ಸಂಗ್ರಹ ಚಿತ್ರ 
ರಾಜ್ಯ

CET ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸುವಂತಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು

2025ರ ಏಪ್ರಿಲ್ 17ರಿಂದ 19ರವರೆಗೆ ನಡೆದ ಸಿಇಟಿ ಪರೀಕ್ಷೆಯಲ್ಲಿ ಪವಿತ್ರ ಜನಿವಾರ ಧರಿಸಿದ್ದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ಅರ್ಜಿ ಸಲ್ಲಿಸಲಾಗಿತ್ತು.

ಬೆಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆ (CET) ಬರೆಯುವ ವಿದ್ಯಾರ್ಥಿಗಳ ಜನಿವಾರವನ್ನು (ಪವಿತ್ರ ದಾರ) ತೆಗೆಸದಂತೆ ನೋಡಿಕೊಳ್ಳಬೇಕು ಮತ್ತು ರಾಜ್ಯಾದ್ಯಂತ ಪರೀಕ್ಷೆಯನ್ನು ಏಕರೂಪವಾಗಿ, ಸುಗಮವಾಗಿ ನಡೆಸಬೇಕು ಎಂದು ಕರ್ನಾಟಕ ಹೈಕೋರ್ಟ್, ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (KEA) ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ.

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನು ಶಿವರಾಮನ್ ಮತ್ತು ನ್ಯಾಯಮೂರ್ತಿ ಕೆ.ಎಸ್. ಭರತ್ ಕುಮಾರ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ.

ಪರೀಕ್ಷೆಗಳ ಸಂದರ್ಭದಲ್ಲಿ ಅನುಸರಿಸಬೇಕಾದ ನಿಯಮಗಳು ಮತ್ತು ನಿರ್ದಿಷ್ಟ ಮಾರ್ಗಸೂಚಿಗಳನ್ನು ರೂಪಿಸುವಂತೆ ಅರ್ಜಿಯಲ್ಲಿ ಮನವಿ ಮಾಡಲಾಗಿತ್ತು.

2025ರ ಏಪ್ರಿಲ್ 17ರಿಂದ 19ರವರೆಗೆ ನಡೆದ ಸಿಇಟಿ ಪರೀಕ್ಷೆಯಲ್ಲಿ ಪವಿತ್ರ ಜನಿವಾರ ಧರಿಸಿದ್ದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ಅರ್ಜಿ ಸಲ್ಲಿಸಲಾಗಿತ್ತು.

ಸಾಮಾನ್ಯ ಪ್ರವೇಶ ಪರೀಕ್ಷೆ (CET) ವೇಳೆ ವಿದ್ಯಾರ್ಥಿಗಳು ಧರಿಸಿರುವ ಪವಿತ್ರ ಜನಿವಾರವನ್ನು ತೆಗೆಸುವಂತೆ ಯಾವುದೇ ಸೂಚನೆ ಅಥವಾ ಮಾರ್ಗಸೂಚಿ ನೀಡಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸ್ಪಷ್ಟಪಡಿಸಿರುವುದನ್ನು ದಾಖಲಿಸಿಕೊಂಡ ಕರ್ನಾಟಕ ಹೈಕೋರ್ಟ್, ರಾಜ್ಯಾದ್ಯಂತ ಪರೀಕ್ಷೆಗಳನ್ನು ವ್ಯವಸ್ಥಿತವಾಗಿ ಮತ್ತು ಏಕರೂಪವಾಗಿ ನಡೆಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿದೆ. ಅಲ್ಲದೆ, ಪರೀಕ್ಷಾ ಮೇಲ್ವಿಚಾರಣೆಗೆ ಸಂಬಂಧಿಸಿದಂತೆ ಆಯುಕ್ತರು ಮತ್ತು ಉಪ ಅಧೀಕ್ಷಕರಿಗೆ ಸೂಕ್ತ ಸೂಚನೆಗಳನ್ನು ನೀಡುವಂತೆಯೂ ತಿಳಿಸಿದೆ.

ಅರ್ಜಿದಾರರ ಪರ ವಕೀಲರು, ಸಿಇಟಿ ಪರೀಕ್ಷೆಗೆ ಜನಿವಾರ ಧರಿಸಿ ಬಂದಿದ್ದ ಕೆಲವು ವಿದ್ಯಾರ್ಥಿಗಳಿಗೆ ಆಯ್ದ ರೀತಿಯಲ್ಲಿ ಅದನ್ನು ಧರಿಸಲು ಅವಕಾಶ ನಿರಾಕರಿಸಿದ ಘಟನೆಗಳು ನಡೆದಿವೆ. ಇದು ತಾರತಮ್ಯದಿಂದ ಕೂಡಿದೆ ಎಂದು ವಾದಿಸಿದರು. 2025ರಲ್ಲಿ ರಿಟ್ ಅರ್ಜಿ ಸಲ್ಲಿಸಿದ ಬಳಿಕವೂ ಇಂತಹ ಘಟನೆಗಳು ನಡೆದಿವೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯದ ಮೊರೆ ಹೋಗಲಾಗಿದೆ ಎಂದು ತಿಳಿಸಿದರು.

