ಸಾಂಕೇತಿಕ ಚಿತ್ರ 
ರಾಜ್ಯ

'ಡಿಜಿಟಲ್ ಅರೆಸ್ಟ್': ಮಾದಕ ವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸಿಲುಕಿಸುವುದಾಗಿ ಬೆದರಿಸಿ ₹15.98 ಲಕ್ಷ ದೋಚಿದ ವಂಚಕರು!

ತಾನು ದೆಹಲಿಯ ಸಿಬಿಐ ಪೊಲೀಸ್ ಅಧಿಕಾರಿ ಎಂದು ಪರಿಚಯಿಸಿಕೊಂಡ ಕರೆ ಮಾಡಿದ ವ್ಯಕ್ತಿಯು, ದೂರುದಾರರನ್ನು ತಕ್ಷಣವೇ ಬಂಧಿಸಲು ನ್ಯಾಯಾಲಯವು ಆದೇಶ ಹೊರಡಿಸಿದೆ ಎಂದು ತಿಳಿಸಿದ್ದಾನೆ.

ಉಡುಪಿ: ಸಿಬಿಐ ಮತ್ತು ದೆಹಲಿ ಪೊಲೀಸ್ ಅಧಿಕಾರಿಗಳಂತೆ ವರ್ತಿಸಿದ ವಂಚಕರು, ಅಕ್ರಮ ಹಣ ವರ್ಗಾವಣೆ ಹಾಗೂ ಮಾದಕ ವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸಿಲುಕಿಸುವುದಾಗಿ ಬೆದರಿಸಿ ವ್ಯಕ್ತಿಯೊಬ್ಬರನ್ನು 'ಡಿಜಿಟಲ್ ಅರೆಸ್ಟ್' ಮಾಡಿ ಅವರಿಂದ 15.98 ಲಕ್ಷ ರೂಪಾಯಿಗಳನ್ನು ದೋಚಿರುವ ಘಟನೆ ನಡೆದಿದೆ.

ದೂರುದಾರರಿಗೆ ಅಕ್ಟೋಬರ್ 18 ರಂದು ವಂಚಕರಿಂದ ಕರೆ ಬಂದಿದೆ. ದೆಹಲಿಯಲ್ಲಿ ದೂರುದಾರರ ಹೆಸರಿನಲ್ಲಿರುವ ಐಸಿಐಸಿಐ ಬ್ಯಾಂಕ್ ಪಾಸ್‌ಬುಕ್ ವಶಪಡಿಸಿಕೊಳ್ಳಲಾಗಿದ್ದು, ಪಂಕಜ್ ಶರ್ಮಾ ಎಂಬ ವ್ಯಕ್ತಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ, ಮಾದಕ ವಸ್ತು ಕಳ್ಳಸಾಗಣೆ ಮತ್ತು ಮಕ್ಕಳ ಅಪಹರಣ ಪ್ರಕರಣಕ್ಕೆ ಲಿಂಕ್ ಆಗಿದೆ ಎಂದು ವಂಚಕರು ನಂಬಿಸಿದ್ದಾರೆ.

ತಾನು ದೆಹಲಿಯ ಸಿಬಿಐ ಪೊಲೀಸ್ ಅಧಿಕಾರಿ ಎಂದು ಪರಿಚಯಿಸಿಕೊಂಡ ಕರೆ ಮಾಡಿದ ವ್ಯಕ್ತಿಯು, ದೂರುದಾರರನ್ನು ತಕ್ಷಣವೇ ಬಂಧಿಸಲು ನ್ಯಾಯಾಲಯವು ಆದೇಶ ಹೊರಡಿಸಿದೆ ಎಂದು ತಿಳಿಸಿದ್ದಾನೆ. ದೂರುದಾರರು ತಕ್ಷಣವೇ ದೆಹಲಿಗೆ ಬರಬೇಕು ಅಥವಾ ವಿಡಿಯೋ ಕರೆ ಮೂಲಕ ತನಿಖೆಗೆ ಸಹಕರಿಸಬೇಕು ಎಂದು ಸೂಚಿಸಿದ್ದಾನೆ.

ನಂತರ, ವಂಚಕ ದೂರುದಾರರ ಬಳಿಯಿರುವ ನಗದು, ಚಿನ್ನ ಮತ್ತು ಬ್ಯಾಂಕ್ ಖಾತೆಗಳ ವಿವರಗಳನ್ನು ಪಡೆದುಕೊಂಡಿದ್ದಾನೆ. ಅಲ್ಲದೆ, ತಮ್ಮ ಬಳಿಯಿರುವ ಎಲ್ಲ ಹಣವನ್ನು ತಾವು ನೀಡಿದ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸುವಂತೆ ಸೂಚಿಸಿದ್ದಾನೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Arnab ಚಂಡಮಾರುತ ಸಂಕಷ್ಟದಲ್ಲಿ ನೆರವು; ಕರ್ನಾಟಕಕ್ಕೆ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಧನ್ಯವಾದ; ಡಿಕೆಶಿ ಹೇಳಿದ್ದೇನು?

ಮನರೇಗಾ ಯೋಜನೆಯ ₹13.57 ಲಕ್ಷ ಗುಳುಂ; ಕೆಲಸ ಮಾಡದೆ ಸರ್ಕಾರಿ ಹಣ ಲೂಟಿ, ಇಬ್ಬರು ಆರೋಪಿಗಳಿಗೆ ಜೈಲು ಶಿಕ್ಷೆ!

ಊಟಿಯಲ್ಲಿ ಮೈಕೊರೆಯುವ ಚಳಿ; 5.9 ಡಿಗ್ರಿಗೆ ಕುಸಿದ ಕನಿಷ್ಠ ತಾಪಮಾನ, ಹಿಮದ ಹೊದಿಕೆಯಲ್ಲಿ ಗಿರಿಧಾಮ

Gold rate: ಭಾರಿ ಕುಸಿತದ ಬಳಿಕ ಚಿನ್ನದ ದರ ಮತ್ತೆ ಏರಿಕೆ; ಬೆಂಗಳೂರಿನಲ್ಲಿ 10 ಗ್ರಾಂ ಚಿನ್ನದ ದರ ಎಷ್ಟಿದೆ? ಬೆಳ್ಳಿ ಬೆಲೆಯಲ್ಲೂ ಬದಲಾವಣೆ, ಇಲ್ಲಿದೆ ಸಂಪೂರ್ಣ ಪಟ್ಟಿ!

ಮತದಾರರ ಹೆಸರು ಅಳಿಸಲು ಫಾರ್ಮ್-7 ದುರ್ಬಳಕೆ ಆರೋಪ; ಬಿಜೆಪಿ ಬೂತ್ ಏಜೆಂಟರಿಗೆ ಹೈಕೋರ್ಟ್ ರಿಲೀಫ್, FIRಗೆ ತಡೆ