿ ಸಿನಿಮಾ ನಟರನ್ನು ಎಂದಿಗೂ ಮಾದರಿಯಾಗಿ ತೆಗೆದುಕೊಳ್ಳಬೇಡಿ” ಎಂದು ಎಚ್ಚರಿಸಿದರು.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ ಅವರು, ನಾನು ಯಾವುದೇ ನಿರ್ದಿಷ್ಟ ಸಿನಿಮಾ ನಟರ ಬಗ್ಗೆ ಮಾತನಾಡಿಲ್ಲ. ಇಲ್ಲಿನ ಯಾವ ನಟರೂ ಆ ರೀತಿ ಮಾಡುತ್ತಿಲ್ಲ, ಕಾಣಿಸುತ್ತಲೂ ಇಲ್ಲ. ಆದರೆ, ಹಿಂದಿ ಅಥವಾ ಇಂಗ್ಲಿಷ್ ಸಿನಿಮಾಗಳು, ನಾಟಕ ಹಾಗೂ ಇತರ ಮಾಧ್ಯಮಗಳಲ್ಲಿ ಕೆಲವೊಮ್ಮೆ ಸೆಲೆಬ್ರಿಟಿಗಳು ತಂಬಾಕು ಬಳಸುವ ದೃಶ್ಯಗಳಲ್ಲಿ ಕಾಣಿಸಿಕೊಳ್ಳುತ್ತಾರೆ.

ಯುವಜನತೆ ಅದನ್ನೇ ಸ್ಫೂರ್ತಿಯಾಗಿ ತೆಗೆದುಕೊಂಡು, ಅದು ಅಭ್ಯಾಸವಾಗಿ ಆಸ್ಪತ್ರೆ ಸೇರಿದರೆ ಅವರ ಕುಟುಂಬಕ್ಕೆ ಯಾರು ದಿಕ್ಕಾಗುತ್ತಾರೆ? ಸೆಲೆಬ್ರಿಟಿಗಳ ಪ್ರಭಾವದಿಂದ ಯುವಕರು ಹಾಳಾಗಬಾರದು ಎಂಬುದಷ್ಟೇ ನನ್ನ ಕಾಳಜಿ ಎಂದು ಸ್ಪಷ್ಟಪಡಿಸಿದರು.

ಐಟಿ-ಬಿಟಿ ಕಂಪನಿಗಳಲ್ಲಿ ಸ್ಮೋಕಿಂಗ್ ಝೋನ್‌ಗಳಿಗೆ ಕಡಿವಾಣ ಹಾಕುವ ಕುರಿತು ಪ್ರತಿಕ್ರಿಯಿಸಿದ ಅವರು, ಎಷ್ಟೇ ಜಾಗೃತಿ ಮೂಡಿಸಿದರೂ ಕೆಲವರು ಹಳೆಯ ಅಭ್ಯಾಸದಿಂದ ಧೂಮಪಾನ ಮಾಡುತ್ತಿರುತ್ತಾರೆ. ಲಕ್ಷಾಂತರ ಉದ್ಯೋಗಿಗಳು ಇರುವ ಕಡೆ ಸಂಪೂರ್ಣ ನಿಯಂತ್ರಣ ಕಷ್ಟವಾಗುತ್ತದೆ ಎಂಬ ಕಾರಣಕ್ಕೆ ಪ್ರತ್ಯೇಕ ಝೋನ್ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಆದರೂ ಸ್ಮೋಕಿಂಗ್ ಝೋನ್‌ಗಳಿಗೆ ಕಡಿವಾಣ ಹಾಕುವ ಬಗ್ಗೆ ಸಲಹೆ ಬಂದಿದ್ದು, ಈ ಕುರಿತು ಪರಿಶೀಲಿಸಲಾಗುವುದು ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿಶ್ವಕ್ಕೆ ಶಾಂತಿ-ಸ್ಥಿರತೆ ಅಗತ್ಯ, ಪೈಪೋಟಿ ಬದಿಗಿಟ್ಟು ಸಹಕಾರದ ಹಾದಿಯಲ್ಲಿ ಸಾಗೋಣ: India-ASEAN ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ

ಜಾಗತಿಕ ತಂತ್ರಜ್ಞಾನ ಹಬ್ ಆಗಲಿದೆ ಕರ್ನಾಟಕ; 'AI, ರೋಬೋಟಿಕ್ಸ್, ಚಿಪ್ ಉತ್ಪಾದನೆಗೆ ಆದ್ಯತೆ': ಸಿಎಂ DK ಶಿವಕುಮಾರ್

ಐಫೋನ್‌ಗಳಿಗೆ ಮಾಲ್ ವೇರ್ ದಾಳಿ, ಕ್ರಿಪ್ಟೋ ಕಳ್ಳತನಕ್ಕೆ ಯತ್ನ: ವಿಶ್ವದ ಅತಿ ಹೆಚ್ಚು ಭೇಟಿ ನೀಡುವ ವೆಬ್‌ಸೈಟ್‌ಗಳು ಗುರಿ!

UN-OIC ಕರಡು ನಿರ್ಣಯ: ಉದ್ದೇಶಪೂರ್ವಕವಾಗಿ ಭಾರತವನ್ನು ದೂರವಿಟ್ಟ ಟರ್ಕಿ ವಿರುದ್ಧ ಭಾರತ ತೀವ್ರ ಕಿಡಿ, ನಿರ್ಣಯದ ವಿರುದ್ಧ ಮತದಾನ

ಪಹಲ್ಗಾಮ್ ದಾಳಿಗೆ ನಂಟು ಆರೋಪ ಹೊರಿಸಿ ಬೆದರಿಕೆ; ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ US ಮೂಲದ ನಿವೃತ್ತ ವಕೀಲರಿಗೆ 4 ಕೋಟಿ ರೂಪಾಯಿ ವಂಚನೆ