ಬಾಗಲೂರು ಬಳಿ ಕಾರಿನಲ್ಲಿ ವ್ಯಕ್ತಿಯ ಶವ ಪತ್ತೆ 
ರಾಜ್ಯ

ಬೆಂಗಳೂರು: ಬಾಗಲೂರು ಬಳಿ ಕಾರಿನಲ್ಲಿ ವ್ಯಕ್ತಿಯ ಶವ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಗುಂಡಿಕ್ಕಿ ಹತ್ಯೆ ಶಂಕೆ!

ಇಂದು ಬೆಳಗ್ಗೆ ಮಂಚಪ್ಪನಹಳ್ಳಿಯ ನಿರ್ಜನ ಪ್ರದೇಶದಲ್ಲಿ ನಿಂತಿದ್ದ ಕಾರಿನ ಮುಂದಿನ ಸೀಟಿನಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದ್ದು, ಇದೀಗ ವ್ಯಕ್ತಿಯ ಗುರುತು ಸಹ ಪತ್ತೆಯಾಗಿದೆ.

ಬೆಂಗಳೂರು: ಬೆಂಗಳೂರಿನ ಬಾಗಲೂರು ಸಮೀಪದ ಮಂಚಪ್ಪನಹಳ್ಳಿಯ ನಿರ್ಜನ ಪ್ರದೇಶದಲ್ಲಿ ಕಾರಿನೊಳಗೆ ಮಂಗಳವಾರ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ್ದು, ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಇಂದು ಬೆಳಗ್ಗೆ ಮಂಚಪ್ಪನಹಳ್ಳಿಯ ನಿರ್ಜನ ಪ್ರದೇಶದಲ್ಲಿ ನಿಂತಿದ್ದ ಕಾರಿನ ಮುಂದಿನ ಸೀಟಿನಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದ್ದು, ಇದೀಗ ವ್ಯಕ್ತಿಯ ಗುರುತು ಸಹ ಪತ್ತೆಯಾಗಿದೆ.

ಮೃತ ವ್ಯಕ್ತಿಯನ್ನು ಬನ್ನೇರಘಟ್ಟ ರಸ್ತೆ ನಿವಾಸಿ ಇಮ್ರಾನ್ ಪಾಷ ಎಂದು ಗುರುತಿಸಲಾಗಿದೆ. ಆದ್ರೆ, ಮೃತ ಇಮ್ರಾನ್ ಪಾಷ ಹಣೆಗೆ ಗಾಯವಾಗಿರುವುದು ಕಂಡುಬಂದಿದ್ದು, ಸ್ಥಳದಲ್ಲಿ ಬುಲೆಟ್ ಸಹ ಸಿಕ್ಕಿದೆ. ಹೀಗಾಗಿ ಗುಂಡಿಕ್ಕಿ ಹತ್ಯೆ ಮಾಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಇನ್ನೊಂದೆಡೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಅನುಮಾನಗಳು ವ್ಯಕ್ತವಾಗಿದ್ದು, ಈ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ನಿಂತಿದ್ದ ಕಾರಿನನಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಕಂಡು ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆಯೇ ಬಾಗಲೂರು ಠಾಣೆಯ ಪೊಲೀಸರು ಹಾಗೂ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಕಾರಿನೊಳಗೆ ಗುಂಡೇಟಿನಿಂದ ಮೃತಪಟ್ಟ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

ಈ ಪ್ರಕರಣ ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದ್ದು, ಆತ್ಮಹತ್ಯೆಯೇ? ಅಥವಾ ದುಷ್ಕರ್ಮಿಗಳ ದಾಳಿಯಿಂದ ಹತ್ಯೆಯಾಗಿದೆಯೇ ಎಂಬುದರ ಕುರಿತು ತನಿಖೆ ಆರಂಭಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಮೃತ ಇಮ್ರಾನ್ ಪಾಷ ಸ್ಕ್ರಾಪ್ ಬ್ಯುಸಿನೆಸ್ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಮೆಲ್ನೋಟಕ್ಕೆ ಶೂಟ್ ಮಾಡಿ ಮರ್ಡರ್ ಮಾಡಿರುವ ರೀತಿ ಕಂಡು ಬಂದಿದ್ದು, FSL ತಂಡ ಸಹ ಸ್ಥಳಕ್ಕೆ ಬಂದು ಪರಿಶೀಲನೆ ಮಾಡುತ್ತಿದ್ದಾರೆ ಎಂದು ಜಂಟಿ ಪೊಲೀಸ್ ಆಯುಕ್ತ ರಮೇಶ್ ಬಾನೂತ್‌ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮನಿಲಾದಲ್ಲಿ ಕ್ವಾಡ್ ಶೃಂಗಸಭೆ 2026: ಪ್ರಧಾನಿ ಮೋದಿ ಗ್ರೇಟ್ ಲೀಡರ್, 'ವೆರಿ ಟಫ್ ಮ್ಯಾನ್' ಎಂದ ಡೊನಾಲ್ಡ್ ಟ್ರಂಪ್!

'ಅಪ್ಪನ ತೊಡೆಯ ಮೇಲೆ ಅಮ್ಮ' ಹೇಳಿಕೆ: BJP, RSS ಮನಸ್ಸಿನಲ್ಲಿ ದ್ವೇಷ ತುಂಬಿಕೊಂಡಿವೆ - ರಾಹುಲ್ ಗಾಂಧಿ ಕಿಡಿ!

IPLಗೂ ವಿದಾಯ: 'ನನ್ನ ಹೆಸರನ್ನೂ ಸೇರಿಸಿಬಿಡಿ': MS ಧೋನಿ ಭಾವುಕ ಸಂದೇಶ ಕೇಳಿ CSK ಮ್ಯಾನೇಜ್ ಮೆಂಟ್ ಸ್ಥಬ್ಧ!

IPL ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ MS ಧೋನಿ: ಅವರ ಮುಂದಿನ ನಡೆ ಏನು?

Tanishq ದರೋಡೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಆರೋಪಿ ಸುಳಿವು ಕೊಟ್ಟ tattoo, ಯೂಟ್ಯೂಬರ್ ಕೊನೆಗೂ ಅಂದರ್, ಪ್ರೇಯಸಿಯೂ ವಶಕ್ಕೆ!