ಸೈಯದ್ ಎಚ್ 
ರಾಜ್ಯ

ಬೆಂಗಳೂರಿನಲ್ಲಿ ಭಯಾನಕ ಕೃತ್ಯ: ರಸ್ತೆಯಲ್ಲೇ ವ್ಯಕ್ತಿಯ ಕೈಕಾಲು ಕಟ್ಟಿ ಬೆಂಕಿ ಹಚ್ಚಿದ ದುಷ್ಕರ್ಮಿಗಳು; ಚಿಕಿತ್ಸೆ ಫಲಿಸದೆ ಸಾವು!

ಸುಟ್ಟ ಗಾಯಗಳೊಂದಿಗೆ ರಸ್ತೆ ಬದಿ ಬಿದ್ದಿದ್ದ 45 ವರ್ಷದ ತ್ಯಾಜ್ಯ ಸಂಗ್ರಹಕಾರನನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಂಜೆ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ ಹಾಡುಹಗಲೇ ಭಯಾನಕ ಕೊಲೆ ನಡೆದಿದ್ದು, ದುಷ್ಕರ್ಮಿಗಳು ನಡು ರಸ್ತೆಯಲ್ಲೇ ವ್ಯಕ್ತಿಯ ಕೈಕಾಲುಗಳನ್ನು ಕಟ್ಟಿ, ಪೆಟ್ರೋಲ್ ಸುರಿದು ಬೆಂಕಿ ಪರಾರಿಯಾಗಿದ್ದಾರೆ.

ಸುಟ್ಟ ಗಾಯಗಳೊಂದಿಗೆ ರಸ್ತೆ ಬದಿ ಬಿದ್ದಿದ್ದ 45 ವರ್ಷದ ತ್ಯಾಜ್ಯ ಸಂಗ್ರಹಕಾರನನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಂಜೆ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಮಾನವೀಯ ಘಟನೆ ನಡೆದಿದ್ದು, ಮೃತ ವ್ಯಕ್ತಿಯನ್ನು ಸೈಯದ್ ಎಚ್. ಎಂದು ಗುರುತಿಸಲಾಗಿದೆ.

ಪೊಲೀಸರ ಪ್ರಕಾರ, ಬೆಳಗ್ಗೆ 6 ಗಂಟೆ ಸುಮಾರಿಗೆ ಸ್ಥಳೀಯರು ಆತನನ್ನು ಕೈಕಾಲು ಕಟ್ಟಿದ ಸ್ಥಿತಿಯಲ್ಲಿ ಗಮನಿಸಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಇಂದು ಬೆಳಗ್ಗೆ ಗಿರಿನಗರ ವ್ಯಾಪ್ತಿಯ ರಸ್ತೆಯಲ್ಲಿ ವ್ಯಕ್ತಿಯೊಬ್ಬರು ಸುಟ್ಟ ಗಾಯಗಳಿಂದ ನರಳಾಡುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿದೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಗಿರಿನಗರ ಪೊಲೀಸರು ಗಾಯಾಳುವನ್ನು ರಕ್ಷಿಸಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ.

ವಿಕ್ಟೋರಿಯಾ ಆಸ್ಪತ್ರೆಯ ಸುಟ್ಟಗಾಯಗಳ ವಿಭಾಗದಲ್ಲಿ ಡಾ. ಯೋಗೇಶ್ವರಪ್ಪ ನೇತೃತ್ವದ ವೈದ್ಯರ ತಂಡ ಗಾಯಾಳುವಿಗೆ ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ನೀಡುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೃತ ವ್ಯಕ್ತಿಗೆ ಕುಟುಂಬಸ್ಥರು ಅಥವಾ ಸಂಬಂಧಿಕರು ಯಾರೂ ಇಲ್ಲವೆಂದು ತಿಳಿದುಬಂದಿದ್ದು, ಆತ ರಸ್ತೆ ಬದಿಯಲ್ಲೇ ಕಾಲ ಕಳೆಯುತ್ತಿದ್ದ ಎಂದು ಅಧಿಕಾರಿ ಹೇಳಿದ್ದಾರೆ.

"ಆತನಿಗೆ ಸ್ವಂತ ಮನೆಯಾಗಲಿ, ಫೋನ್ ಆಗಲಿ ಅಥವಾ ಗುರುತಿನ ಚೀಟಿಯಾಗಲಿ ಇರಲಿಲ್ಲ. ಸ್ಥಳೀಯರ ಪ್ರಕಾರ, ಆತ ಹಲವು ವರ್ಷಗಳಿಂದ ಪಾದರಾಯನಪುರ ಪ್ರದೇಶದಲ್ಲಿ ವಾಸಿಸುತ್ತಿದ್ದ" ಎಂದು ಅವರು ಹೇಳಿದರು.

ಘಟನೆಗೆ ಕಾರಣರಾದವರನ್ನು ಪತ್ತೆಹಚ್ಚಲು ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದು, ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಸವಣ್ಣನವರ ಗೌರವಕ್ಕೆ ಧಕ್ಕೆ ಆರೋಪ: ಲೇಖಕ ರವಿ ಹಂಜ್ 'ಬಸವಮಂಟಪ' ಕೃತಿ ಮುಟ್ಟುಗೋಲಿಗೆ ಸಂಪುಟ ಒಪ್ಪಿಗೆ

ಇತಿಹಾಸ ಸೃಷ್ಟಿಸಿದ ಬುಮ್ರಾ: ಶ್ರೀನಾಥ್ ಹಿಂದಿಕ್ಕಿ ಭಾರತದ 10ನೇ ಯಶಸ್ವಿ ಟೆಸ್ಟ್ ಬೌಲರ್ ಸ್ಥಾನಕ್ಕೆ ಎಂಟ್ರಿ!

ಸಂಧಾನ ಸಭೆ ವಿಫಲ: ಆಶಾ ಕಾರ್ಯಕರ್ತೆಯರ ಬಗ್ಗೆ ಸರ್ಕಾರಕ್ಕೆ ಸಹಾನುಭೂತಿ ಇದೆ, ಹೋರಾಟ ಕೈಬಿಡುವಂತೆ ಸಿಎಂ ಶಿವಕುಮಾರ್ ಮನವಿ!

'ಬಸವ ಮಂಟಪ' ಕೃತಿ ವಿರುದ್ಧ ಭುಗಿಲೆದ್ದ ಆಕ್ರೋಶ: ಧರ್ಮ ವಿರೋಧಿಗಳು ನನ್ನ ವಾದ ಒಪ್ಪಲ್ಲ- ಲೇಖಕ ರವಿ ಹಂಜ್ ಸ್ಪಷ್ಟನೆ

'ಪರಮಾಣು ಯುದ್ಧವನ್ನು ಗೆಲ್ಲಲು ಸಾಧ್ಯವಿಲ್ಲ, ಅದನ್ನು ಎಂದಿಗೂ ಮಾಡಬಾರದು': ಶಾಂತಿ ಘೋಷಣೆಗೆ ಟ್ರಂಪ್, ಪುಟಿನ್, ಕ್ಸಿ ಜಿನ್ ಪಿಂಗ್ ಸಹಿ