ಇದಕ್ಕೆ ಪ್ರತಿಯಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಲ್ಲಿಸಿದ ಆಕ್ಷೇಪಣೆಯಲ್ಲಿ, ಪ್ರತಿ ಜಿಲ್ಲೆಯಲ್ಲೂ ಪ್ರವೇಶ ಪರೀಕ್ಷೆಯ ಮುಖ್ಯ ಮೇಲ್ವಿಚಾರಕರಾಗಿ ಜಿಲ್ಲಾಧಿಕಾರಿಗಳು ಕಾರ್ಯನಿರ್ವಹಿಸುತ್ತಾರೆ. ಪರೀಕ್ಷೆ ನಡೆಸಲು ಜಿಲ್ಲಾಧಿಕಾರಿಗಳಿಗೆ ನೆರವಾಗುವ ಉದ್ದೇಶದಿಂದ ಎಲ್ಲ ಜಿಲ್ಲೆಗಳಲ್ಲಿ ಉಪ ಮುಖ್ಯ ಮೇಲ್ವಿಚಾರಕರನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿತು.

ವಿದ್ಯಾರ್ಥಿಗಳು ಪರೀಕ್ಷೆಯ ಉಡುಗೆ ಸಂಹಿತೆಗೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಪಾಲಿಸಬೇಕು. ಆದರೆ, ವಿದ್ಯಾರ್ಥಿಗಳು ಧರಿಸಿರುವ ಪವಿತ್ರ ಜನಿವಾರವನ್ನು ತೆಗೆದುಹಾಕುವಂತೆ ಯಾವುದೇ ಸೂಚನೆ ಅಥವಾ ಮಾರ್ಗಸೂಚಿಗಳನ್ನು ನೀಡಿಲ್ಲ. ಇಂತಹ ಘಟನೆಗಳು ವರದಿಯಾದ ಸಂದರ್ಭದಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದೂ ಪ್ರಾಧಿಕಾರ ಸ್ಪಷ್ಟಪಡಿಸಿತು.

ಈ ಪ್ರಕರಣವನ್ನು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ ಮತ್ತು ಕರ್ನಾಟಕ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವೂ ಗಂಭೀರವಾಗಿ ಪರಿಗಣಿಸಿವೆ.

ಈ ಎಲ್ಲ ಅಂಶಗಳನ್ನು ಪರಿಗಣಿಸಿದ ಹೈಕೋರ್ಟ್, ರಾಜ್ಯದಾದ್ಯಂತ ಪರೀಕ್ಷೆಗಳನ್ನು ಸರಿಯಾಗಿ ನಡೆಸಲು ಅಗತ್ಯವಿರುವ ಎಲ್ಲ ವ್ಯವಸ್ಥೆಗಳನ್ನು ಏಕರೂಪವಾಗಿ ಕಲ್ಪಿಸುವ ನಿಟ್ಟಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಲೇವಾರಿ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

West Asia Conflict ಎಫೆಕ್ಟ್: ರಫ್ತುದಾರರಿಗೆ ತೆರಿಗೆ ಬಿಸಿ; Diesel-ATF ರಫ್ತಿನ ಮೇಲಿನ Windfall ತೆರಿಗೆ ಹೆಚ್ಚಿಸಿದ ಕೇಂದ್ರ ಸರ್ಕಾರ, ಪೆಟ್ರೋಲ್‌ಗೆ ಶೂನ್ಯ ಸುಂಕ ಮುಂದುವರಿಕೆ..!

ಟ್ರಂಪ್, ಮಸ್ಕ್ ಬೆಂಬಲವಿದ್ದರೂ Jensen Huangಗೆ ಶಾಕ್; 'ಕಮ್‌ಬ್ಯಾಕ್' ಕನಸಿಗೆ ಬ್ರೇಕ್, ಕಂಪನಿ ನಿಯಮಾವಳಿಗಳೇ ಮುಖ್ಯ ಎಂದ Nvidia..!

APP ಆಧಾರಿತ ಕ್ಯಾಬ್‌ ದರ ದಂಧೆಗೆ ಬ್ರೇಕ್: ಮೀಟರ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ, ಇನ್ಮುಂದೆ ಮನಬಂದಂತೆ ದರ ವಸೂಲಿ ಮಾಡುವಂತಿಲ್ಲ..!

ದೇಶದ ಆರ್ಥಿಕತೆಗೆ ಬಲ: ನಿರುದ್ಯೋಗ ಪ್ರಮಾಣದಲ್ಲಿ ಇಳಿಕೆ; ಗ್ರಾಮೀಣ ಪ್ರದೇಶದಲ್ಲಿ ಶೇ.4.2, ನಗರದಲ್ಲಿ ಶೇ.6.7ಕ್ಕೆ ಕುಸಿತ..!

ಮೇಕೆದಾಟು ಯೋಜನೆ DPRಗೆ ಶೀಘ್ರ ಅನುಮೋದನೆ ನೀಡಿ: ಪ್ರಧಾನಿ ಮೋದಿಗೆ ದೇವೇಗೌಡ ಪತ್ರ